NEWSನಮ್ಮಜಿಲ್ಲೆಬೆಂಗಳೂರು

GBA: ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು- ಆಯುಕ್ತ ರಾಜೇಂದ್ರ ಚೋಳನ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಮಾ.22: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಅಳವಡಿಸಿದ್ದ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗ್ಗೆಯಿಂದ ನಮ್ಮ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ತೆರವುಗೊಳಿಸುವ ಕಾರ್ಯ ನಿರ್ವಹಿಸುವ ಮೂಲಕ ತಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಅನಧಿಕೃತವಾಗಿ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸುವುದರಿಂದ ನಗರದ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ. ರಸ್ತೆಯಲ್ಲಿ ಅಡ್ಡಲಾಗಿ ಹಾಕುವುದು ಅಲ್ಲದೆ ಮರಗಳು ಹಾಗೂ ಕಂಬಗಳಿಗೆ ಹಾಕುವುದರಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗುವುದರ ಜತೆಗೆ ಜೋರಾದ ಮಳೆ, ಗಾಳಿ ಬಂದ ಸಂದರ್ಭದಲ್ಲಿ ಬಿದ್ದು ಸಾರ್ವಜನಿಕರಿಗೆ ಸಮಸ್ಯೆಯಾಗಲಿದೆ ಎಂಬ ಕಾರಣಕ್ಕೆ ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೆವು.

ಅದರಂತೆ ಆಯಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ಗಳು, ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು, ಸ್ವಚ್ಛತಾ ಸಿಬ್ಬಂದಿಗಳು ಸೇರಿ ಫ್ಲೆಕ್ಸ್ ಮತ್ತು ಬ್ಯಾನರ್ ತೆರವುಗೊಳಿಸಿದ್ದಾರೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್... ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ...