NEWSಕೃಷಿರಾಜಕೀಯ

ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ವಿರುದ್ಧ ಸೆ.28 ರೈತ ಪರ ಸಂಘಟನೆಗಳಿಂದ ರಾಜ್ಯ ಬಂದ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಪಿಎಂಸಿ ಮತ್ತು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ ರೈತ ಪರ ಸಂಘಟನೆಗಳು ಸೋಮವಾರ ( ಸೆ.28) ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿವೆ.

ಸೆಪ್ಟೆಂಬರ್​ 25ರಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿತ್ತು ಆದರೆ ಅದು ಸಂಪೂರ್ಣ ವಿಫಲವಾಗಿತ್ತು. ಆದರೆ ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ಸಂಪೂರ್ಣ ಸಕ್ಸಸ್ ಆಗಗಲಿದೆ ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿವರ ಅವರು, ಈಗಾಗಲೇ ಹಲವು ಸಂಘಟನೆಗಳು ಬಂದ್​ಗೆ ಬೆಂಬಲ ನೀಡಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ. ಇಂದು ಭೂ ಸುಧಾರಣಾ ವಿಧೇಯಕ ಮಂಡನೆಯಾಗಿದೆ. ಹೀಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರಿಯಲಿದೆ. ಸೋಮವಾರ ಬೆಳಗ್ಗೆಯಿಂದ ಸಂಜೆವರೆಗೂ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೃಷಿ ಪರಂಪರೆ ಹಾಳು ಮಾಡುವ ಕಾಯ್ದೆಯನ್ನು ಕೇಂದ್ರ ತಂದಿದೆ. ಹೀಗಾಗಿ ರೈತರ ಪಾಲಿಗೆ ಕೇಂದ್ರ, ರಾಜ್ಯ ಸರ್ಕಾರ ಸತ್ತಿವೆ. ಸೋಮವಾರದಂದು ಶವ ಯಾತ್ರೆ ಮಾಡುತ್ತೇವೆ ಎಂದು ಕೋಡಿಹಳ್ಳಿ ಆಕ್ರೋಶ ಹೊರ ಹಾಕಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ