NEWSಕೃಷಿನಮ್ಮರಾಜ್ಯರಾಜಕೀಯ

ವಿಪಕ್ಷಗಳ ವಿರೋಧದ ನಡುವೆ ಎಪಿಎಂಸಿ, ಭೂ ಸುಧಾರಣೆ ಮಸೂದೆಗಳ ಅಂಗೀಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತೀವ್ರ ವಿರೋಧ ಮತ್ತು ರೈತ ಸಂಘಗಳ ಪ್ರತಿಭಟನೆ ನಡುವೆಯೇ ಕರ್ನಾಟಕ ವಿಧಾನಸಭೆ ಭೂ ಸುಧಾರಣಾ ಕಾಯ್ದೆ, ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಮಸೂದೆಗಳನ್ನು ಅಂಗೀಕರಿಸಿದೆ.

ರೈತ ಸಂಘಟನೆಗಳು ಮತ್ತು ವಿಪಕ್ಷಗಳ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಭೂಸುಧಾರಣೆ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ಅಂಗೀಕರಿಸಿದೆ. ಆದರೆ ಇದು ರೈತರ ಮರಣ ಶಾಸನ ಎಂದು ಆರೋಪಿಸಿದ ಕಾಂಗ್ರೆಸ್‌ ಸದಸ್ಯರು ಮಸೂದೆಯ ಪ್ರತಿಯನ್ನು ಹರಿದು ಹಾಕಿದರಲ್ಲದೆ, ಸಭಾತ್ಯಾಗ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಈ ಎರಡೂ ಕಾಯ್ದೆಗಳನ್ನು ವಿರೋಧಿಸುತ್ತಿರುವ ರೈತ ಸಂಘಟನೆಗಳು ಈಗಾಗಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ರಾಜ್ಯ ಬಂದ್‌ಗೆ ಕರೆ ನೀಡಿವೆ.

ರೈತರಿಗೆ ಇದರಿಂದ ಯಾವುದೇ ಕಾರಣಕ್ಕೂ ತೊಂದರೆಯಾಗದು ಎಂದು ಮಸೂದೆ ಮಂಡಿಸಿದ ಕಂದಾಯ ಸಚಿವ ಆರ್‌. ಅಶೋಕ್‌ ಭರವಸೆ ನೀಡಿದ್ದಾರೆ. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ರೈತರ ಸಹಿತ ಬಹುತೇಕರ ವಿರೋಧವಿದೆ. ಯಾವ ಉದ್ದೇಶಕ್ಕಾಗಿ ಭೂ ಸುಧಾರಣೆ ಕಾಯ್ದೆಯನ್ನು ದೇವರಾಜ ಅರಸು ತಂದಿದ್ದರೋ ಆ ಮೂಲ ಆಶಯಕ್ಕೆ ಇದು ವಿರುದ್ಧವಾಗಿದೆ. ಇದರ ಹಿಂದೆ ಬೇರೆಯದೇ ಉದ್ದೇಶವಿದೆ ಎಂದು ಆರೋಪಿಸಿದ್ದಾರೆ.

ಜೆಡಿಎಸ್‌ ಸಹಮತ
ಅಚ್ಚರಿ ಬೆಳವಣಿಗೆಯಲ್ಲಿ ಈ ಮಸೂದೆಗೆ ಜೆಡಿಎಸ್‌ ಸಹಮತ ವ್ಯಕ್ತಪಡಿಸಿತು. ಆದರೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ಈ ಮಸೂದೆಯನ್ನು ಕೊರೊನಾ ಸಂದರ್ಭದಲ್ಲಿ ಸುಗ್ರಿವಾಜ್ಞೆ ಮೂಲಕ ತಂದ ಅಗತ್ಯದ ಬಗ್ಗೆ ಪ್ರಶ್ನಿಸಿದರು. ಜಮೀನು ಖರೀದಿ ಮಿತಿ ಹೆಚ್ಚು ಮಾಡಿರುವುದರಿಂದ ಮತ್ತೆ ಜಮೀನ್ದಾರಿ ಪದ್ಧತಿಯತ್ತ ಹೋಗುವಂತಾಗುತ್ತದೆ ಎಂದು ಹೇಳಿದರಾದರೂ ಇದರಿಂದ ರೈತರಿಗೆ ಎಷ್ಟು ಅನುಕೂಲ ಎಂಬ ಬಗ್ಗೆ ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.

ಇನ್ನು ತಲೆ ಬಳಿಸಿಕೊಂಡು ತಿನ್ನುವುದಕ್ಕೆ ನಾವು ಕಡಿವಾಣ ಹಾಕಿದ್ದೇವೆ. ಜತೆಗೆ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಈ ಕಾಯ್ದೆಗಳಿಗೆ ತಿದ್ಗದುಪಡಿ ತರುವುದು ಅನಿವಾರ್ಯವಾಗಿತ್ತು ಎಂದು ಸರ್ಕಾರ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ