Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯ

ನವರಸ ನಾಯಕ ಜಗ್ಗೇಶ್ – ದುನಿಯಾ ವಿಜಿ ನಡುವೆ ಕಪ್ಪು ಬಿಳುಪಿನ ಚರ್ಚೆ: ಅಸಮಾಧಾನ ಸಮಾಧಾನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ದಿನದಿನವೂ ಡ್ರಗ್ಸ್ ದಂಧೆ ಹಿರಿತೆರೆ ಮತ್ತು ಕಿರುತೆರೆ ನಟ ನಟಿಯರಿಗೆ ಸುತ್ತಿಕ್ಕೊಳ್ಳುತ್ತಿರುವ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಹಾಗೂ ನಟ ದುನಿಯಾ ವಿಜಿ ನಡುವಿನ ಸಂಭಾಷಣೆಯೊಂದು ಚಿಂತನೆಗೆ ಹಚ್ಚಿದೆ. “ಅಣ್ಣ ನಾವು ನೀವು ಕಪ್ಪಾಗಿ ಹುಟ್ಟಿದ್ದು ಕರ್ಮನಾ?” ಎಂದು ವಿಜಯ್ ಜಗ್ಗೇಶ್ ಅವರನ್ನು ಪ್ರಶ್ನಿಸಿದ್ದು ಇದಕ್ಕೆ ಜಗ್ಗೇಶ್ ನೀಡಿರುವ ಉತ್ತರದ ಬಗ್ಗೆ ಜಗ್ಗೇಶ್ ತಮ್ಮ ಇನ್ಸ್ಟಾಗ್ರಾಂ ಪುಟದಲ್ಲಿ ಬೇಸರ ಮತ್ತು ಸಂತಸ ಮಿಶ್ರಿತವಾಗಿ ಬರೆದುಕೊಂಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅವರೆ ಬರೆದಿವ ವಿವರ ಇಲ್ಲಿದೆ: ಇಂದು 9ಘಂಟೆಗೆ #ದುನಿಯವಿಜಿ ಕರೆಮಾಡಿ ಅಣ್ಣ ನಾವು ನೀವು ಕಪ್ಪಾಗಿ ಹುಟ್ಟಿದ್ದು ಕರ್ಮನಾ? ಎಂದು ದುಃಖದಿಂದ ಕೇಳಿಬಿಟ್ಟ!ನಾನು ಯಾಕೆ ಈ ಪ್ರಶ್ನೆ ಎಂದು ಕೇಳಿದೆ! ಅದಕ್ಕೆ ಅವನು ಹೇಳಿದ್ದು!! ನೋಡಿ ಅಣ್ಣ ನಾವು ಎಷ್ಟೇ ಶ್ರಮಪಟ್ಟು ಜೀವನ ಕಟ್ಟಿಕೊಂಡರು ಸಮಾಜ ಚರ್ಮದ ಬಣ್ಣದಿಂದ ನಮ್ಮನ್ನು ಅಳೆಯುತ್ತಾರೆ! ನಾವು ನೂರು ಶ್ರೇಷ್ಠ ಸಾಧನೆಮಾಡಿ ಸಣ್ಣತಪ್ಪು ಅರಿಯದಂತೆ ನಮ್ಮಿಂದ ಆಗಿಬಿಟ್ಟರೆ ನಮ್ಮ ಸಾಧನೆ ಶೂನ್ಯಮಾಡಿ ಹಂಗಿಸಿಬಿಡುತ್ತಾರೆ!

ಅದೆ ಬಿಳಿ ಚರ್ಮದ ಮನುಜರು ಆಂತರ್ಯವೆಲ್ಲಾ ಕೊಳೆತು ಸಾಧನೆ ಶೂನ್ಯವಾದರು ಅವರ ಬಿಳಿಬಣ್ಣಕ್ಕೆ ಸಮಾಜ ಅವರನ್ನ ನಂಬಿ ಬಿಡುತ್ತಾರೆ ಎಂದ! ನಾನು ಅದಕ್ಕೆ ಉದಾಹರಣೆ ಎಂದು ಕೇಳಿದಾಗ ಡ್ರಗ್ಸ್ ದಂಧೆಯಲ್ಲಿನ ಮಹಾಮಹಿಮರ ಹೆಸರು ಹೇಳಿದ! ಉತ್ತರವಿಲ್ಲದೆ ಕ್ಷಣಕಾಲ ಮೌನವಾಗಿ ನನ್ನ ಮೈಚರ್ಮ ನೋಡಿಕೊಂಡೆ ಕಾರಣ ನಾನು ವಿಜಿಗಿಂತ ಕಪ್ಪು! ಅದಕ್ಕೆ ನಾನು ವಿಜಿಗೆ ಇದ್ದ ಅನುಮಾನ ದುಃಖ ದೂರಮಾಡಲು ಈ ಉದಾಹರಣೆ ಹೇಳಿದೆ…

ನೋಡು ವಿಜಿ ನಾವು ಹುಟ್ಟಿದ್ದು ಮಧ್ಯಮವರ್ಗದ ಗ್ರಾಮೀಣ ಭಾಗದ ಬಡಕುಟುಂಬದ ತಂದೆತಾಯಿ ಉದರದಲ್ಲಿ.! ಅನ್ನಕ್ಕೆ ಕೂಲಿಮಾಡಿ ತಿನ್ನುವ ದೇಹ ಪರಿಸರದಲ್ಲಿ ಬೆಂದು ಕೃಷ್ಣವರ್ಣವಾಗಿರುತ್ತದೆ ಅಂತ ಉದರದಲ್ಲಿ ಕಪ್ಪಾಗಿ ಹುಟ್ಟುವುದು ನಮ್ಮ ಜನ್ಮಾಂತರ ಪುಣ್ಯ! ಜಗಕ್ಕೆಗುರು ಕೃಷ್ಣ ಕಪ್ಪು! ಶತೃಸಂಹಾರಕ ಭೈರವ ಕಪ್ಪು!ಲಯಕಾರಕ ಶಿವ ಕಪ್ಪು!ಕಾಳಿಮಾತೆ ಕಪ್ಪು! ದೇಹಕಪ್ಪಾಗಿದ್ದರು ಪರವಾಗಿಲ್ಲಾ ಆದರೆ ಹೃದಯ ಕಪ್ಪಾಗಿ ಇರಬಾರದು!

ಬಿಳಿಚರ್ಮಕ್ಕೆ ofcourse ಜನ ಮರುಳಾಗೋದು 100% ಸತ್ಯ!ಗುಣವಂತ ಹೆಣ್ಣು ಕಪ್ಪಗಿದ್ದರೆ ಮೂಗುಮುರಿದು ಬಿಳಿಹೆಣ್ಣ ಬೇಗ ಒಪ್ಪಿ ಮದುವೆ ಆಗಿ ನಂತರ ಜೀವನ ಪೂರ ಬಾಯಿಬಡಿದುಕೊಂಡು ಬಾಳುವವರ ಉದಾಹರಣೆಯಾಗಿ ಬಹಳ ಮಂದಿ ನೋಡಿದ್ದೇವೆ! ವಿಶೇಷವಾಗಿ ನಮ್ಮ ಕಲಾರಂಗದಲ್ಲಿ ಚರ್ಮಬಿಳಿ ಇದ್ದರಂತು ಅವರ ಮೇಲೆ ದೇವತೆ ರಂಬೆ ಕೊಂಬೆ ಕೆರೆಕಟ್ಟೆ ಎಂದು ಹಾಡು ಬರೆದು ಮೆರೆಸುತ್ತಾರೆ!

ಜಾಲತಾಣವೆಲ್ಲಾ ಅಂತ ಬಿಳಿಸುಂದರಿಯೇ ಆವರಿಸಿ ಹಾರಾಡುತ್ತಾರೆ!ಎಷ್ಟೋ ಪ್ರತಿಭೆ ಕಪ್ಪು ಇದ್ದರೆ ಅವಕಾಶ ವಂಚಿತರಾಗುತ್ತಾರೆ.!ಅದು ಅವರವರ ಅದೃಷ್ಟ! ಎಂದು ಸಮಾಧಾನ ಹೇಳಿದೆ!ಅವನು ದೂರವಾಣಿ ಇಟ್ಟಮೇಲೆ ತಲೆಯಲ್ಲಿ ಕಪ್ಪು ಎನ್ನುವ ಹುಳ ಆವರಿಸಿತು! ಮೈಬಣ್ಣ ಕಪ್ಪಗಿದ್ದರು ಪರವಾಗಿಲ್ಲಾ ಚಿಂತನೆ ಅಪರಂಜಿಯಂತೆ ಇರಲಿ..!!ನಾವು ಶವವಾಗಿ ಸುಟ್ಟಾಗ ಕಪ್ಪುಬಿಳಿ ಭೇದವಿಲ್ಲದೆ ದೇಹ ಬೂದಿಯಾಗುತ್ತದೆ.. ಶುಭರಾತ್ರಿ..ಸವಿಗನಸು…. #ದುನಿಯವಿಜಿ…

View this post on Instagram

ಇಂದು 9ಘಂಟೆಗೆ #ದುನಿಯವಿಜಿ ಕರೆಮಾಡಿ ಅಣ್ಣ ನಾವು ನೀವು ಕಪ್ಪಾಗಿ ಹುಟ್ಟಿದ್ದು ಕರ್ಮನಾ? ಎಂದು ದುಃಖದಿಂದ ಕೇಳಿಬಿಟ್ಟ!ನಾನು ಯಾಕೆ ಈ ಪ್ರಶ್ನೆ ಎಂದು ಕೇಳಿದೆ!ಅದಕ್ಕೆ ಅವನು ಹೇಳಿದ್ದು!!ನೋಡಿ ಅಣ್ಣ ನಾವು ಎಷ್ಟೇ ಶ್ರಮಪಟ್ಟು ಜೀವನ ಕಟ್ಟಿಕೊಂಡರು ಸಮಾಜ ಚರ್ಮದ ಬಣ್ಣದಿಂದ ನಮ್ಮನ್ನು ಅಳೆಯುತ್ತಾರೆ!ನಾವು ನೂರು ಶ್ರೇಷ್ಠ ಸಾಧನೆಮಾಡಿ ಸಣ್ಣತಪ್ಪು ಅರಿಯದಂತೆ ನಮ್ಮಿಂದ ಆಗಿಬಿಟ್ಟರೆ ನಮ್ಮ ಸಾಧನೆ ಶೂನ್ಯಮಾಡಿ ಹಂಗಿಸಿಬಿಡುತ್ತಾರೆ!ಅದೆ ಬಿಳಿ ಚರ್ಮದ ಮನುಜರು ಆಂತರ್ಯವೆಲ್ಲಾ ಕೊಳೆತು ಸಾಧನೆ ಶೂನ್ಯವಾದರು ಅವರ ಬಿಳಿಬಣ್ಣಕ್ಕೆ ಸಮಾಜ ಅವರನ್ನ ನಂಬಿ ಬಿಡುತ್ತಾರೆ ಎಂದ!ನಾನು ಅದಕ್ಕೆ ಉದಾಹರಣೆ ಎಂದು ಕೇಳಿದಾಗ ಡ್ರಗ್ಸ್ ದಂದೆಯಲ್ಲಿನ ಮಹಾಮಹಿಮರ ಹೆಸರು ಹೇಳಿದ!ಉತ್ತರವಿಲ್ಲದೆ ಕ್ಷಣಕಾಲ ಮೌನವಾಗಿ ನನ್ನ ಮೈಚರ್ಮ ನೋಡಿಕೊಂಡೆ ಕಾರಣ ನಾನು ವಿಜಿಗಿಂತ ಕಪ್ಪು! ಅದಕ್ಕೆ ನಾನು ವಿಜಿಗೆ ಇದ್ದ ಅನುಮಾನ ದುಃಖ ದೂರಮಾಡಲು ಈ ಉದಾಹರಣೆ ಹೇಳಿದೆ…ನೋಡು ವಿಜಿ ನಾವು ಹುಟ್ಟಿದ್ದು ಮದ್ಯಮವರ್ಗದ ಗ್ರಾಮೀಣಬಾಗದ ಬಡಕುಟುಂಬದ ತಂದೆತಾಯಿ ಉದರದಲ್ಲಿ.! ಅನ್ನಕ್ಕೆ ಕೂಲಿಮಾಡಿ ತಿನ್ನುವ ದೇಹ ಪರಿಸರದಲ್ಲಿ ಬೆಂದು ಕೃಷ್ಣವರ್ಣವಾಗಿರುತ್ತದೆ ಅಂತ ಉದರದಲ್ಲಿ ಕಪ್ಪಾಗಿ ಹುಟ್ಟುವುದು ನಮ್ಮ ಜನ್ಮಾಂತರ ಪುಣ್ಯ! ಜಗಕ್ಕೆಗುರು ಕೃಷ್ಣ ಕಪ್ಪು! ಶತೃಸಂಹಾರಕ ಭೈರವ ಕಪ್ಪು!ಲಯಕಾರಕ ಶಿವ ಕಪ್ಪು!ಕಾಳಿಮಾತೆ ಕಪ್ಪು! ದೇಹಕಪ್ಪಾಗಿದ್ದರು ಪರವಾಗಿಲ್ಲಾ ಆದರೆ ಹೃದಯ ಕಪ್ಪಾಗಿ ಇರಬಾರದು!ಬಿಳಿಚರ್ಮಕ್ಕೆ ofcourse ಜನ ಮರುಳಾಗೋದು 100% ಸತ್ಯ!ಗುಣವಂತಹೆಣ್ಣು ಕಪ್ಪಗಿದ್ದರೆ ಮೂಗುಮುರಿದು ಬಿಳಿಹೆಣ್ಣ ಬೇಗ ಒಪ್ಪಿ ಮದುವೆ ಆಗಿ ನಂತರ ಜೀವನ ಪೂರ ಬಾಯಿಬಡಿದುಕೊಂಡು ಬಾಳುವವರ ಉದಾಹರಣೆಯಾಗಿ ಬಹಳ ಮಂದಿ ನೋಡಿದ್ದೇವೆ! ವಿಶೇಷವಾಗಿ ನಮ್ಮ ಕಲಾರಂಗದಲ್ಲಿ ಚರ್ಮಬಿಳಿ ಇದ್ದರಂತು ಅವರ ಮೇಲೆ ದೇವತೆ ರಂಬೆ ಕೊಂಬೆ ಕೆರೆಕಟ್ಟೆ ಎಂದು ಹಾಡು ಬರೆದು ಮೆರೆಸುತ್ತಾರೆ! ಜಾಲತಾಣವೆಲ್ಲಾ ಅಂತ ಬಿಳಿಸುಂದರಿಯೇ ಆವರಿಸಿ ಹಾರಾಡುತ್ತಾರೆ!ಎಷ್ಟೋ ಪ್ರತಿಭೆ ಕಪ್ಪು ಇದ್ದರೆ ಅವಕಾಶ ವಂಚಿತರಾಗುತ್ತಾರೆ.!ಅದು ಅವರವರ ಅದೃಷ್ಟ! ಎಂದು ಸಮಾಧಾನ ಹೇಳಿದೆ!ಅವನು ದೂರವಾಣಿ ಇಟ್ಟಮೇಲೆ ತಲೆಯಲ್ಲಿ ಕಪ್ಪು ಎನ್ನುವ ಹುಳ ಆವರಿಸಿತು! ಮೈಬಣ್ಣ ಕಪ್ಪಗಿದ್ದರು ಪರವಾಗಿಲ್ಲಾ ಚಿಂತನೆ ಅಪರಂಜಿಯಂತೆ ಇರಲಿ..!!ನಾವು ಶವವಾಗಿ ಸುಟ್ಟಾಗ ಕಪ್ಪುಬಿಳಿ ಬೇದವಿಲ್ಲದೆ ದೇಹ ಬೂದಿಯಾಗುತ್ತದೆ.. ಶುಭರಾತ್ರಿ..ಸವಿಗನಸು…. #ದುನಿಯವಿಜಿ…

A post shared by ???????????????????????????? ???????????????????????????????????????????????????? (@actor_jaggesh) on

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ