CrimeNEWS

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಕೊರೊನಾಗೆ ಬಲಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಭಾರತೀಯ ಜನತಾ ಪಕ್ಷದ ಬೆಳಗಾವಿಯ ನಾಯಕ ಹಾಗೂ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ಇಂದು ನಿಧನ ಹೊಂದಿದ್ದಾರೆ.

ಸಂಸದ ಸುರೇಶ್ ಅಂಗಡಿ ಅವರಿಗೆ ಕಳೆದ ವಾರ ಕೋವಿಡ್ ಸೋಂಕು ತಗಲಿತ್ತು. ಯಾವುದೇ ರೋಗ ಲಕ್ಷಣ ಇಲ್ಲದೇ ಇದ್ದರೂ ಅವರು ವೈದ್ಯರ ಸಲಹೆ ಮೇರೆಗೆ ನ್ಯೂಡೆಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಕೋವಿಡ್ ಸೋಂಕಿನ ಕಾರಣದಿಂದ ಅಂಗಡಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಾಯಂಕಾಲ ಮೃತಪಟ್ಟಿದ್ದಾರೆ.

ಸುರೇಶ್ ಅಂಗಡಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004, 2009, 2014 ಮತ್ತು 2019ರಲ್ಲಿ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಸಂಸತ್ ಅಧಿವೇಶನಕ್ಕೂ ಮುನ್ನ ಎಲ್ಲಾ ಸಂಸದರಿಗೂ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿತ್ತು. ಅದರಲ್ಲಿ ಅಂಗಡಿ ಅವರಿಗೆ ಸೋಂಕು ಪಾಸಿಟಿವ್ ಕಾಣಿಸಿಕೊಂಡಿತ್ತು. ಶ್ವಾಸಕೋಶದ ಸೋಂಕಿಗೆ ಗುರಿಯಾಗಿದ್ದ ಸುರೇಶ್ ಅಂಗಡಿ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇರಿಸಲಾಗಿತ್ತು.

ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಸುರೇಶ್‌ ಅಂಗಡಿಯವರು ವಾಣಿಜ್ಯೋದ್ಯಮಿಗಳು ಹೌದು. ಇಬ್ಬರು ಪುತ್ರಿಯರು ಸೇರಿ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂಗಡಿಯವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ