CrimeNEWSದೇಶ-ವಿದೇಶರಾಜಕೀಯ

ಕೇಂದ್ರ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ: ಮಾಜಿ ಪ್ರಧಾನಿ ಎಚ್‌ಡಿಡಿ ಸೇರಿ ಹಲವು ಗಣ್ಯರ ಸಂತಾಪ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾನುವಾರ ಬೆಳಗ್ಗೆ ನಿಧನರಾದರು.

ಜಸ್ವಂತ್ ಸಿಂಗ್ ಅವರಿಗೆ 82 ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಜೂ.25 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯದಿದ್ದ ಬಳಲುತ್ತಿದ್ದ ಅವರು, ಇಂದು ಬೆಳಗ್ಗೆ 6.55ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗುಲಿರಲಿಲ್ಲ ಎಂದು ದೆಹಲಿಯ ಸೇನಾ ಆಸ್ಪತ್ರೆ ಸ್ಪಷ್ಟಪಡಿಸಿದೆ.

ರಾಜಸ್ಥಾನದ ಜೋಧ್ ಪುರ ಮೂಲದವರಾದ ಜಸ್ವಂತ್ ಸಿಂಗ್ ಅವರು, ಆರಂಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ರಾಜಕೀಯ ಆಕಾಂಕ್ಷೆಯಿಂದ ಸೇನೆಗೆ ನಿವೃತ್ತಿ ಘೋಷಿಸಿ ಸಕ್ರಿಯ ರಾಜಕೀಯಕ್ಕೆ ಸೇರ್ಪಡೆಯಾಗಿದ್ದರು.

ಜಸ್ವಂತ್ ಸಿಂಗ್ ಅವರು ಬಿಜೆಪಿ ಪಕ್ಷದಿಂದ ಐದು ಬಾರಿ ರಾಜ್ಯ ಸಭೆಗೆ ಆಯ್ಕೆಯಾಗಿದ್ದರು. ( 1980, 1986, 1998, 1999, 2004) ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. (1990, 1991,1996, 2009). ಕೇಂದ್ರ ಹಣಕಾಸು, ವಿದೇಶಾಂಗ, ಮತ್ತು ರಕ್ಷಣಾ ಖಾತೆಗಳಂತಹ ಪ್ರಮುಖ ಖಾತೆಗಳನ್ನು ಜಸ್ವಂತ್ ಸಿಂಗ್ ನಿಭಾಯಿಸಿದ್ದರು.

ಜಸ್ವಂತ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು,  ದೇಶಕ್ಕಾಗಿ ಮೊದಲು ಸೈನಿಕರಾಗಿ ಸೇವೆ ಸಲ್ಲಿಸಿ, ನಂತರ ರಾಜಕೀಯದೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಅವಧಿಯಲ್ಲಿ ಅವರು ಪ್ರಮುಖ ಖಾತೆಗಳನ್ನು ನಿಭಾಯಿಸಿ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅವರ ಈ ನಿಧನದ ಸುದ್ದಿ ಕೇಳಿ ದುಃಖವಾಯಿತು ಎಂದು ಹೇಳಿದ್ದಾರೆ.

ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಜಸ್ವಂತ್ ಸಿಂಗ್ ಜಿ ತಮ್ಮ ವಿಶಿಷ್ಟ ಛಾಪಿನ ಮೂಲಕವೇ ಗುರುತಿಸಲ್ಪಡಲಿದ್ದಾರೆ. ಅವರು ಬಿಜೆಪಿಯನ್ನು ಸಂಘಟನಾತ್ಮಕವಾಗಿ ಬೆಳೆಸುವಲ್ಲಿ ಮಹತ್ವದ ಪಾತ್ರ ನಿಭಾಯಿಸಿದ್ದಾರೆ. ನಮ್ಮ ನಡುವಿನ ಮಾತುಕತೆ ಯಾವತ್ತೂ ನನ್ನ ನೆನಪಿನಲ್ಲಿರುತ್ತದೆ. ಕಳೆದ ಆರು ವರ್ಷಗಳ ಅವಧಿಯಲ್ಲಿ ಅವರು ತಮ್ಮ ಆರೋಗ್ಯ ಸಮಸ್ಯೆ ವಿರುದ್ಧ ಸಾಕಷ್ಟು ಹೋರಾಡಿದ್ದಾರೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕೊಡಲಿ. ಮಾನವೇಂದ್ರ ಸಿಂಗ್ ಅವರೊಂದಿಗೆ ಮಾತನಾಡಿ ಸಂತಾಪ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಕೇಂದ್ರ  ಮಾಜಿ  ಸಚಿವ  ಜಸ್ವಂತ್ ಸಿಂಗ್ ನಿಧನರಾದ ಬಗ್ಗೆ ಕೇಳಿ ನನಗೆ ತುಂಬಾ ಬೇಸರವಾಗಿದೆ.  ಅವr ಆತ್ಮಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಬೇಕೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಟ್ವೀಟ್‌ ಮಾಡಿದ್ದಾರೆ.

ಇನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಟ್ವೀಟ್ ಮಾಡಿ, ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಚಿವ ಶ್ರೀ ಜಸ್ವಂತ್ ಸಿಂಗ್ ಜಿ ನಿಧನದಿಂದ ತೀವ್ರ ನೋವಾಗಿದೆ. ರಕ್ಷಣಾ ಮಂತ್ರಿ ಉಸ್ತುವಾರಿ ಸೇರಿದಂತೆ ಹಲವಾರು ಹುದ್ದೆಗಳಲ್ಲಿ ಅವರು ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದರು. ಜಸ್ವಂತ್ ಅವರು ಪರಿಣಾಮಕಾರಿ ಸಚಿವರು ಮತ್ತು ಸಂಸದರು ಎಂದು ಗುರುತಿಸಿಕೊಂಡ ನಾಯಕರಾಗಿದ್ದರು ಎಂದಿದ್ದಾರೆ.

ಮಾಜಿ ಕೇಂದ್ರ ಸಚಿವ  ಜಸ್ವಂತ್ ಸಿಂಗ್ ಅವರ ನಿಧನದಿಂದ ಬೇಸರವಾಯಿತು.  ಅವರ ಕುಟುಂಬ ಸದಸ್ಯರು ಮತ್ತು ಹಿತೈಷಿಗಳಿಗೆ ನನ್ನ ಸಂತಾಪ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

1 Comment

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ