NEWSನಮ್ಮರಾಜ್ಯರಾಜಕೀಯ

ಬಿಸಿ ತುಪ್ಪ ಬಾಯಲ್ಲಿ!- ಆರ್‌ಆರ್‌ ನಗರ ಮಿನಿ ಫೈಟ್‌: ಒಳ ಏಟಿನ ಆತಂಕದಲ್ಲಿ ಬಿಜೆಪಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಉಪ ಚುನಾವಣೆ ಮುಂದಿನ ತಿಂಗಳು ನಡೆಯಲಿದ್ದು, ಇದಕ್ಕಾಗಿ ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರ ಗರಿಗೆದರಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿರುವ ಮುನಿರತ್ನಗೆ ಟಿಕೆಟ್‌ ಪಕ್ಕ ಎಂದು ಹೇಳಲಾಗುತ್ತಿತ್ತು. ಆದರೆ ಬದಲಾದ ಬೆಳವಣಿಗೆಗಳು ನಡೆಯುತ್ತಿದ್ದು, ಬಿಜೆಪಿ ರಾಜ್ಯ ನಾಯಕರ ನಿದ್ದೆಗೆಡಿಸಿದೆ ಎಂದು ಹೇಳಲಾಗುತ್ತಿದೆ.

ಹೌದು! ಬಿಜೆಪಿ ಟಿಕೆಟ್ ಪಡೆಯುವ ವಿಚಾರದಲ್ಲಿ ಪಕ್ಷದ ನಾಯಕ ಮುನಿರತ್ನಗೆ ಸ್ವಲ್ಪ ಹಿನ್ನಡೆಯಾಗಿದೆ ಎಂದು ತಿಳಿದುಬಂದಿದೆ. ಟಿಕೆಟ್ ಘೋಷಣೆ ವೇಳೆ ತನ್ನ ಹೆಸರು ಮಾತ್ರ ಇರುತ್ತದೆ. ಆರ್‌ಆರ್‌ ನಗರಕ್ಕೆ ತನ್ನ ಹೆಸರೇ ಫೈನಲ್ ಎಂದು ಮುನಿರತ್ನ ನಂಬಿದ್ದರು. ಆದರೆ ಈಗ ಎರಡು ಹೆಸರು ಇರುವ ಕಾರಣ ಮುನಿರತ್ನಗೆ ಗಾಬರಿಯಾಗುತ್ತಿದೆ.

ಬಿಜೆಪಿ ರಾಜ್ಯ ನಾಯಕರನ್ನು ಟಿಕೆಟ್ ವಿಚಾರದಲ್ಲಿ ಸಂಪೂರ್ಣವಾಗಿ ನಂಬುವಂತಿಲ್ಲ. ಮತ್ತೊಬ್ಬ ಬಿಜೆಪಿ ಟಿಕೆಟ್‌ ಆಕಾಂಕ್ಷಿ ತುಳಸಿ ಮುನಿರಾಜು ಗೌಡಗೆ ಕೇಂದ್ರ ವರಿಷ್ಠರ ಬೆಂಬಲ ಇರುವ ಕಾರಣ ಮುನಿರತ್ನ ಅವರ ನಿದ್ದೆ ಗೆಡಿಸಿದೆ ಎಂದು ಹೇಳಲಾಗುತ್ತಿದೆ.

ತುಳಸಿ ಮುನಿರಾಜು ಗೌಡಗೆ ಬಿ.ಎಲ್‌. ಸಂತೋಷ್ ಕೃಪೆ
ತುಳಸಿ ಮುನಿರಾಜು ಗೌಡ ಅವರಿಗೆ ಹಿರಿಯ ಮುಖಂಡ ಬಿ.ಎಲ್‌. ಸಂತೋಷ್ ಅವರ ಸಂಪೂರ್ಣ ಬೆಂಬಲ ಇದೆ. ಹಾಗಾಗಿ, ತುಳಸಿ ಮುನಿರಾಜು ಗೌಡಗೆ ಪರ್ಯಾಯ ವ್ಯವಸ್ಥೆ ಏನು ಎಂದು ನಿರ್ಧಾರ ಆಗಬೇಕಿದೆ. ದೆಹಲಿ ಮಟ್ಟದಲ್ಲಿ ಮುನಿರಾಜು ಗೌಡಗೆ ಪರ್ಯಾಯ ವ್ಯವಸ್ಥೆ ಆಗಬೇಕಿದೆ. ಇದೇ ಕಾರಣಕ್ಕೆ ಕೋರ್ ಕಮಿಟಿಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಆಗಿಲ್ಲ. ಇದೆಲ್ಲವನ್ನು ಗಮನಿಸಿದರೆ ಕೊನೆಯ ಕ್ಷಣದಲ್ಲಿ ದೆಹಲಿ ಮಟ್ಟದಲ್ಲಿ ಬದಲಾವಣೆ ಆದ್ರೂ ಅಚ್ಚರಿಪಡಬೇಕಿಲ್ಲ ಎಂದು ಪಕ್ಷದ ಬಲ್ಲ ಮೂಲಗಳು ಹೇಳುತ್ತಿವೆ.

ಸದ್ಯ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಎಂದು ಇನ್ನೂ ನಿರ್ಧಾರ ಆಗಿಲ್ಲ. ಮುನಿರತ್ನ ಒಬ್ಬರ ಹೆಸರನ್ನಷ್ಟೇ ದೆಹಲಿಗೆ ಕಳುಹಿಸಿದರೆ ಸಮಸ್ಯೆ ಎದುರಾಗಬಹುದು. ಒಂದು ವೇಳೆ, ದೆಹಲಿ ಮಟ್ಟದಲ್ಲಿ ಮುನಿರತ್ನ ಹೆಸರು ಒಪ್ಪಿಕೊಳ್ಳದೇ ಇದ್ದಲ್ಲಿ ಕೋರ್ ಕಮಿಟಿಗೆ ಹಿನ್ನಡೆಯಾಗಲಿದೆ ಎಂದು ಕಾರಣಕ್ಕೆ ಈ ಇಬ್ಬರು ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಈ ಎರಡೂ ಹೆಸರು ಶಿಫಾರಸು ಮಾಡಿದರು ಟಿಕೆಟ್ ಕೊಡಿಸುವ ವಿಶ್ವಾಸವನ್ನುಮುನಿರತ್ನಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ್ದಾರೆ ಎನ್ನಲಾಗುತ್ತಿದೆ.

ಒಂದು ವೇಳೆ ತುಳಸಿ ಮುನಿರಾಜು ಗೌಡಗೆ ಪರ್ಯಾಯ ವ್ಯವಸ್ಥೆ ಆಗದೇ ಇದ್ದಲ್ಲಿ ಸಮಸ್ಯೆ ಎದುರಾಗಬಹುದು. ಇದರಿಂದ, ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಒಳ ಏಟು ಬೀಳುವ ಆತಂಕವೂ ಇದೆ. ಈ ನಡುವೆ ದೆಹಲಿಗೆ ಎರಡೂ ಹೆಸರು ಕಳುಹಿಸಿ ಸಮಸ್ಯೆ ಬಗೆಹರಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂಬ ಮಾಹಿತಿ ಸಿಕ್ಕಿದೆ. ಅದೇ ಏನೆ ಇರಲಿ, ವರಿಷ್ಠರಿಂದ ಅಧಿಕೃತ ಘೋಷಣೆ ಆಗುವವರೆಗೂ ಅಭ್ಯರ್ಥಿ ಯಾರು ಎಂದು ನಿರ್ಧರಿಸಲು ಸಾದ್ಯವಿಲ್ಲ. ಹೀಗಾಗಿ ಆರ್‌ಆರ್‌ ನಗರದಲ್ಲಿ ಬಿಜೆಪಿಗೆ ಸದ್ಯದ ಸ್ಥಿತಿ ನೋಡಿದರೆ ಬಿಸಿತುಪ್ಪ ಬಾಯಲ್ಲಿ ಇಟ್ಟುಕೊಂಡಂತೆ ಕಾಣುತ್ತಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ