NEWSದೇಶ-ವಿದೇಶಸಿನಿಪಥ

ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ (74) ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ.

ಹಲವು ದಿನಗಳಿಂದ ಚೆನ್ನೈ ಎಂಜಿಎಂ ಹೆಲ್ತ್ ಕೇರ್‌ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ.

ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದ ಹಿನ್ನೆಲೆ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಜ್ಞ ವೈದ್ಯರ ತಂಡದಿಂದ ಆರೈಕೆ ಮಾಡಲಾಗುತ್ತಿತ್ತು. ಆಗಸ್ಟ್ 24ರಂದು ಕೊರೊನಾ ವರದಿ ನೆಗೆಟಿವ್ ಬಂದಿತ್ತು. ಆದರೂ ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಆಗಸ್ಟ್‌ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿದ್ದರಿಂದ ಎಸ್‌ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೋವಿಡ್‌–19 ಸೋಂಕಿನ ಲಕ್ಷಣಗಳಿರುವುದು ದೃಢಪಟ್ಟಿತ್ತು. ಮನೆಯಲ್ಲಿಯೇ ಕ್ವಾರಂಟೈನ್‌ ಆಗುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು.

ಆ ಬಳಿಕದಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕವೇ ಅವರಿಗೆ ಚಿಕಿತ್ಸೆ ನಿಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಚೆನ್ನೈನ ಫಾರ್ಮ್ ಹೌಸ್ ನಲ್ಲಿ ನಡೆಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಜುಲೈನಲ್ಲಿ ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಸಾಹಿತಿ ವೈರಮುತ್ತು ರಚಿಸಿದ್ದ ಹಾಡಿಗೆ ಧ್ವನಿ ನೀಡಿದ್ದರು. ಇವರ ಕಲಾ ಸೇವೆಗೆ ಭಾರತ ಸರ್ಕಾರ 2011ರಲ್ಲಿ ಪದ್ಮಶ್ರೀ, 2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿತ್ತು.

1946ರ ಜೂನ್‌ 4 ರಂದು ಜನಿಸಿದ್ದ ಎಸ್‌ಪಿಬಿ ಕನ್ನಡ, ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡನ್ನು ಹಾಡಿದ್ದಾರೆ.

ಇನ್ನು ಕನ್ನಡ ಚಲನ ಚಿತ್ರಗಳಿಗೆ ಇವರ ನೀಡಿದ ಧ್ವನಿ ಅಂದಿನ ನಟರಾದ ಅಂಬರೀಷ್‌, ವಿಷ್ಣುವರ್ಧನ್‌ ಸೇರಿ ಹಲರಿಗೆ ದನಿಗೆ ತಕ್ಕಂತೆ ಧ್ವಿನಿ ನೀಡುತ್ತಿದ್ದರು. ಇಂದು ಅವರನ್ನು ಕಳೆದುಕೊಂಡಿರುವ ಭಾರತೀಯ ಚಿತ್ರರಂಗ ತುಂಬಲಾರದ ನಷ್ಟವನ್ನು ಅನುಭವಿಸಿದೆ.

ಎಸ್‌ಪಿಬಿ ಅವರ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದು, ಅವರ ಕುಟುಂಬದವರಿಗೆ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ