NEWSನಮ್ಮಜಿಲ್ಲೆನಮ್ಮರಾಜ್ಯ

2025 ಡಿಸೆಂಬರ್‌ 31ರವರೆಗೆ ವಿದ್ಯುತ್ ಚಾಲಿತ ಬಸ್‌ಗಳ ಗುತ್ತಿಗೆದಾರ ಕಂಪನಿಗಳಿಗೆ 657.14 ಕೋಟಿ ರೂ. ಪಾವತಿಸಿದ BMTC ಸಂಸ್ಥೆ

ಸಾಂದರ್ಭಿಕ ಚಿತ್ರ.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯುತ್ ಚಾಲಿತ ವಾಹನಗಳ ಆಚರಣೆಗೊಳಿಸಿದ ದಿನಾಂಕದಿಂದ 31.12.2025ರವರೆಗೆ ಘಟಕವಾರು ವಿದ್ಯುತ್ ಚಾಲಿತ ವಾಹನಗಳು ಆಚರಣೆ ಮಾಡಿದ ಕಂಪನಿಯವರಿಗೆ ನಿಗಮದಿಂದ 657,14,09,293 ರೂಪಾಯಿಗಳನ್ನು ಕಂಪನಿಯವರಿಗೆ ಪಾವತಿಸಲಾಗಿದೆ.

ಬಿಎಂಟಿಸಿ ಸಾರ್ವಜನಿಕ ಮಾಹಿತಿ ಅಧಿಕಾರಿ/ ಲೆಕ್ಕಾಧಿಕಾರಿ ಶ್ರೀನಿವಾಸ್‌ ಎಂಬುವರು ಆರ್‌ಟಿಐಯಡಿ ಕೇಳಿದ ಮಾಹಿತಿಯಲ್ಲಿ ಬಹಿರಂಗಪಡಿಸಿದ್ದಾರೆ.

ಶ್ರೀನಿವಾಸ್‌ ಅವರು ಮಾಹಿತಿ ಹಕ್ಕು ಕಾಯ್ದೆ 2005 ರ ಅಡಿಯಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ಓಡಾಟದಿಂದ ಆಗುತ್ತಿರುವ ಲಾಭನಷ್ಟದ ದೃಢೀಕೃತ ಮಾಹಿತಿ ನೀಡುವಂತೆ ಕೇಳಿದ್ದರು.

ಅದರಂತೆ ಸಂಸ್ಥೆಯ ಬಿಎಂಟಿಸಿ ಸಾರ್ವಜನಿಕ ಮಾಹಿತಿ ಅಧಿಕಾರಿ ವಿದ್ಯುತ್ ಚಾಲಿತ ವಾಹನಗಳ 31.12.2025ರವರೆಗೆ ಆಚರಣೆಗೊಳಿಸಿದ ಒಟ್ಟು ಮೊತ್ತ 657,14.09.293 ರೂ.ಗಳನ್ನು ಕಂಪನಿಯವರಿಗೆ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಒಂದು ವಿಷಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮಾತ್ರ ಮಾಹಿತಿ ಹಕ್ಕು ಕಾಯ್ದೆಯಡಿ ಒಂದು ಅರ್ಜಿಯಲ್ಲಿ ಕೋರಬಹುದಾಗಿದ್ದು, ಘಟಕಗಳು ಗಳಿಸಿದ ಲಾಭನಷ್ಟದ ಮಾಹಿತಿಗಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿರುವ ಅಧಿಕಾರಿ ಲಾಭ- ನಷ್ಟದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಒಟ್ಟಾರೆ ಕಳೆದ ಫೆ.20ರಂದು ಬಿಎಂಟಿಸಿ 31.12.2025ರವರೆಗೆ ಒಟ್ಟು ಮೊತ್ತ 657,14.09.293 ರೂ.ಗಳನ್ನು ಕಂಪನಿಯವರಿಗೆ ಪಾವತಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಆ ಬಸ್‌ಗಳಿಂದ ಆಗಿರುವ ಆದಾಯ ನಷ್ಟದ ಬಗ್ಗೆ ಯಾವುದೇ ಮಾಹಿತಿ ನೀಡದ ಕಾರಣ ಶ್ರೀನಿವಾಸ್‌ ಅವರು ಮತ್ತೊಂದು ಅರ್ಜಿ ಹಾಕ್ಕಿದ್ದು ಈ ಮಾಹಿತಿಯೂ ಅತೀ ಶೀಘ್ರದಲ್ಲೇ ಬರಲಿದೆ.

Megha
the authorMegha

Leave a Reply

error: Content is protected !!
Latest news
ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ ಇದುವರೆಗೂ ನಡೆಸಿರುವ ಹೋರಾಟ ವ್ಯರ್ಥವಾಗಲು ಬಿಡುವುದಿಲ್ಲ: ಕೇಂದ್ರ ಸರ್ಕಾರದ ವಿರುದ್ಧ EPS ನಿವೃತ್ತರು ಆಕ್ರೋಶ ರಾತ್ರಿ ಘಟಕದ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದ KSRTC ಬಸ್‌ ಕದ್ದು ಅಪಘಾತ ಎಸಗಿ 1.5 ಕಿಮೀ ದೂರದಲ್ಲಿ ಬಿಟ್ಟು ಪರಾರಿಯಾ... KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನ...