NEWSನಮ್ಮರಾಜ್ಯರಾಜಕೀಯ

ಬಿಜೆಪಿ ನಾಯಕರು ನನಗೆ ಸಿಎಂ ಆಫರ್‌ ನೀಡಿದ್ದರು: ಹೊಸ ಬಾಂಬ್‌ ಸಿಡಿಸಿದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಶಿರ (ತುಮಕೂರು): ಬಿಜೆಪಿಯ ರಾಷ್ಟ್ರನಾಯಕರು ನನ್ನನ್ನು 2018 ರ ವಿಧಾನಸಭೆ ಚುನಾವಣೆ ನಂತರ ಮುಖ್ಯಮಂತ್ರಿ ಮಾಡಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಶಿರಾದಲ್ಲಿ ಬುಧವಾರ ನಡೆದ ಜೆಡಿಎಸ್​ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರದಿಂದ ನರೇಂದ್ರ ಮೋದಿ ಅವರೇ ಆಫರ್ ನೀಡಿದ್ದರು. ಐದು ವರ್ಷ ಯಾರೂ ನಿಮಗೆ ತೊಂದರೆ ಕೊಡೊಲ್ಲ ಎಂದಿದ್ದರು. ಆದರೆ ಅಲ್ಲಿನ ವಾತಾವರಣ ನನಗೆ ಒಗ್ಗದ ಕಾರಣ ನಾನು ಅವರ ಆಫರ್‌ ಅನ್ನು ಒಪ್ಪಲಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಯಾದರೇ ರೈತರ ಸಮಸ್ಯೆಗಳಿಗೆ ಸ್ಪಂದಿಸಬಹುದು, ಅವರ ಆಶೋತ್ತರಗಳನ್ನು ಈಡೇರಿಸಬಹುದು ಎಂಬ ಕಾರಣದಿಂದ ನಾನು ಸಿಎಂ ಪದವಿಗೆ ಒಪ್ಪಿಕೊಂಡೆ, ಆದರೆ ಸಂಕುಚಿತ ಮನಸ್ಸಿನ ನಾಯಕರಿಂದಾಗಿ ನಾನು ಸರಿಯಾಗಿ ಸರ್ಕಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಕಾರ್ಯಕರ್ತರ ಮುಂದೆ ತಮ್ಮ ಬೇಸರ ವ್ಯಕ್ತ ಪಡಿಸಿದರು.

ಇನ್ನು ಕಳೆದ ವಿಧಾನಸಭೆ ಫಲಿತಾಂಶ ನೋಡಿ ರಾಜಕೀಯದಿಂದ ನಿರ್ಗಮಿಸಬೇಕು ಎಂದುಕೊಂಡೆ. ಆದರೆ ಕಾಂಗ್ರೆಸ್​ನವರು ತರಾತುರಿಯಲ್ಲಿ ದೇವೇಗೌಡರಿಗೆ ಫೋನ್ ಮಾಡಿ ಕರೆದರು. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡುವಂತೆ ದೊಡ್ಡಗೌಡರು ಒತ್ತಾಯ ಮಾಡಿದ್ದರು, ಎಷ್ಟೇ ಹೇಳಿದರೂ ಕೇಳದೆ ನನಗೆ ಕಾಂಗ್ರೆಸ್​ನವರು ಮುಖ್ಯಮಂತ್ರಿ ಪಟ್ಟ ಕಟ್ಟಿದ್ರು. ನನಗೆ ಸಿಎಂ ಆಗುವ ಆಸೆ ಇರಲಿಲ್ಲ’ ಎಂದು ಅಂದು ನಡೆದ ರಾಜಕೀಯ ಬೆಳವಣಿಗೆಯನ್ನು ಪಕ್ಷದ ಕಾರ್ಯಕರ್ತರಿಗೆ ವಿವರಿಸಿದರು.

ಯಡಿಯೂರಪ್ಪ ಸರ್ಕಾರ ಹಲವು ಜನಪರ ಯೋಜನೆಗಳನ್ನು ಕೈಬಿಟ್ಟಿದೆ ಎಂದು ಆರೋಪಿಸಿದ ಕುಮಾರಸ್ವಾಮಿ ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಹರಿಹಾಯ್ದರು, ಹಣದ ಆಮೀಷಕ್ಕೆ ಬಲಿಯಾಗದಂತೆ ಮತದಾರರಿಗೆ ಮನವಿ ಮಾಡಿದರು. ಇನ್ನೂ ಮಾಜಿ ಪ್ರಧಾನಿ ದೇವೇಗೌಡ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಸೇರಿ ಪಕ್ಷದ ಹಲವಾರು ನಾಯಕರು ಸಭೆಯಲ್ಲಿ ಇದ್ದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ