NEWSನಮ್ಮರಾಜ್ಯರಾಜಕೀಯ

ತಾವು ಬೆಳೆದ ಪಕ್ಷಗಳಿಗೆ ಕುತ್ತುತರುವ ಚಾಳಿ ಸಿದ್ದುಗೆ ಹೊಸತೇನಲ್ಲ: ಎಚ್‌ಡಿಕೆ ಗುದ್ದು

ಬಿಜೆಪಿ - ಜೆಡಿಎಸ್ ಒಳಒಪ್ಪಂದದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಎಚ್‌ಡಿಕೆ ಉತ್ತರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿ(ಎಸ್) ಒಳಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುವ ಸಿದ್ದರಾಮಯ್ಯ ಅವರ ಬಳಿ ಇದಕ್ಕೆ ಯಾವ ಸಾಕ್ಷಿ ಇದೆ ? “ದೋಸ್ತಿ ದಾಳ” ವನ್ನು ರಾಜಕೀಯವಾಗಿ ಬಳಸಿಕೊಂಡು ತಾವು ಬೆಳೆದ ಪಕ್ಷಗಳಿಗೆ ಕುತ್ತು ತರುವ ಚಾಳಿ ಅವರಿಗೆ ಹೊಸತೇನಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ವೈಯಕ್ತಿಕ ನೆಲೆಯಲ್ಲಿ ಸ್ನೇಹ ವಿಶ್ವಾಸವೇ ಬೇರೆ, ಆದರೆ, ಉಪ ಚುನಾವಣೆ ಘೋಷಣೆಯಾದ ನಂತರ ಪುತ್ರನ ಸ್ನೇಹಿತನನ್ನು ದಾಳವಾಗಿ ಬಳಸಿಕೊಂಡು ಮತ್ತೊಂದು ಪಕ್ಷಕ್ಕೆ ಕಳುಹಿಸುವ ಜಾಯಮಾನ ನನ್ನದಲ್ಲ ಎಂದು ಟ್ವೀಟ್‌ ಮೂಲಕ ಚಾಟಿ ಬೀಸಿದ್ದಾರೆ.

ನನಗೂ ಪಕ್ಷಾತೀತವಾಗಿ ಹಿರಿಯ, ಕಿರಿಯ ಸ್ನೇಹಿತರಿದ್ದಾರೆ. ಪವಿತ್ರ ಸ್ನೇಹವನ್ನು ನಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿಲ್ಲ. ಆದರೆ, ಸಿದ್ದರಾಮಯ್ಯ ಅವರಿಗೆ ಇದೊಂದು ಅಂಟುಜಾಡ್ಯ ಇದೆ ಎಂಬುದನ್ನು ಸಾಬೀತು ಪಡಿಸುತ್ತಲೆ ಬಂದಿದ್ದಾರೆ. ಉಪಚುನಾವಣೆ ಘೋಷಣೆಯಾದ ನಂತರ ಪುತ್ರನ ಗೆಳೆಯನನ್ನು ಬಿಜೆಪಿಗೆ ಕಳುಹಿಸಿರುವ ಮರ್ಮವನ್ನು ಕಾಂಗ್ರೆಸ್ಸಿಗರೂ ಬಲ್ಲರು! ಎಂದು ಜಾಡಿಸಿದ್ದಾರೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...