NEWSನಮ್ಮರಾಜ್ಯಶಿಕ್ಷಣ

SSLC ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2026 ನೇ ಮಾರ್ಚ್ 18 ರಿಂದ ಅಂದರೆ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿಗಳು ಸದನದಲ್ಲಿ ಶುಭಾಶಯ ಕೋರಿದ್ದಾರೆ.

ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದ್ದು, ಮೂರು ಹಂತದಲ್ಲಿ ಪರೀಕ್ಷೆಗಳು ನಡೆಯುತ್ತವೆ. ಒಂದು ವೇಳೆ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾಗ್ಯೂ ಎರಡನೇ ಹಂತ, ಮೂರನೇ ಹಂತದಲ್ಲಿ ಪರೀಕ್ಷೆಗೆ ಅವಕಾಶ ಇರುವುದರಿಂದ ಯಾವುದೇ ವಿದ್ಯಾರ್ಥಿಗಳು ಆತಂಕಗೊಳ್ಳದೆ ಪರೀಕ್ಷೆಯನ್ನು ಎದುರಿಸುವಂತೆ ತಿಳಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಧೈರ್ಯವಾಗಿ ಪರೀಕ್ಷೆ ಬರೆಯಲು ತಿಳಿಸಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶುಭಾಶಯ ಕೋರಿ ಈ ಹಿಂದೆ ಮಕ್ಕಳು ಒತ್ತಡದಿಂದ ಪರೀಕ್ಷೆಗೆ ಹಾಜರಾಗುತ್ತಿದ್ದರು. ಈಗ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಮೂರು ಹಂತದಲ್ಲಿ ಪರೀಕ್ಷೆಗಳು ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ಆತಂಕ ಪಡದೆ ಪರೀಕ್ಷೆಗೆ ಹಾಜರಾಗಲು ತಿಳಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.

ವಿಪಕ್ಷದ ನಾಯಕ ಆರ್.ಅಶೋಕ್ ಶುಭಾಶಯ: ವಿಪಕ್ಷದ ನಾಯಕ ಆರ್. ಅಶೋಕ್ ರವರು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ ಪೋಷಕರು ಮಕ್ಕಳಿಗೆ ಮಾನಸಿಕ ಹಿಂಸೆ ನೀಡಬಾರದು ಎಂದು ಕಿವಿಮಾತು ಹೇಳಿದರು. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗುತ್ತಿದೆ ಎಂದು ಸುದ್ದಿಗಳು ಬರುತ್ತಿವೆ. ಈ ಬಗ್ಗೆ ಶಿಕ್ಷಣ ಸಚಿವರು ಸುದ್ದಿ ಗೋಷ್ಠಿ ನಡೆಸಿ ಈ ಬಗ್ಗೆ ಎಚ್ಚರಿಕೆ ನೀಡುವಂತೆ ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...