NEWSನಮ್ಮರಾಜ್ಯರಾಜಕೀಯ

ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ 5,800 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಮೇ ಮತ್ತು ಜೂನ್‌ನಲ್ಲೇ ನಡೆಯಬೇಕಿದ್ದ ಗ್ರಾಮ ಪಂಚಾಯಿತಿಗಳ ಚುನಾವಣೆ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಸಾಧ್ಯತೆಯಿದೆ.

5,800 ಗ್ರಾಮ ಪಂಚಾಯಿತಿಗಳಿಗೆ  ಈ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ.

ಚುನಾವಣಾ ಸಮಯದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೂ ಮನವಿ ಮಾಡಿದೆ.

ಪ್ರಚಾರ ಮತ್ತು ಮತದಾನದ ಕಾರ್ಯವಿಧಾನಗಳ ವಿವರಗಳೊಂದಿಗೆ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗವು ಎಸ್‌ಒಪಿಗಳನ್ನು ನೀಡಿತ್ತು.

ಈ ವರ್ಷ ಮೇ ಮತ್ತು ಜೂನ್‌ನಲ್ಲಿ ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಕೊನೆಗೊಂಡರೂ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ ಆಯೋಗ ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ಚುನಾವಣೆ ನಡೆಸುವ ಕುರಿತು ಮಾಹಿತಿ ನೀಡಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ