NEWSದೇಶ-ವಿದೇಶರಾಜಕೀಯ

ಕೊರೊನಾ ಮಧ್ಯೆ ಬೈಎಲೆಕ್ಷನ್‌ ಬೇಕಿತ್ತ: ಮಾಜಿ ಸಿಎಂ ಎಚ್‌ಡಿಕೆ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಿರಾದಲ್ಲಿ ಉಪ ಚುನಾವಣೆ ನಿಮಿತ್ತ ಪ್ರಚಾರ ಸಭೆ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಬಳಿಕ ಎರಡು ದಿನ ಜ್ವರದಿಂದ ಬಳಲಿದ್ದಾರೆ. ಇದರಿಂದ ಸಿಟ್ಟಾಗಿರುವ ಅವರು, ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ಜವಾಬ್ದಾರಿ ಇದ್ದಿದ್ದರೆ ಕೊರೊನಾ ವೇಳೆ ಶಿರಾ ಹಾಗೂ ಆರ್‌ಆರ್‌ ನಗರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸುತ್ತಿರಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೊರೊನಾ ವೇಳೆ ಕೇಂದ್ರ ಸರ್ಕಾರ ಜನಗಳ ಜೀವದ ಜತೆ ಆಟವಾಡುತ್ತಿದೆ. ಈ ವೇಳೆ ದೇಶದಲ್ಲಿ ಚುನಾವಣೆ ನಡೆಸುವ ಅವಶ್ಯಕತೆಯೇ ಇರಲಿಲ್ಲ. ಇನ್ನೂ ಸ್ವಲ್ಪದಿನ ಚುನಾವಣೆ ಮುಂದೂಡಿದ್ರೆ ಏನಾಗುತ್ತಿತ್ತುಎಂದು ಪ್ರಶ್ನಿಸಿದರುವ ಅವರು, ಮೊನ್ನೆ ಶಿರಾ ಕ್ಷೇತ್ರದಲ್ಲಿ ನಾನು ಸಭೆ ನಡೆಸಿದ್ದೆ. ನಂತರ ಎರಡು ದಿನ ಜ್ವರ ಬಂದು ಮನೆಯಲ್ಲಿ ಮಲಗಿದ್ದೆ ಎಂದು ಹೇಳಿದರು.

ಇನ್ನು ಚುನಾವಣೆ ಹಿನ್ನೆಲೆ ನಾವು ಪ್ರಚಾರಕ್ಕೆ ಹೋಗಲೇಬೇಕಾಗುತ್ತದೆ. ಅಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಳ್ಳುವುದಕ್ಕೆ ಆಗುತ್ತಾ? ಎಲ್ಲರೂ ಮಾಸ್ಕ್ ಹಾಕಿ ಬರ್ತಾರಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ನಮ್ಮ ಕಥೆ ಬಿಡಿ. ಸಾಮಾನ್ಯ ಜನರ ಆರೋಗ್ಯ ಏನಾಗಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಸ್ವಲ್ಪನೂ ಯೋಚನೆ ಮಾಡಲಿಲ್ಲ ಎಂದು ಮಾಜಿ ಸಿಎಂ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

Leave a Reply

error: Content is protected !!
LATEST
KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌