CrimeNEWSರಾಜಕೀಯ

ಬೆಳ್ಳಂಬೆಳಗ್ಗೆ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸದಾಶಿವ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ, ಟ್ರಬಲ್ ಶೂಟರ್​ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.

ಸದಾಶಿವ ನಗರದಲ್ಲಿರುವ ಮನೆ ಸೇರಿ ಇನ್ನೂ 15 ಕಡೆ ಸಿಬಿಐ ಟೀಂ ದಾಳಿ ನಡೆಸಿದೆ. ಸದಾಶಿವನಗರದಲ್ಲಿರುವ ಶಿವಕುಮಾರ್ ನಿವಾಸದ ಮೇಲೆ ಇಂದು ಐವರು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿಕೆಶಿ ಮನೆಯ ಮೇಲೆ ದಾಳಿ ಮಾಡುವಂತೆ ರಾಜ್ಯ ಸರ್ಕಾರ ಸಿಬಿಐ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 3ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಡಿಕೆಶಿ ಜೈಲು ಸೇರಿದ್ದರು. ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ.

ಕನಕಪುರದಲ್ಲಿಯೂ ಸಿಬಿಐ ರೇಡ್
ಡಿಕೆಶಿ ಸೋದರ ಡಿಕೆ ಸುರೇಶ್ ನಿವಾಸದ ಮೇಲೂ ಸಿಬಿಐ ದಾಳಿ ನಡೆಸಿದೆ. ಕನಕಪುರದ ನಿವಾಸಗಳ ಮೇಲೂ ಸಿಬಿಐ ಸರ್ಚ್ ನಡೆದಿದೆ. ಇಂದು ಬೆಳಗ್ಗೆ ಸದಾಶಿವನಗರದಲ್ಲಿ ಶಿವಕುಮಾರ್ ಮನೆ ಮೇಲೆ ದಾಳಿ ಆರಂಭವಾಗಿದೆ. ಇಂದು ಇಡೀ ದಿನ ಸರ್ಚ್​ ನಡೆಯಲಿದೆ. ಶಿವಕುಮಾರ್ ಬಿಟ್ಟು ಮನೆಯಲ್ಲಿದ್ದ ಎಲ್ಲರನ್ನು ಹೊರಗೆ ಕಳುಹಿಸಿ ಸಿಸಿಬಿ ಅಧಿಕಾರಿಗಳು ಸರ್ಚ್​ ಆರಂಭಿಸಿದ್ದಾರೆ. ರಾಮನಗರದ ದೊಡ್ಡಆಲಹಳ್ಳಿಯಲ್ಲಿರುವ ಡಿಕೆಶಿ ನಿವಾಸದ ಮೇಲೆಯೂ ದಾಳಿ ನಡೆದಿದೆ. ಸ್ಥಳೀಯ ಪೊಲೀಸರಿಗೆ ದಾಳಿ/ ಪರಿಶೀಲನೆ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿದುಬಂದಿದೆ.

ಮತ್ತೆ ದಾಳಿ ಯಾಕೆ?
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ಮತ್ತು ಐಟಿ ಇಲಾಖೆ ವಿಚಾರಣೆ ನಡೆಸಿತ್ತು. ಆ ಪ್ರಕರಣದಲ್ಲಿ ತಿಹಾರ್ ಜೈಲಿಗೂ ಹೋಗಿಬಂದಿದ್ದರು. ತದನಂತರ ಪ್ರಕರಣ ಕೈಬಿಡುವಂತೆ ಡಿಕೆಶಿ ರಾಜ್ಯ ಹೈಕೋರ್ಟ್​ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಬಿಐ ದಾಳಿ ನಡೆಸಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು