NEWSನಮ್ಮಜಿಲ್ಲೆನಮ್ಮರಾಜ್ಯ

ಮೆಜೆಸ್ಟಿಕ್ ಬಸ್ ನಿಲ್ದಾಣ ಸಿಂಗಾಪುರ್‌ಗಿಂತ ಉತ್ತಮವಾಗಿ ಅಂತಾರಾಷ್ಟ್ರೀಯ ಬಸ್ ನಿಲ್ದಾಣವಾಗಿ ಮಾಡುತ್ತೇವೆ: ರಾಮಲಿಂಗಾ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ
  • 20-30 ಸಾವಿರ ಕೋಟಿ ಬೆಲೆ ಬಾಳುತ್ತಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ

ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಸಿಂಗಾಪುರ್‌ಗಿಂತಲೂ ಉತ್ತಮವಾದ ಅಂತಾರಾಷ್ಟ್ರೀಯ ಬಸ್ ನಿಲ್ದಾಣ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಕಲಾಪದಲ್ಲಿ ನಿಯಮ 330ರ ಅಡಿ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದರು. ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣವನ್ನು ಅಂತಾರಾಷ್ಟ್ರೀಯ ಬಸ್ ನಿಲ್ದಾಣದ ಮಾದರಿಯಲ್ಲಿ ಮರು ಅಭಿವೃದ್ಧಿ ಮಾಡಬೇಕು. ಮೆಜೆಸ್ಟಿಕ್ ನಿಲ್ದಾಣ 40 ಎಕರೆ ಜಾಗದಲ್ಲಿ ಮೆಟ್ರೋ, ಕೆಎಸ್‌ಆರ್‌ಟಿಸಿ ಸ್ವಲ್ಪ ಜಾಗ ನೀಡಲಾಗಿದೆ.

ಇನ್ನು 32 ಎಕರೆ ಜಾಗ ಬಸ್ ನಿಲ್ದಾಣಕ್ಕೆ ಉಳಿಯಲಿದೆ. ಚದರ ಅಡಿಗೆ 1 ಲಕ್ಷ ಬೆಲೆ ಇದೆ. ಈ ಜಾಗವನ್ನು ವಾಣಿಜ್ಯ ಬಳಕೆಗೆ ಬಳಕೆ ಆಗುವಂತೆ ಅಭಿವೃದ್ಧಿ ಮಾಡಬೇಕು. 1.40 ಕೋಟಿ ಜನರು ಬೆಂಗಳೂರಿನಲ್ಲಿ ಇದ್ದಾರೆ. ಈ ಜಾಗ 20-30 ಸಾವಿರ ಕೋಟಿ ಬೆಲೆ ಬಾಳುತ್ತಿದೆ.ಪಿಪಿಪಿ ಮಾಡೆಲ್‌ನಲ್ಲಿ ಅಭಿವೃದ್ಧಿ ಮಾಡೋದಾಗಿ ಸರ್ಕಾರ ಹೇಳಿದೆ. ಸಿಂಗಾಪುರ್ ಮಾದರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಸ್ ನಿಲ್ದಾಣ ಅಭಿವೃದ್ಧಿ ಮಾಡಬೇಕು.

ಈ ನಡುವೆ ಬಿಎಂಟಿಸಿ ಸಾಲದಲ್ಲಿ ನಡೆಯುತ್ತಿದೆ. ಹೀಗಾಗಿ ಇಲ್ಲಿ ಕಾಂಪ್ಲೆಕ್ಸ್ ಅಭಿವೃದ್ಧಿ ಮಾಡಿದ್ರೆ ಹೆಚ್ಚು ಲಾಭ ಬರಲಿದೆ. ಇದರಿಂದ ನಿಗಮಕ್ಕೆ ವರಮಾನ ಬರಲಿದೆ ಎಂದು ನಾಗರಾಜ್ ಯಾದವ್ ಒತ್ತಾಯ ಮಾಡಿದರು.

ಅದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನೀಡಿ, ಮೆಜೆಸ್ಟಿಕ್‌ನಲ್ಲಿ 32 ಎಕರೆ ಜಾಗ ಇದೆ. ನಿತ್ಯ 11 ಸಾವಿರ ಟ್ರಿಪ್ ಬಸ್ ಒಡಾಡುತ್ತವೆ. ಇಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ಮಾಡುವ ಉದ್ದೇಶ ಇದೆ. ಸಿಂಗಾಪುರ್‌ಗಿಂತ ಉತ್ತಮ ನಿಲ್ದಾಣ ಮಾಡುತ್ತೇವೆ. ಇದಕ್ಕೆ ಸಂಬಂಧಿಸಿದಂತೆ ವರದಿ ಪಡೆಯಲು ಕ್ರಮವಹಿಸಲಾಗಿದೆ.

ಆ ವರದಿ ಬಂದ ಬಳಿಕ ಕ್ಯಾಬಿನೆಟ್‌ನಲ್ಲಿ ಇಟ್ಟು ಚರ್ಚೆ ಮಾಡ್ತೀವಿ. ‘ಪ್ರಾಜೆಕ್ಟ್ ಮೆಜೆಸ್ಟಿಕ್’ ಹೆಸರಿನಲ್ಲಿ ಇದನ್ನು ಮಾಡುತ್ತೇವೆ. ಸರ್ಕಾರ- ಖಾಸಗಿ ಸಹಭಾಗಿತ್ವದಲ್ಲಿ ಇದನ್ನು ಮಾಡಲಿದ್ದು, ಅಡ್ವೈಸರಿ ಪಡೆಯಲು ನಾವು ಮುಂದಾಗಿದ್ದೇವೆ. ಸಿಂಗಾಪುರ್‌ಗಿಂತ ಉತ್ತಮವಾಗಿ ಅಂತಾರಾಷ್ಟ್ರೀಯ ಬಸ್ ನಿಲ್ದಾಣ ಮಾಡುತ್ತೇವೆ ಎಂದು ಹೇಳಿದರು.

Deva
the authorDeva

Leave a Reply

error: Content is protected !!
Latest news
BMS ಸಂಘಟನೆಯ ಹೋರಾಟ: ನೌಕರರ ಧ್ವನಿಗೆ ಸ್ಪಂದಿಸಿದ ಸರ್ಕಾರ- ಸೂಕ್ತ ವ್ಯವಸ್ಥೆ ಮಾಡದೆ ಬಿಟ್ಟಿ ಸಲಹೆ ಕೊಟ್ಟ ಎಂಡಿ ಅಕ್ರಮ... NWKRTC: ಬ್ಯಾಡಗಿ ಬಸ್‌ ನಿಲ್ದಾಣದಲ್ಲಿ ಎರಡು ಬಸ್‌ಗಳ ಮಧ್ಯೆ ಸಿಲುಕಿದ ಕಾಲೇಜು ವಿದ್ಯಾರ್ಥಿ- ಚಿಂತಾಜನಕ ಸ್ಥಿತಿ ಸಾರಿಗೆ ನೌಕರರ ಮುಷ್ಕರ: ಆತ್ಮಹತ್ಯೆಗೆ ಯತ್ನಿಸಿದ ನರಸಂಪೇಟೆ ಡಿಪೋ ಚಾಲಕ ಶಂಕರ್ ಗೌಡ್ ಚಿಕಿತ್ಸೆ ಫಲಿಸದೆ ಮೃತ ಬೇಡಿಕೆ ಈಡೇರಿಸದ ಸರ್ಕಾರ: ಸಾರಿಗೆ ನೌಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ನಡುವೆ ಹೋರಾಟ KSRTC ನೌಕರರ ಏಪ್ರಿಲ್‌ ತಿಂಗಳ ವೇತನ ಏ.30ರಂದೆ ಪಾವತಿಸಲು ಎಂಡಿ ಆದೇಶ ಎಸ್‌ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾದರೂ ಹಾಜರಾಗಿಲ್ಲ ಅಂತ ಅಂಧ ವಿದ್ಯಾರ್ಥಿನಿಯ ಫೇಲ್ ಮಾಡಿದ ಮಂಡಳಿ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ - ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ SSLC ಪರೀಕ್ಷಾ ಫಲಿತಾಂಶ ಅಧಿಕೃತ ಪ್ರಕಟ: ಶೇ.94.1 ತೇರ್ಗಡೆ ಹುಡುಗಿಯರೇ ಈ ಬಾರಿಯೂ ಮೇಲುಗೈ KSRTC: ನೌಕರರ ವೇತನ ಹೆಚ್ಚಳ ಸಂಬಂಧದ ಹೋರಾಟ ನಿಲ್ಲುವುದಿಲ್ಲ ಹೈ ಕೋರ್ಟ್‌ ನಿರ್ದೇಶನದಂತೆ ಮುಂದುವರಿಯಲಿದೆ- ಚಂದ್ರಶೇಖರ... ಏ.29ರಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ 2024ರ ಜ.1ರಿಂದ ನೌಕರರ ವೇತನ ಹೆಚ್ಚಳ, ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ...