CrimeNEWSದೇಶ-ವಿದೇಶಸಿನಿಪಥ

ಚೆನ್ನೈ ಫಾರ್ಮ್‌ಹೌಸ್‍ನಲ್ಲಿ ಇಂದು 11 ಗಂಟೆಗೆ ಎಸ್‍ಪಿಬಿ ಅಂತ್ಯಕ್ರಿಯೆ

ಅಂತಿಮ ದರ್ಶನಕ್ಕೆ ಕಿಕ್ಕಿರಿದು ನೆರೆದ ಜನ l ಬೆಳಗ್ಗೆ 11 ಗಂಟೆವರೆಗೂ ಸಾರ್ವಜನಿಕರಿಗೆ ಅವಕಾಶ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಫಾರ್ಮ್ ಹೌಸ್‍ನಲ್ಲಿ ಎಸ್‍ಪಿಬಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೂ ಸಾರ್ವಜನಿಕರು ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ನಂತರ ಅಂತ್ಯಕ್ರಿಯೆ ಇಂದು ಚೆನ್ನೈನ ರೆಡ್‍ಹಿಲ್ ಫಾರ್ಮ್ ಹೌಸ್‍ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನೆಚ್ಚಿನ ಹಾಡುಗಾರನ ಅಂತಿಮ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಇನ್ನು ಅಂತ್ಯಕ್ರಿಯೆ ನಡೆಯುವ ಫಾರ್ಮ್ ಹೌಸ್‍ಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಕುಟುಂಬ ಸದಸ್ಯರು ಹಾಗೂ ಸಂಬಂಧಿಕರಿಗೆ ಮಾತ್ರ ಪ್ರವೇಶ ನೀಡಲಾಗಿದೆ.

ಕೊರೊನಾ ಸೋಂಕಿಗೆ ತುತ್ತಾಗಿದ್ದ ಎಸ್‍ಪಿಬಿ ಕಳೆದ 51 ದಿನಗಳಿಂದ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕಿನ ವಿರುದ್ಧ ಸಾವು ಬದುಕಿನ ಹೋರಾಟ ನಡೆಸಿದ್ದ ಅವರಿಗೆ ಚಿಕಿತ್ಸೆ ಬಳಿಕ ಕೊರೊನಾ ನೆಗೆಟಿವ್ ದೃಢವಾಗಿತ್ತು. ಆದರೆ ಶುಕ್ರವಾರ ಮಧ್ಯಾಹ್ನ 1.04ರ ವೇಳೆ ಹೃದಯ ಸ್ತಂಭನಕ್ಕೆ ಒಳಗಾಗಿ ಸಾವನ್ನಪ್ಪಿದ್ದರು.

ಎಸ್‍ಪಿಬಿ ನಿಧನದ ಹಿನ್ನೆಯಲ್ಲಿ ರಾಜ್ಯದಲ್ಲಿ ಶುಕ್ರವಾರ ಶೋಕಾಚರಣೆ ಆಚರಿಸಲಾಯಿತು. ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗಿತ್ತು. ವಿಧಾನಸಭಾ ಕಲಾಪದಲ್ಲೂ ದಿಗ್ಗಜ ಗಾಯಕನ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ