NEWSಕೃಷಿನಮ್ಮರಾಜ್ಯ

ಪ್ರತಿಭಟನೆಗೆ ಮುಂದಾದ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ ಹಲವರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಸೋಮವಾರ ಮುಂಜಾನೆಯಿಂದಲೇ ಕನ್ನಡಪರ ರೈತರಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ.

ಮುಂಜಾಣೆ 5.30ಕ್ಕೆ ಪ್ರತಿಭಟನೆ ಮಾಡಲು ಮುಂದಾದ ಪ್ರತಿಭಟನಾಕಾರರನ್ನು ಉಪ್ಪಾರ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದರಿಂದ 6ಗಂಟೆ ವೇಳೆ ಅಲ್ಲಿ ಪ್ರತಿಭಟನೆ ವಿಫಲಗೊಂಡಿತು. ಆದರೆ ನಂತರ ಕರವೇ ನಾರಯಣಗೌಡ ಬಣ ಮತ್ತು ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ಪ್ರತಿಭಟನೆ ಕಾವು 6.30ರ ವೇಳೆ ತೀವ್ರಗೊಂಡಿದೆ.

ಇನ್ನು ಬೆಂಗಳೂರಿನೆ ರೈಲು ನಿಲ್ದಾಣದಲ್ಲಿ ರೈಲು ತಡೆಗೆ ಮುಂದಾದ ಕರವೇ ಸೇರಿ ಇತರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಆದರೆ ಪೊಲೀಸರ ನಡೆಯನ್ನು ಖಂಡಿಸಿ ಪ್ರತಿಭಟನಾಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

ರೈತ ವಿರೋಧಿ ನೀತಿಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿದೆ ಎಂದು ಆರೋಪಿಸಿ ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ರೈತರೊಂದಿಗೆ ವಿವಿಧ ಸಂಘಟನೆಗಳು ಕೂಡ ಕೈ ಜೋಡಿಸಿದ್ದರಿಂದಾಗಿ ರಾಜ್ಯ ಬಂದ್ ಬಿಸಿ ಏರತೊಡಗಿದೆ.

ಈ ನಡುವೆ ರೈಲು ತಡೆಗೆ ಮುಂದಾದ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ