NEWSರಾಜಕೀಯ

ಉಪಸಮರಕ್ಕೆ ಜೆಡಿಎಸ್‌ ತಯಾರಿ: ಆರ್‌ಆರ್‌ನಗರ, ಶಿರಾಕ್ಕೆ ಅಭ್ಯರ್ಥಿಗಳ ಹೆಸರು ಶೀಘ್ರ ಘೋಷಣೆ – ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಿರಾ ನಮ್ಮದೇ ಕ್ಷೇತ್ರ. ರಾಜರಾಜೇಶ್ವರಿ ನಗರವೂ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರ. ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಅಚಲವಾಗಿದೆ. ಸೂಕ್ತ, ನ್ಯಾಯ ಸಮ್ಮತ ಅಭ್ಯರ್ಥಿಗಳನ್ನು ಶೀಘ್ರವೇ ಪಕ್ಷ ಘೋಷಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ಪಕ್ಷದ ನಮ್ಮ ಎಲ್ಲಾ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಪಡೆದು ಸೂಕ್ತ ಅಭ್ಯರ್ಥಿಗಳನ್ನು ಶೀಘ್ರವೇ ಪಕ್ಷ ಘೋಷಿಸಲಿದೆ ಎಂದಿದ್ದಾರೆ.

ಶಿರಾ ನಾವು ಗೆದ್ದ ಕ್ಷೇತ್ರವೂ ಹೌದು, ಆಪರೇಷನ್ ಕಮಲ ಮೆಟ್ಟಿ ಉಳಿಸಿಕೊಂಡ ಕ್ಷೇತ್ರವೂ ಹೌದು. ಸತ್ಯಣ್ಣ ಇಲ್ಲಿ ಗೆದ್ದಿದ್ದರು. ಬಿಜೆಪಿಯವರ ಆಮಿಷಕ್ಕೆ ಆಕರ್ಷಿತರಾಗದೇ ಕ್ಷೇತ್ರವನ್ನು ಜೆಡಿಎಸ್‌ಗೆ ಉಳಿಸಿಕೊಟ್ಟಿದ್ದರು. ಸತ್ಯಣ್ಣ ಇದ್ದಿದ್ದರೆ ಈ ಕ್ಷೇತ್ರ ನಮ್ಮಲ್ಲೇ ಇರುತ್ತಿತ್ತು. ನ್ಯಾಯಬದ್ಧವಾಗಿ ಶಿರಾ ನಾವೇ ಗೆಲ್ಲಬೇಕಾದ ಕ್ಷೇತ್ರ ಎಂದು ತಿಳಿಸಿದ್ದಾರೆ.

ಶಿರಾದಲ್ಲಿ ನಾವು ಸೂತಕದ ಮನೆಯಲ್ಲಿದ್ದೇವೆ. ಹೀಗಿದ್ದೂ ಚುನಾವಣೆ ಎದುರಿಸಬೇಕಿರುವುದು ದುರ್ವಿಧಿ. ನಾವು ಅನಿವಾರ್ಯವಾಗಿ ಎದುರಿಸಬೇಕಾದ ನೋವಿನ ಚುನಾವಣೆ ಇದು. ಇತರರು ಇದನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಅವರಿಗೆ ಇದು ಲಾಭ-ನಷ್ಟದ ವಿಚಾರ. ಆದರೆ ನಾವು ಇಲ್ಲಿ ನಮ್ಮ ನೋವಿಗೆ ಗೆಲುವಿನ ಮೂಲಕ ಪರಿಹಾರ ಹುಡುಕ ಬಯಸುತ್ತೇವೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ