CRIMENEWSದೇಶ-ವಿದೇಶ

ಖಾಸಗಿ ಬಸ್‌ – ಕಾರು ನಡುವೆ ಮುಖಾಮುಖಿ ಡಿಕ್ಕಿ: 12 ಮಂದಿಗೆ ಗಂಭೀರಗಾಯ

ವಿಜಯಪಥ ಸಮಗ್ರ ಸುದ್ದಿ

ಕುಂಬಳೆ: ಖಾಸಗಿ ಬಸ್‌ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ನಾಲ್ವರು ಹಾಗೂ ಬಸ್‌ನ ಎಂಟು ಮಂದಿ ಪ್ರಯಾಣಿಕರು ಸೇರಿ 12 ಮಂದಿ ಗಾಯಗೊಂಡಿರುವ ಘಟನೆ ಶಾಂತಿಪಳ್ಳ ತಿರುವಿನಲ್ಲಿ ಇಂದು ನಡೆದಿದೆ.

ಬುಧವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬಸ್‌ನಲ್ಲಿದ್ದ ಕಾಸರಗೋಡು ಖಾಸಗಿ ಆಸ್ಪತ್ರೆಯ ವೈದ್ಯೆ ಡಾ. ಮುಸ್ಕಾನ, ಕಂಚಿಕಟ್ಟೆಯ ಸುಜಾತ (40), ಸೂರಂಬೈಲು ನಿವಾಸಿ ಹಾಗೂ ಕುಂಜತ್ತೂರು ಶಾಲಾ ಅಧ್ಯಾಪಕಿ ದೀಪ್ತಿ (22) ಸೇರಿ ಒಟ್ಟು ಎಂಟು ಮಂದಿ ಗಾಯಗೊಂಡಿದ್ದು ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇನ್ನು ಕಾರಿನಲ್ಲಿದ್ದ ಆಲಂಪಾಡಿ ನಿವಾಸಿಗಳಾದ ಮಾಲಿಕ್, ತಾಜುದ್ದೀನ್, ಕಬೀರ್ ಮತ್ತು ಸಿದಾನ್ ಎಂಬುವರು ಗಾಯಗೊಂಡಿದ್ದು ಅವರಲ್ಲಿ ಸಿದಾನ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಮೂವರನ್ನು ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಬದಿಯಡ್ಕ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕುಂಬಳೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ನಡುವೆ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Megha
the authorMegha

Leave a Reply

error: Content is protected !!
Latest news
ನೌಕರರ 18 ತಿಂಗಳ ಬಾಕಿ ಹಣ 6 ಕಂತುಗಳಲ್ಲಿ ನೀಡಲಾಗುವುದು: ವಿತ್ತ ಸಚಿವರ ಭರವಸೆ KSRTC ಕೋಲಾರ ವಿಭಾಗದ ಅಧಿಕಾರಿಗಳ ದರ್ಪ- ಚಾಲಕರ ಹೆದರಿಸಿ ವಿಶ್ರಾಂತಿ ರಹಿತ ಡಬಲ್‌ ಡ್ಯೂಟಿ, ಸಿಂಗಲ್‌ ಪೇಮೆಂಟ್‌, ಒಟಿ ... BMTC: ಕರ್ತವ್ಯದಲಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಾವು- ಪರಿಹಾರಕ್ಕೆ ಆಗ್ರಹಿಸಿ ಚಾಲಕರಿಂದ ಡಿಪೋ ಬಳಿ ಪ್ರತಿಭಟನೆ ಮಾತುಕತೆ ಯಶಸ್ವಿ: ಆರ್‌ಟಿಸಿ ಮುಷ್ಕರ ಅಂತ್ಯ-ಇಂದಿನಿಂದ ಬಸ್ ಸೇವೆ ಪುನಾರಂಭ ಏ.27ರಂದು ಪಿಎಫ್ ಕಚೇರಿ ಮುಂದೆ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ : ನಂಜುಂಡೇಗೌಡ BMS ಸಂಘಟನೆಯ ಹೋರಾಟ: ನೌಕರರ ಧ್ವನಿಗೆ ಸ್ಪಂದಿಸಿದ ಸರ್ಕಾರ- ಸೂಕ್ತ ವ್ಯವಸ್ಥೆ ಮಾಡದೆ ಬಿಟ್ಟಿ ಸಲಹೆ ಕೊಟ್ಟ ಎಂಡಿ ಅಕ್ರಮ... NWKRTC: ಬ್ಯಾಡಗಿ ಬಸ್‌ ನಿಲ್ದಾಣದಲ್ಲಿ ಎರಡು ಬಸ್‌ಗಳ ಮಧ್ಯೆ ಸಿಲುಕಿದ ಕಾಲೇಜು ವಿದ್ಯಾರ್ಥಿ- ಚಿಂತಾಜನಕ ಸ್ಥಿತಿ ಸಾರಿಗೆ ನೌಕರರ ಮುಷ್ಕರ: ಆತ್ಮಹತ್ಯೆಗೆ ಯತ್ನಿಸಿದ ನರಸಂಪೇಟೆ ಡಿಪೋ ಚಾಲಕ ಶಂಕರ್ ಗೌಡ್ ಚಿಕಿತ್ಸೆ ಫಲಿಸದೆ ಮೃತ ಬೇಡಿಕೆ ಈಡೇರಿಸದ ಸರ್ಕಾರ: ಸಾರಿಗೆ ನೌಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ನಡುವೆ ಹೋರಾಟ KSRTC ನೌಕರರ ಏಪ್ರಿಲ್‌ ತಿಂಗಳ ವೇತನ ಏ.30ರಂದೆ ಪಾವತಿಸಲು ಎಂಡಿ ಆದೇಶ