NEWSನಮ್ಮರಾಜ್ಯರಾಜಕೀಯ

ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್‌ ಸರ್ವನಾಶ: ಮಾಜಿ ಸಿಎಂ ಎಚ್‌ಡಿಕೆ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮ್ಮದು ಅಳುಬುರಕ ರಾಜಕಾರಣ ಎಂದು ಟೀಕಿಸಿರುವ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್‌ನ ಸರ್ವನಾಶ ಸಿದ್ದರಾಮಯ್ಯರಿಂದಲೇ ಎಂದು ತಿರುಗೇಟು ನೀಡಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲು ಚಿಲ್ಲರೆ ರಾಜಕಾರಣ ಮಾಡುವುದದನ್ನು ಬಿಡಬೇಕು ಎಂದು ಮೂದಲಿಸಿದರು.

ಸಿದ್ದರಾಮಯ್ಯ ಇತಿಹಾಸ ಅವಲೋಕಿಸಿದರೆ ಅವರ ಸಂಸ್ಕೃತಿ ಏನೆಂದು ಗೊತ್ತಾಗಲಿದೆ. ಯಾವ ಪಕ್ಷದಿಂದ ಬೆಳೆದು ಬಂದರೋ ಈಗ ಅದೇ ಪಕ್ಷದ ಸರ್ವನಾಶದ ಬಗ್ಗೆ ಮಾತಾನಾಡುತ್ತಿದ್ದಾರೆ. ಇವತ್ತು ಕಾಂಗ್ರೆಸ್ ಸಿದ್ದರಾಮಯ್ಯನಿಂದಲೇ ಸರ್ವನಾಶ ವಾಗಲಿದೆ ಎಂದು ಭವಿಷ್ಯ ನುಡಿದರು.

ಕಳೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಎಂದು ಹೇಳಿದ್ದರಿಂದ ಮುಸ್ಲಿಂ ಮತಗಳು ವಿಭಜನೆಯಾಗಿದ್ದವು. ಇದೀಗ ಉಪಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಒಳ ಒಪ್ಪಂದ ಎಂದಿದ್ದು, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿಯವರ ಕಣ್ಣನ್ನು ಮತ್ತೆ ಕೆಂಪಗಾಗಿಸಿದೆ.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲಿನ ಸಿಬಿಐ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಎಚ್‌ಡಿಕೆ, ಯಾವುದೇ ಜನಪ್ರತಿನಿಧಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಹೆದರುವ ಅವಶ್ಯಕತೆ ಇಲ್ಲ. ನಾವು ಸರಿಯಾಗಿ ಕೆಲಸ ಮಾಡಿದ್ದೇ ಆದರೆ ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ಧ ಇರಬೇಕು ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಸಾಮಾನ್ಯವಾಗಿ ಇಂತಹ ಸಂದರ್ಭದಲ್ಲಿ ದಾಳಿ ನಡೆದರೆ ಅದನ್ನು ರಾಜಕೀಯ ಪಿತೂರಿ ಎನ್ನುವುದು ಸಹಜ ಎಂದು ಪರೋಕ್ಷವಾಗಿ ಕಾಂಗ್ರೆಸ್ ಅನ್ನು ಕುಟುಕಿದ ಕುಮಾರಸ್ವಾಮಿ, ದೇಶದ ಕಾನೂನು ವ್ಯವಸ್ಥೆಯಲ್ಲಿ ಸತ್ಯಕ್ಕೆ ಜಯ ದೊರಕಲಿದೆ. ಹೀಗಾಗಿ ಸತ್ಯ ಇನ್ನೂ ಹೊರಗೆ ಬರಲಿದೆ. ಸಂವಿಧಾನದಲ್ಲಿ ಸ್ವಾಯತ್ತ ಸಂಸ್ಥೆಗಳು ಗೌರವ ಉಳಿಸುತ್ತವೆ ಎಂಬುದು ತಮ್ಮ ಅಭಿಪ್ರಾಯ ಎಂದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು