NEWSಆರೋಗ್ಯನಮ್ಮರಾಜ್ಯ

ಅಂಕನಹಳ್ಳಿ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಬಳ್ಳಾರಿ ಜಿಲ್ಲೆ ಹೊಸಪೇಟೆಯ ನಿವಾಸಿಗಳಾದ ಕಬ್ಬು ಕಟಾವು ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕ ಕುಟುಂಬದವರ ಮಕ್ಕಳಾದ ಕಾವೇರಿ (1) ಸಂಜಯ್ (2) ಹಾಗೂ ರೋಹಿತ್ (3) ಮೃತ ಮಕ್ಕಳು. ಕಬ್ಬು ಕಟಾವು ಕೆಲಸಕ್ಕೆಂದು ಬಳ್ಳಾರಿಯಿಂದ ಅಂಕನಹಳ್ಳಿಗೆ ಹಲವು ಕಾರ್ಮಿಕರು ಕುಟುಂಬದ ಜತೆಗೆ ಬಂದಿದ್ದರು. ಆದರೆಅಇವರಿಗೆ ವಾಸ ಮಾಡಲು ಯೋಗ್ಯವಾದ ಸುರಕ್ಷಿತ ಸ್ಥಳ ನೀಡಿರಲಿಲ್ಲ ಎನ್ನಲಾಗಿದೆ.

ಹೀಗಾಗಿ ಕಬ್ಬು ಕಟಾವು ಮಾಡುವ ಜಾಗದಲ್ಲೇ ಗುಡಿಸಲು ಹಾಕಿಕೊಂಡು ವಾಸವಿದ್ದರು. ಗುಡಿಸಲಿನ ಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿವೆ.

ಈ ನಡುವೆ ಜಿಲ್ಲಾಡಳಿತ ಸಂಬಂಧಿಸಿದವರನ್ನು ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕು. ಅಲ್ಲದೇ ಮಕ್ಕಳನ್ನು ಕಳೆದುಕೊಂಡ ಕಾರ್ಮಿಕ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಸಿಐಟಿಯು ಜಿಲ್ಲಾ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಈ ಸಂಬಂಧ ಬನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂಇನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ