CrimeNEWSನಮ್ಮರಾಜ್ಯ

ನಾನು ಅಪರಾಧಿ ಅಲ್ಲ ಎಂದು ಕಣ್ಣೀರಿಟ್ಟ ಆ್ಯಂಕರ್ ಅನುಶ್ರೀ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಸಿಸಿಬಿ ತನಿಖೆ ಎದುರಿಸಿರುವ ಕಿರು ತೆರೆ ನಿರೂಪಕಿ ಅನುಶ್ರೀ ತಮ್ಮ ಮನದಾಳದ ನೋವನ್ನು ಫೇಸ್​ಬುಕ್ ಪೇಜ್‌ನಲ್ಲಿ ಅಭಿಮಾನಿಗಳ ಮುಂದಿಟ್ಟಿದ್ದಾರೆ. ಕಣ್ಣೀರು ಸುರಿಸುತ್ತ ನಾನು ಯಾವುದೇ ತಪ್ಪು ಮಾಡಿಲ್ಲ, ಆದರೂ ನನ್ನನ್ನು ಅಪರಾಧಿಯಾಗಿ ಬಿಂಬಿಸಿದ್ದು ತುಂಬಾ ನೋವು ತಂದಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 24 ನಾನು ಜೀವನದಲ್ಲಿ ಮರೆಯಲಾಗದ ದಿನ. 12 ವರ್ಷಗಳ ಹಿಂದೆ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ವಿನ್ ಆಗಿದ್ದು ಅದೇ ಈಗ ಮುಳುವಾಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಎಲ್ಲರೂ ನನ್ನ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. ಸಿಸಿಬಿ ನೋಟಿಸ್ ಬಂದಾಗ ಬೇಜಾರಾಗಲಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿಯಲ್ಲ. ಆದರೆ ನನ್ನನ್ನು ಆ ರೀತಿ ಬಿಂಬಿಸಲಾಯಿತು ಎಂದು ನೊಂದು ನುಡಿದಿದ್ದಾರೆ.

ಅಂತೆಕಂತೆಗಳ ವಿಚಾರ ಸೃಷ್ಟಿ ಯಾಗುತ್ತಿದೆ. ಇದು ನೆಮ್ಮದಿಯನ್ನು ತುಂಬ ಹಾಳು ಮಾಡುತ್ತಿದೆ. ನಮ್ಮ ಮನಸ್ಥಿತಿ ಬಗ್ಗೆ ಸ್ವಲ್ಪ ಯೋಚನೆ ಮಾಡಿ. ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಲ್ಲ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.

ಜತೆಗೆ ಅಪರಾಧಿಯಾಗಿ ಬಿಂಬಿಸಿದ್ದು ತುಂಬಾ ನೋವು ತಂದಿದೆ. ಒಂದು ವಾರದಿಂದ ಮನೆಯವರ ನೆಮ್ಮದಿ ಹಾಳಾಗಿದೆ. ಈ ಕಷ್ಟ ಕಾಲದಲ್ಲಿ ಜನರು ಜತೆ ನಿಂತಿದ್ದಾರೆ ಎಂದು ಅನುಶ್ರೀ ಕಣ್ಣೀರಿಡುತ್ತ ಫೇಸ್​ಬುಕ್ ವಿಡಿಯೋದಲ್ಲಿ ನೋವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ