NEWSನಮ್ಮರಾಜ್ಯರಾಜಕೀಯ

ಭ್ರಷ್ಟಾಚಾರದಲ್ಲಿ ಮುಳುಗಿದೆ ಸಿಎಂ ಬಿಎಸ್‌ವೈ ಕುಟುಂಬ: ಸುರ್ಜೆವಾಲಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ವಸತಿ ಸಮುಚ್ಛಯಗಳ ನಿರ್ಮಾಣದ ಹೆಸರಿನಲ್ಲಿ ಅಂದಾಜು 666 ಕೋಟಿ ರೂ. ಗೋಲ್ಮಾಲ್ ನಡೆದಿದೆ. ಗುತ್ತಿಗೆದಾರನಿಂದ ಮುಖ್ಯಮಂತ್ರಿ ಕುಟುಂಬಕ್ಕೆ ಹಣ ವರ್ಗಾವಣೆಯಾಗಿದೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಆಪಾದಿಸಿದ್ದಾರೆ.

ಈ ಅವ್ಯವಹಾರದಲ್ಲಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಮತ್ತು ಅಳಿಯ ಶಾಮೀಲಾಗಿದ್ದಾರೆ. ಹೀಗಾಗಿ ಸಿಎಂ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಹಣ ವರ್ಗಾವಣೆ ಸಂಬಂಧ ಗುತ್ತಿಗೆದಾರರ ಜತೆ ವಿಜಯೇಂದ್ರ ಮಾತನಾಡಿರುವ ಆಡಿಯೋ ತುಣುಕು ಲಭ್ಯವಿದೆ ಎಂದು ಸುರ್ಜೆವಾಲ ಹೇಳಿದರು.

ಮುಖ್ಯಮಂತ್ರಿಗೆ ತಿಳಿಯದೇ ಈ ಅವ್ಯವಹಾರ ನಡೆಯಲು ಸಾಧ್ಯವಿಲ್ಲ ಹೀಗಾಗಿ ಅಧಿಕಾರದಲ್ಲಿ ಮುಂದುವರಿಯಲು ಸಿಎಂಗೆ ಯಾವುದೇ ನೈತಿಕ ಹಕ್ಕು ಇಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿಯಾಗಿ ನೇಮಕಗೊಂಡ ನಂತರ ಸುರ್ಜೆವಾಲ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡರು.

1 Comment

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ