ರಾಮನಗರ: ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಕೇರಳ ಮೂಲದ ಖಾಸಗಿಯ ಪಿ.ಕೆ.ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ.
ಈ ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದ್ದು, ಇನ್ನು ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಇತ್ತ ವಿಷಯ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್(22), ಸುಲ್ಫಿ (45), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್(45) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಮೃತರು.
ಕೇರಳದ ಕಣ್ಣೂರಿನ ಅಬ್ದುಲ್, ಅಲೇನ್ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related










