CRIMENEWSನಮ್ಮಜಿಲ್ಲೆ

ಲಾರಿ -ಟಿ.ಟಿ.ವಾಹನ ನಡುವೆ ಭೀಕರ ಅಪಘಾತ: ಕಾಶಿ ತೀರ್ಥಯಾತ್ರೆಗೆ ಹೊರಟಿದ್ದ ಮೂವರು ಮೃತ, 12 ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು, ಮಾ.22: ಲಾರಿ ಹಾಗೂ ಟಿ.ಟಿ.ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಶಿ ತೀರ್ಥಯಾತ್ರೆಗೆ ಹೊರಟಿದ್ದ ತುಮಕೂರು ಜಿಲ್ಲೆಯ ತಿಪಟೂರಿನ ಮೂವರು ಮಹಿಳೆಯರು ಮೃತಪಟ್ಟಿದ್ದು 12 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವನಹಳ್ಳಿ ಬಳಿ ಇಂದು ಬೆಳಗಿನ ಜಾವ ನಡೆದಿದೆ.

ತಿಪಟೂರಿನ ವಿದ್ಯಾನಗರ ನಿವಾಸಿಗಳಾದ ಜಯಮ್ಮ (65) ಯಶೋದಮ್ಮ (60) ಮತ್ತು ಗಂಗಾ (40) ಮೃತಪಟ್ಟವರು. ಇನ್ನು ಟಿ.ಟಿ ವಾಹನದಲ್ಲಿದ್ದ ಇತರ 12 ಮಂದಿಯೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಶಿಗೆ ಮಹಿಳೆಯರ 15 ಮಂದಿಯ ತಂಡ ಶನಿವಾರ ರಾತ್ರಿ 10ಕ್ಕೆ ತಿಪಟೂರಿನಿಂದ ಟಿಟಿ ವಾಹನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿತ್ತು. ಇಂದು ಬೆಳಗ್ಗಿನ ಜಾವ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಸಮೀಪ ಟಿ.ಟಿ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಈ ಅವಘಡ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ದೇವನಹಳ್ಳಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿದ ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ?