NEWSದೇಶ-ವಿದೇಶರಾಜಕೀಯ

ಅದಾನಿ, ಅಂಬಾನಿಯಂತಹ ದೊಡ್ಡ ಉದ್ಯಮಿಗಳ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ: ರಾಹುಲ್ ಆರೋಪ

ವಿಜಯಪಥ ಸಮಗ್ರ ಸುದ್ದಿ

ಮೊಗ (ಪಂಜಾಬ್): ಮೋದಿ ಸರ್ಕಾರವನ್ನು ಅದಾನಿ, ಅಂಬಾನಿಯಂತಹ ದೊಡ್ಡ ಉದ್ಯಮಿಗಳು ನಿಯಂತ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪಂಜಾಬ್‌ನ ಮೊಗ ಜಿಲ್ಲೆಯ ಬದ್ನಿ ಕಲಲ್‌ನಿಂದ ಜತ್ಪುರಕ್ಕೆ ಟ್ರ್ಯಾಕ್ಟರ್ ಮೆರವಣಿಗೆ ಮೂಲಕ ರೈತರ ಭೂಮಿ ರಕ್ಷಿಸುವ ಯಾತ್ರೆಗೆ ಚಾಲನೆ ನೀಡಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.

ದೊಡ್ಡ ದೊಡ್ಡ ಉದ್ಯಮಿಗಳಿಗೆ ಸಹಾಯವಾಗುವ ಮಸೂದೆ, ಕಾನೂನುಗಳನ್ನುಪ್ರಧಾನಿ ನರೇಂದ್ರ ಮೋದಿ ತರುತ್ತಾರೆಯೇ ಹೊರತು ದೇಶದ ಬಡ ರೈತರಿಗಾಗಿ ಏನೂ ಮಾಡುತ್ತಿಲ್ಲ ಹೀಗಾಗಿ ಇತ್ತೀಚೆಗೆ ಕೇಂದ್ರ ಸರ್ಕಾರ ತಂದಿರುವ ಕೃಷಿ ಮಸೂದೆ ಸೇರಿ ಕೃಷಿ ವಲಯದ ಸುಧಾರಣೆ ಮಸೂದೆಗಳನ್ನು ನಾನು ವಿರೋಧಿಸುತ್ತೇನೆ ಎಂದು ಹೇಳಿದರು.

ಕೇಂದ್ರ ಸರ್ಕಾರ ತಂದಿರುವ ಕೃಷಿ ಮಸೂದೆಯಿಂದ ಸಂತೋಷ, ತೃಪ್ತಿ ಹೊಂದಿದ್ದರೆ ದೇಶಾದ್ಯಂತ ಇಂದು ರೈತರು ಏಕೆ ಪ್ರತಿಭಟನೆ ಮಾಡುತ್ತಿದ್ದರು? ಪಂಜಾಬ್ ನಲ್ಲಿ ಪ್ರತಿಯೊಬ್ಬ ರೈತರೂ ಏಕೆ ವಿರೋಧಿಸುತ್ತಿದ್ದರು ಎಂದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನ ಈ ದೇಶದ ರೈತರ ಜೀವನಕ್ಕೆ ಕಪ್ಪು ಚುಕ್ಕೆಯಾದ ಮಸೂದೆಗಳನ್ನು ತೆಗೆದುಹಾಕಿ ಕಸದ ಬುಟ್ಟಿಗೆ ಎಸೆಯುತ್ತೇವೆ ಎಂಬ ಭರವಸೆಯನ್ನು ನಾನು ಈ ಸಂದರ್ಭದಲ್ಲಿ ಕೊಡುತ್ತೇನೆ ಎಂದರು.

ಕೋವಿಡ್-19 ಸಾಂಕ್ರಾಮಿಕ ರೋಗ, ಅದರಿಂದ ಜನರು ಕಷ್ಟಪಡುತ್ತಿರುವ ಸಮಯದಲ್ಲಿ ತರಾತುರಿಯಿಂದ ಈ ಮಸೂದೆಯನ್ನು ತರುವ ಅಗತ್ಯವೇನಿತ್ತು, ನಿಮಗೆ ಮಸೂದೆಯನ್ನು ಜಾರಿಗೆ ತರಬೇಕೆಂದಿದ್ದರೆ ಲೋಕಸಭೆ, ರಾಜ್ಯಸಭೆಗಳಲ್ಲಿ ಸಮಗ್ರವಾಗಿ ಚರ್ಚಿಸಿ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರ ಪರವಾಗಿ ಕಾನೂನು ರೂಪಿಸಬೇಕಾಗಿತ್ತು. ಅದು ಬಿಟ್ಟು ಸದನದಲ್ಲಿ ಮುಕ್ತವಾಗಿ ಚರ್ಚೆ ನಡೆಸದೆ ಆತುರವಾಗಿ ಮಂಡಿಸಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು