CRIMENEWSನಮ್ಮಜಿಲ್ಲೆ

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ಅದೃಷ್ಟವಶಾತ್ ಚಾಲಕ ಪಾರು

ವಿಜಯಪಥ ಸಮಗ್ರ ಸುದ್ದಿ

ಹೊಳೆನರಸೀಪುರ: ತಾಲೂಕಿನ ಹಳೇಕೋಟೆ ಹೋಬಳಿಯ ಕಾಮಸಮುದ್ರದ ಬಳಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಹೊಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಸನನಿಂದ ಮೈಸೂರು ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಕಾಮಸಮುದ್ರದ ಹತ್ತಿರ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಅತೀ ವೇಗದಲ್ಲಿದ್ದ ಕಾರಣ ಕಾರು ರಸ್ತೆ ಮಧ್ಯದ ಡಿವೈಡರ್‌ಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಚಾಲಕ ಒಬ್ಬರೇ ಇದ್ದಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ.

ಘಟನಾ ಸ್ಥಳಕ್ಕೆ ಬಂದ ಸ್ಥಳೀಯರು ಚಾಲಕನ ನೆರವಿಗೆ ಧಾವಿಸಿದರು. ಅಪಘಾತದಿಂದಾಗಿ ಕಾರಿನ ಮುಂಭಾಗ ಜಖಂಗೊಂಡಿದೆ. ಅಪಘಾತಕ್ಕೆ ಕಾರಣ ಏನು ಎಂಬುವುದು ತನಿಖೆಯಿಂದ ತಿಳಿಯಬೇಕಿದೆ.

Megha
the authorMegha

Leave a Reply

error: Content is protected !!
Latest news
ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ