NEWSನಮ್ಮರಾಜ್ಯಸಂಸ್ಕೃತಿ

ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆತ್ಮಶುದ್ಧಿ, ಪರೋಪಕಾರ, ತ್ಯಾಗ, ದಾನಗಳ ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ ನೀಡಲಿ. ದ್ವೇಷ – ಅಪನಂಬಿಕೆಗಳು ಅಳಿದು ಸೋದರತೆ, ಸೌಹಾರ್ದತೆಯ ಸಂಬಂಧ ಇನ್ನಷ್ಟು ಗಟ್ಟಿಯಾಗಲಿ ಎಂದು ಹಾರೈಸುತ್ತೇನೆ. ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್‌ನ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಮಾತನಾಡಿದ ಅವರು, ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ ಎಂದರು.

ಹೆಜ್ಜೇನು ದಾಳಿ: ರಂಜಾನ್ ಸಾಮೂಹಿಕ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿಯಿಂದ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಬಳಿ ನಡೆದಿದೆ. ಗಾಯಾಳುಗಳ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ರಂಜಾನ್ ಪ್ರಯುಕ್ತ ಸುಮಾರು 800ಕ್ಕೂ ಅಧಿಕ ಮುಸ್ಲಿಂ ಬಾಂಧವರು ಆನಗೋಡು ಬಳಿಯ, ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿ ಇರುವ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ಹೆಜ್ಜೇನು ಗೂಡಿಗೆ ಕೆಲ ಯುವಕರು ಕಲ್ಲು ಹೊಡೆದಿದ್ದಾರೆ ಎನ್ನಲಾಗಿದೆ. ಈ ಪರಿಣಾಮ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ.

ಹೆಜ್ಜೇನು ದಾಳಿ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಯುವಕರು ಮಕ್ಕಳು ಹೆಣ್ಣು ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಗೆ ಒಳಗಾದವರ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಜ್ಜೇನು ದಾಳಿ ನಡೆಸುತ್ತಿದ್ದಂತೆ ಒಣ ಹುಲ್ಲಿಗೆ ಬೆಂಕಿ ಹಾಕಿ ಹೊಗೆ ಮೂಲಕ ಸ್ಥಳೀಯರು ಜೇನು ಓಡಿಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

Deva
the authorDeva

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...