ಬೆಂಗಳೂರು: ಸುಪ್ರಸಿದ್ಧ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಕನ್ನಡ ಸೇರಿದಂತೆ 16ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡಿದ್ದ ಎಸ್ಪಿಬಿ ಅವರ ಸರಳ ಸಜ್ಜನಿಕೆಯ ವ್ಯಕ್ತಿತ್ವ ಅನುಕರಣೀಯ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಎಸ್ಪಿಬಿ ಅವರ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ. ತಮ್ಮ ಮಧುರ ಕಂಠದಿಂದ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಕೊರೊನಾ ಸೋಂಕಿನಿಂದ ಎಸ್ಪಿಬಿ ಅವರು ಚೇತರಿಸಿಕೊಳ್ಳಲಾಗದೆ ಜೀವ ತೆತ್ತಿದ್ದು ಅತ್ಯಂತ ದುರ್ದೈವದ ಸಂಗತಿ. ಬಾಲಸುಬ್ರಹ್ಮಣ್ಯಂ ಗಾನಸುಧೆಯ ಮೋಡಿಗೆ ಒಳಗಾದವರಲ್ಲಿ ನಾನೂ ಒಬ್ಬ. ಮರುಜನ್ಮ ಎಂಬುದಿದ್ದರೆ ಕನ್ನಡನಾಡಿನಲ್ಲಿ ಹುಟ್ಟಲು ಬಯಸುತ್ತೇನೆ ಎಂಬ ಎಸ್ಪಿಬಿಯವರ ಮಾತು ಈಗಲೂ ಕಿವಿಯಲ್ಲಿ ಅನುರಣಿಸುತ್ತಿದೆ.
ಕೊರೋನಾ ಸೋಂಕಿನಿಂದ ಎಸ್ಪಿಬಿ ಅವರು ಚೇತರಿಸಿಕೊಳ್ಳಲಾಗದೆ ಜೀವ ತೆತ್ತಿದ್ದು ಅತ್ಯಂತ ದುರ್ದೈವದ ಸಂಗತಿ. ಬಾಲಸುಬ್ರಹ್ಮಣ್ಯಂ ಗಾನಸುಧೆಯ ಮೋಡಿಗೆ ಒಳಗಾದವರಲ್ಲಿ ನಾನೂ ಒಬ್ಬ.
ಮರುಜನ್ಮ ಎಂಬುದಿದ್ದರೆ ಕನ್ನಡನಾಡಿನಲ್ಲಿ ಹುಟ್ಟಲು ಬಯಸುತ್ತೇನೆ ಎಂಬ ಎಸ್ಪಿಬಿಯವರ ಮಾತು ಈಗಲೂ ಕಿವಿಯಲ್ಲಿ ಅನುರಣಿಸುತ್ತಿದೆ.
3/3— H D Kumaraswamy (@hd_kumaraswamy) September 25, 2020