NEWSನಮ್ಮಜಿಲ್ಲೆ

ಕೊರೊನಾ: ಮೈಸೂರು ಕೆ.ಆರ್‌. ಆಸ್ಪತ್ರೆಯಲ್ಲಿ ಹಾಸಿಗೆ ಹೆಚ್ಚಳಕ್ಕೆ ಡಿಸಿ ರೋಹಿಣಿ ಸಿಂಧೂರಿ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಮೈಸೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕೆ.ಆರ್‌. ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್​ಗಾಗಿ ಮೀಸಲಿರುವ ಹಾಸಿಗೆಗಳನ್ನು ಹೆಚ್ಚಿಸುವಂತೆ ಸೂಚನೆ ನೀಡಿದ್ದಾರೆ.

ಇನ್ನು ತಜ್ಞ ವೈದ್ಯರು, ನರ್ಸ್​ಗಳು, ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಖ್ಯೆ, ಹಾಸಿಗೆಗಳ ಸಾಮರ್ಥ್ಯ, ಆಕ್ಸಿಜನ್ ಸಿಲಿಂಡರ್ ಹಾಗೂ ವೆಂಟಿಲೇಟರ್‌ಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಕೆ.ಆರ್‌. ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ವಿಭಾಗಕ್ಕೆ ಪಿಪಿಇ ಕಿಟ್ ಧರಿಸಿ ರೋಹಿಣಿ ಸಿಂಧೂರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಆಸ್ಪತ್ರೆಯಲ್ಲಿ 178 ಬೆಡ್​ಗಳಿರುವ ಬಗ್ಗೆಆಸ್ಪತ್ರೆ ಅಧಿಕಾರಿಗಳಿಂದ ತಿಳಿದುಕೊಂಡು ಇನ್ನಷ್ಟು ಹಾಸಿಗೆಗಳ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.

ಇನ್ನೂ 200 ಬೆಡ್​ಗಳನ್ನು ಕೋವಿಡ್ ಚಿಕಿತ್ಸೆಗೆ ಹೆಚ್ಚಿಸುವಂತೆ ಹಾಗೂ ಟ್ರಾಮಾ ಕೇರ್ ಸೆಂಟರ್​ನಲ್ಲೂ ಕೋವಿಡ್ ಚಿಕಿತ್ಸೆಗೆ ಆಕ್ಸಿಜನ್ ಇರುವ ಬೆಡ್‌ಗಳ ವ್ಯವಸ್ಥೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದಾರೆ. ವೈದ್ಯಕೀಯ ಸ್ನಾತಕೋತ್ತರ ಪದವಿಯ ಕೊನೆಯ ವರ್ಷದ 154 ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಸೂಕ್ತ ತರಬೇತಿ ನೀಡುವಂತೆ ಸಲಹೆ ನೀಡಿದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು