ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರು ನಡುವೆ ಸಂಭವುಸುದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಮೃತಪಟ್ಟಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಶಿರಾಡಿಘಾಟ್ನಲ್ಲಿ ನಡೆದಿದೆ.

ಅಪಘಾತದಲ್ಲಿ ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತಪಟ್ಟಿದ್ದಾರೆ.
ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಕಲೇಶಪುರದಲ್ಲಿ ಇದ್ದ ಮದುವೆಗೆ ಹೋಗಿ ಬರುತ್ತಿದ್ದ ವೇಳೆ ಈ ಅಪಘಾತ ಕೆಎಸ್ಆರ್ಟಿಸಿ ರಾಜಹಂಸ ಬಸ್ ಹಾಗೂ ಕಾರು ನಡುವೆ ಶಿರಾಡಿಘಾಟ್ನ ಗುಂಡ್ಯ ಬಳಿ ನಡೆದಿದೆ.
ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಉಪ್ಪಿನಂಗಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮುಂದಿನ ಕ್ರಮ ತೆಗೆದಕೊಂಡಿದ್ದಾರೆ.
Related










