ಲಖನೌ: ಸರಿ ಸುಮಾರು ಮೂರು ದಶಕಗಳ ಹಿಂದೆ ಅಯೋಧ್ಯೆಯಲ್ಲಿ ವಿವಾದಿತ ಕಟ್ಟಡ ಧ್ವಂಸ ಮಾಡಿದ್ದ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಸೇರಿ ಹಾಲಿ ಬದುಕಿರುವ 32 ಆರೋಪಿಗಳನ್ನು ಆರೋಪ ಮುಕ್ತಗೊಳಿಸಲಾಗಿದೆ.
ಲಕ್ನೋದಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವು ಇಂದು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸಿಬಿಐ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದರ್ ತೀರ್ಪು ನೀಡಿದ್ದು, ಪ್ರಮುಖ ನಾಯಕರಾದ ಆಡ್ವಾಣಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ಮುರಳಿ ಮನೋಹರ ಜೋಷಿ ಸೇರಿದಂತೆ ಎಲ್ಲಾ 32 ಮಂದಿಯನ್ನೂ ಆರೋಪ ಮುಕ್ತಗೊಂಡಿದ್ದಾರೆ.
ಇಡೀ ಪ್ರಕರಣ ಪೂರ್ವ ಯೋಜಿತ ಕೃತ್ಯ ಎಂದು ಹೇಳಲು ಬರುವುದಿಲ್ಲ ಎಂಬುದಾಗಿ ನ್ಯಾಯಾಧೀಶರು ಅಭಿಪರಾಯಪಟ್ಟಿದ್ದಾರೆ. ಇದರೊಂದಿಗೆ ಬಾಬರಿ ಕಟ್ಟಡ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ 28 ವರ್ಷಗಳ ಕಾನೂನು ಸಮರ ಇತ್ಯರ್ಥಕ್ಕೆ ಬಂದಂತಾಗಿದೆ.
ಪ್ರಕರಣದಲ್ಲಿ ಸುಮಾರು 351 ಸಾಕ್ಷಿಗಳನ್ನು ಹಾಗೂ 600 ದಾಖಲೆಗಳನ್ನು ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ದಶಕಗಳ ವಿಚಾರಣೆ ವೇಳೆ ಆರೋಪಿಗಳ ಪೈಕಿ 17 ಜನರು ಕಾಲವಾಗಿದ್ದಾರೆ.
ಕಳೆದ ವರ್ಷ ರಾಮಜನ್ಮ ಭೂಮಿ ವಿವಾದಕ್ಕೆ ಸಂಬಂಧಿಸಿದ ಐತಿಹಾಸಿಕ ತೀರ್ಪು ಪ್ರಕಟಿಸುವ ವೇಳೆ ವಿವಾದಿತ ಕಟ್ಟಡವನ್ನು ಧ್ವಂಸ ಮಾಡಿದ್ದು ಅಕ್ರಮ ಎಂದು ಸುಪ್ರಿಂ ಕೋರ್ಟು ಅಭಿಪ್ರಾಯಪಟ್ಟಿತ್ತು.
1992ರಲ್ಲಿ ಬಾಬ್ರಿ ಮಸೀದಿ ಕೆಡವಲು ಅಂದಿನ ಬಿಜೆಪಿ ನಾಯಕರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿ ಈ ಪ್ರಕರಣದಲ್ಲಿ ಜೀವಂತವಾಗಿರುವ 32 ಮಂದಿ ಮಸೀದಿ ಧ್ವಂಸ ಮಾಡಲು ಪಿತೂರಿ ನಡೆಸಿದ್ದರು ಎಂದು ಆರೋಪಿಸಿ ಎಫ್‌ಐಆರ್ ದಾಖಲಿಸಲಾಗಿತ್ತು.