ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದ್ದು ಇಂದು ದಾಖಲೆಯ 10,145 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 6,40,661ಕ್ಕೆ ಏರಿಕೆಯಾಗಿದೆ.
ಕೊರೊನಾದಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 67 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,305ಕ್ಕೆ (ಅನ್ಯ ಕಾರಣಕ್ಕೆ 19 ಮಂದಿ ಮೃತಪಟ್ಟಿರುವುದು ಸೇರಿ) ಏರಿಕೆಯಾಗಿದೆ.
ಇಂದು ಬೆಂಗಳೂರು ನಗರವೊಂದರಲ್ಲೇ ಅತಿ ಹೆಚ್ಚು ಅಂದರೆ 4,340 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ 2,50,040ಕ್ಕೆ ಏರಿಕೆಯಾಗಿದೆ. ಇಂದು 22 ಮಂದಿ ಮೃತಪಟ್ಟಿದ್ದಾರೆ.
ಇಂದು 7,287 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 5,15,782ಕ್ಕೆ ಏರಿಕೆಯಾಗಿದೆ. 1,15,574 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 847 ಮಂದಿ ಐಸಿಯುನಲ್ಲಿದ್ದಾರೆ.