CrimeNEWSನಮ್ಮಜಿಲ್ಲೆ

ಮದುವೆ ಮಾತುಕತೆ ನೆಪ: ಪ್ರೇಯಸಿ ಪೋಷಕರಿಂದ ಪ್ರೇಮಿಯ ಕೊಲೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಮದುವೆ ಮಾಡಿಕೊಡುವ ವಿಚಾರವಾಗಿ ಮಾತನಾಡಬೇಕು ಬಾ ಎಂದು ಪ್ರೀತಿಸಿದ್ದ ಹುಡುಗಿ ಮನೆಯವರು ಯುವಕನನ್ನು ಕರೆಸಿಕೊಂಡು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕನಕೇನಹಳ್ಳಿ ಬಳಿ ನಡೆದಿದೆ.

ಲಕ್ಷ್ಮೀಪತಿ (24) ಮೃತ ಯುವಕ. ನೆಲಮಂಗಲ ತಾಲೂಕಿನ ಬಸವನಹಳ್ಳಿ ನಿವಾಸಿಯಾದ ಲಕ್ಷ್ಮೀಪತಿ ಹಾಗೂ ಅಂಬ್ರಿನಾ ಇಬ್ಬರೂ 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಒಂದು ಜೀವ ಎರಡು ದೇಹದಂತಿತ್ತು ಇವರ ಪ್ರೀತಿ. ಹೀಗಾಗಿ ಇಸ್ಲಾಂ ಧರ್ಮದ ರೀತಿಯಲ್ಲಿ ಮದುವೆ ಮಾಡುವ ಸಲುವಾಗಿ ಮಾತುಕತೆ ವಿಚಾರವಾಗಿ ಕರೆಸಿ ಯುವಕನನ್ನು ಹತ್ಯೆ ಮಾಡಲಾಗಿದೆ.

ಅನ್ಯ ಧರ್ಮಿಯ ಎಂಬ ಕಾರಣಕ್ಕೆ ಕುತ್ತಿಗೆಗೆ ಬೆಲ್ಟ್‌ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಅಂಬ್ರಿನಾ ಅಪ್ಪ ನಜೀಮುದ್ದೀನ್, ತಮ್ಮ ಸಿಕಂದರ್ ಸೇರಿದಂತೆ ನಾಲ್ವರ ವಿರುದ್ಧ ಲಕ್ಷ್ಮೀಪತಿ ಕೊಲೆ ಆರೋಪ ಕೇಳಿ ಬಂದಿದ್ದು, ನಜೀಮುದ್ದೀನ್, ಸಿಕಂದರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾಗಿರುವ ಮತ್ತಿಬ್ಬರ ಬಂಧನಕ್ಕಾಗಿ ಕುದೂರು ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?