CRIMENEWSನಮ್ಮರಾಜ್ಯ

ಸಾರಿಗೆ ಇಲಾಖೆ ಬಡ್ತಿ ಪಡೆಯಲು ನಕಲಿ ಪ್ರಮಾಣಪತ್ರ: ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಾಸಕ ಟಿ.ಎ.ಶರವಣ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಇಲಾಖೆಯ ಲಿಪಿಕ ವರ್ಗದ ಸಿಬ್ಬಂದಿ ಬಡ್ತಿ ಪಡೆಯಲು ನಕಲಿ ಡಿಪ್ಲೊಮಾ ಪ್ರಮಾಣಪತ್ರ ಸಲ್ಲಿಸಿದ ಆರೋಪಗಳ ಬಂದಿರುವ ಬಗ್ಗೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇಂದು ವಿಧಾನಪರಿಷತ್‌ನಲ್ಲಿ ಜೆಡಿಎಸ್‌ನ ಶಾಸಕ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು. ಅಕ್ರಮದಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯೂ ಭಾಗಿಯಾಗಿರುವ ಶಂಕೆ ಇದೆ. ಇದರಿಂದ ನಿವೃತ್ತ ನ್ಯಾಯಾಧೀಶ ನಾರಾಯಣ ಅವರನ್ನು ಈಗಾಗಲೇ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶರವಣ ಮಾತನಾಡಿ, ಕೆಸಿಎಸ್‌ಆರ್ ನಿಯಮದಂತೆ ನಕಲಿ ಪ್ರಮಾಣಪತ್ರ ನೀಡಿದವರ ಮೇಲೂ ಕ್ರಮವಾಗಬೇಕು. ಮೈಸೂರು, ಬೆಳಗಾವಿಗಳಲ್ಲಿ ಪರೀಕ್ಷೆ ಬರೆದವರು ಕೇವಲ ಒಂದು ಗಂಟೆಯಲ್ಲಿ ಬೆಂಗಳೂರಿಗೆ ಬಂದು ಹೇಗೆ ಮತ್ತೊಂದು ಪರೀಕ್ಷೆ ಬರೆಯಲು ಸಾಧ್ಯ? ಈ ಕುರಿತು ತನಿಖೆಯಾಗಬೇಕು. ಉದ್ಯೋಗವಿಲ್ಲದೆ ಸಾಕಷ್ಟು ಜನರಿಗೆ ತೊಂದರೆಯಾಗಿದೆ. ನೇಮಕಾತಿಗಾಗಿ ಕಾಯುತ್ತಿರುವವರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.

ಸಾರಿಗೆ ಇಲಾಖೆಯ ಲಿಪಿಕ ವರ್ಗದವರಿಗೆ ‘ಸಿ’ ಗ್ರೂಪ್‌ನ ಮೋಟಾರು ವಾಹನ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಬಡ್ತಿ ಪಡೆಯಲು ಡಿಪ್ಲೊಮಾ ಕಡ್ಡಾಯ ಮಾಡಲಾಗಿದೆ. ಇಲಾಖೆಯಲ್ಲಿನ ಶೇ.10ರಷ್ಟು ನೌಕರರಿಗೆ ಅವಕಾಶ ಮಾಡಿಕೊಟ್ಟು 2022ರಲ್ಲಿ ಆದೇಶ ಮಾಡಲಾಯಿತು.

ಇನ್ನು ಅವರಲ್ಲಿ ಹಲವರ ಪ್ರಮಾಣಪತ್ರಗಳು ನಕಲಿ ಎನ್ನುವ ಅನುಮಾನವಿದೆ. ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದಾಗ ಲೋಕಾಯುಕ್ತ ತನಿಖೆಗೆ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಮೂರು ತಿಂಗಳು ಕಳೆದರೂ ಕ್ರಮ ಆಗಿಲ್ಲ. ಈಗ ಮತ್ತೆ ಪ್ರಶ್ನೆ ಎತ್ತಿದ ನಂತರ ಅಕ್ರಮ ಎಸಗಿದವರಿಗೆ ನೋಟಿಸ್ ನೀಡಲಾಗಿದೆ ಎಂದರು.

Megha
the authorMegha

Leave a Reply

error: Content is protected !!
Latest news
ನೌಕರರ 18 ತಿಂಗಳ ಬಾಕಿ ಹಣ 6 ಕಂತುಗಳಲ್ಲಿ ನೀಡಲಾಗುವುದು: ವಿತ್ತ ಸಚಿವರ ಭರವಸೆ KSRTC ಕೋಲಾರ ವಿಭಾಗದ ಅಧಿಕಾರಿಗಳ ದರ್ಪ- ಚಾಲಕರ ಹೆದರಿಸಿ ವಿಶ್ರಾಂತಿ ರಹಿತ ಡಬಲ್‌ ಡ್ಯೂಟಿ, ಸಿಂಗಲ್‌ ಪೇಮೆಂಟ್‌, ಒಟಿ ... BMTC: ಕರ್ತವ್ಯದಲಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಾವು- ಪರಿಹಾರಕ್ಕೆ ಆಗ್ರಹಿಸಿ ಚಾಲಕರಿಂದ ಡಿಪೋ ಬಳಿ ಪ್ರತಿಭಟನೆ ಮಾತುಕತೆ ಯಶಸ್ವಿ: ಆರ್‌ಟಿಸಿ ಮುಷ್ಕರ ಅಂತ್ಯ-ಇಂದಿನಿಂದ ಬಸ್ ಸೇವೆ ಪುನಾರಂಭ ಏ.27ರಂದು ಪಿಎಫ್ ಕಚೇರಿ ಮುಂದೆ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ : ನಂಜುಂಡೇಗೌಡ BMS ಸಂಘಟನೆಯ ಹೋರಾಟ: ನೌಕರರ ಧ್ವನಿಗೆ ಸ್ಪಂದಿಸಿದ ಸರ್ಕಾರ- ಸೂಕ್ತ ವ್ಯವಸ್ಥೆ ಮಾಡದೆ ಬಿಟ್ಟಿ ಸಲಹೆ ಕೊಟ್ಟ ಎಂಡಿ ಅಕ್ರಮ... NWKRTC: ಬ್ಯಾಡಗಿ ಬಸ್‌ ನಿಲ್ದಾಣದಲ್ಲಿ ಎರಡು ಬಸ್‌ಗಳ ಮಧ್ಯೆ ಸಿಲುಕಿದ ಕಾಲೇಜು ವಿದ್ಯಾರ್ಥಿ- ಚಿಂತಾಜನಕ ಸ್ಥಿತಿ ಸಾರಿಗೆ ನೌಕರರ ಮುಷ್ಕರ: ಆತ್ಮಹತ್ಯೆಗೆ ಯತ್ನಿಸಿದ ನರಸಂಪೇಟೆ ಡಿಪೋ ಚಾಲಕ ಶಂಕರ್ ಗೌಡ್ ಚಿಕಿತ್ಸೆ ಫಲಿಸದೆ ಮೃತ ಬೇಡಿಕೆ ಈಡೇರಿಸದ ಸರ್ಕಾರ: ಸಾರಿಗೆ ನೌಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ನಡುವೆ ಹೋರಾಟ KSRTC ನೌಕರರ ಏಪ್ರಿಲ್‌ ತಿಂಗಳ ವೇತನ ಏ.30ರಂದೆ ಪಾವತಿಸಲು ಎಂಡಿ ಆದೇಶ