NEWSಕೃಷಿನಮ್ಮರಾಜ್ಯರಾಜಕೀಯ

ಸುಖಾಸುಮ್ಮನೆ ಅನ್ನದಾತರ ದಾರಿ ತಪ್ಪಿಸಬೇಡಿ- ಹೊಸ ಕೃಷಿ ಮಸೂದೆಯಿಂದ ರೈತರಿಗೆ ಅನ್ಯಾಯವಾಗದು: ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನೂ ರೈತನ ಮಗನಾಗಿದ್ದು, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಕೃಷಿ ಮಸೂದೆಗಳನ್ನು ವಿರೋಧಿಸಿ ಕರ್ನಾಟಕ ಬಂದ್ ವಿಚಾರ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರಿಗೆ ಬೇಕಾದ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹಣ ನೀಡಲಾಗಿದೆ. ನಾನು ರೈತನ ಮಗನಾಗಿದ್ದು, ಎಂದಿಗೂ ರೈತರ ಪರವಾಗಿಯೇ ಇರುತ್ತೇನೆ ಎಂದರು.

ನನ್ನಿಂದ ರೈತ ಸಮುದಾಯಕ್ಕೆ ಎಂದೂ ಅನ್ಯಾಯವಾಗುವುದಿಲ್ಲ. ಇಂದು ಚಳವಳಿ ಮಾಡಿ, ಬಳಿಕವಾದರೂ ಚರ್ಚೆಗೆ ಬನ್ನಿ. ಬಿಲ್‌ನಲ್ಲಿ ಏನಾದರೂ ಬದಲಾವಣೆ ಬೇಕಿದ್ದರೆ ಮಾಡೋಣ. ಸುಮ್ಮನೇ ರೈತರನ್ನು ದಾರಿತಪ್ಪಿಸುವ ಕೆಲಸವನ್ನು ಮಾಡಬೇಡಿ ಎಂದು ತಿಳಿಸಿದ್ದಾರೆ.

ರೈತ ಸಂಘಟನೆಗಳು, ಕಾಂಗ್ರೆಸ್‌ನವರ ಪಿತೂರಿಯಿಂದ ಧರಣಿ ನಡೆಯುತ್ತಿವೆ. ರೈತ ಮುಖಂಡರನ್ನು ಕರೆಸಿ ಮಾತಾಡುವ ಪ್ರಯತ್ನ ಮಾಡಿದ್ದೆ. ಈ ಕಾಯ್ದೆಗಳಿಂದ ಆಗುವ ಅನುಕೂಲದ ಬಗ್ಗೆ ವಿವರಿಸಿದ್ದೇನೆ. ಆದರೆ, ಅವರು ಪ್ರತಿಭಟನೆ ಮಾಡುವ ಉದ್ದೇಶದಿಂದ ಬಂದಿದ್ದಾರೆ. ನಾನು ಅಧಿಕಾರಕ್ಕಾಗಿ ಅಂಟಿ ಕುಳಿತಿಲ್ಲ, ರೈತರ ಪರವಾಗಿ ಇದ್ದೇನೆ. ರೈತರಿಗೆ ಕೆಟ್ಟದ್ದಾಗಲೂ ನಾನು ಎಂದಿಗೂ ಬಿಡುವುದಿಲ್ಲ ಎಂದು ತಿಳಿಸಿದರು.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿಚಾರವಾಗಿ ಈ ತಿದ್ದುಪಡಿಯಿಂದ ಯಾರು ಬೇಕಾದರೂ ಕೃಷಿ ಮಾಡಬಹುದು. ಕೃಷಿಗೆ ಉಪಯೋಗವಿಲ್ಲದ ಭೂಮಿಯಲ್ಲಿ ಕೈಗಾರಿಕೆ ನಡೆಸಬಹುದು. ಆದರೆ, ನೀರಾವರಿ ಜಮೀನಿನಲ್ಲಿ ಕೃಷಿಯನ್ನೇ ಮಾಡಬೇಕು. ಈ ರೀತಿಯ ನಿಯಮ ತಿದ್ದುಪಡಿ ವಿಧೇಯಕದಲ್ಲಿ ಇದೆ ಎಂದು ಸ್ಪಷ್ಟಪಡಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರು ತಮ್ಮ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಬಹುದು. ಎಪಿಎಂಸಿ ಬಾಗಿಲನ್ನು ನಾವು ಮುಚ್ಚಿಲ್ಲ. ರೈತರು ಎಪಿಎಂಸಿಯಲ್ಲಿ ಬೇಕಾದರೂ ಬೆಳೆದ ಫಸಲನ್ನು ಮಾರಾಟ ಮಾಡಬಹುದು, ಈ ಕಾಯ್ದೆ ಬಗ್ಗೆ 6 ತಿಂಗಳಿಂದ 1 ವರ್ಷದವರೆಗೆ ನೋಡಿ ನಿಮಗೇ ತಿಳಿಯುತ್ತದೆ ಎಂದು ವಿವರಿಸಿದ್ದಾರೆ.

ರೈತರನ್ನು ಅನಗತ್ಯವಾಗಿ ಗೊಂದಲದಲ್ಲಿ ದೂಡದಂತೆ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ರೈತ ಸಂಘಟನೆಗಳಲ್ಲಿ ನಾನು ಈ ಬಗ್ಗೆ ಮನವಿ ಮಾಡುತ್ತೇನೆ. ಪ್ರಧಾನಿ ಮೋದಿ ಒಳ್ಳೆಯ ಉದ್ದೇಶದಿಂದ ಮಸೂದೆಯನ್ನು ಜಾರಿಗೆ ತಂದಿದ್ದಾರೆ ಎಂದರು.

ಇನ್ನು ಜೆಡಿಎಸ್‌ ಶಾಸಕರು ಬಹುತೇಕ ಕಾಯ್ದೆ ತಿದ್ದುಪಡಿಯನ್ನು ಒಪ್ಪಿಕೊಂಡಿದ್ದಾರೆ. ಆದರೆ ಕಾಂಗ್ರೆಸ್‌ನ ಕೆಲ ಮುಖಂಡರು ಇದನ್ನು ರಾಜಕೀಯ ದಾಳವಾಗಿ ಮಾಡಿಕೊಂಡು ಸುಖಾ ಸುಮ್ಮನೆ ರೈತ ದಾರಿತಪ್ಪಿಸಲು ಕೆಲ ಸಂಘಟನೆಗಳ ಮೂಲಕ ಪಿತೂರಿ ನಡೆಸುತ್ತಿದ್ದಾರೆ ಎಂದು ದೂರಿದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ