NEWSನಮ್ಮರಾಜ್ಯರಾಜಕೀಯ

ಅಧಿಕಾರದಲ್ಲಿದ್ದಾಗಲೇ ಸಿದ್ದರಾಮಯ್ಯಗೆ ಅರ್ಧಚಂದ್ರ ತೋರಿಸಿದ ಜನತೆ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಕಲ್ಯಾಣಕ್ಕೆ ದೂರದೃಷ್ಟಿಯ ಕಾರ್ಯಸಾಧ್ಯವಾದ ಯೋಜನೆಗಳನ್ನು ರೂಪಿಸುವಲ್ಲಿ ಎಡವಿದ್ದ ಸಿದ್ದರಾಮಯ್ಯ ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರುವ ಆಡಳಿತಕ್ಕೆ ಕಳೆದ ಬಾರಿ ತಕ್ಕ ಶಾಸ್ತಿ ಮಾಡಿದ್ದರು. ಇವರ ದುರಾಡಳಿತವನ್ನು ಜನತೆ ಇನ್ನೂ ಮರೆತಿಲ್ಲ. ಉಪಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದರು.

ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ ‘ಕೈ’ವಾಡ ಕೂಡ ಕಾರಣ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಹತ್ತಾರು ಮಂದಿ ಪೈಕಿ ‘ಎದೆ ಸೀಳಿದರೆ ಸಿದ್ದು ಕಾಣುತ್ತಾರೆ’ ಎಂಬ ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು ಎಂದು ಕಿಡಿಕಾರಿದ್ದಾರೆ.

ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಮೂವರು ಶಾಸಕರು ಕದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ? ಎಂದು ಗೊತ್ತಿಲ್ಲದ ಜಾಣ ಪೆದ್ದ ನಾಗಿದ್ದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?