NEWSನಮ್ಮರಾಜ್ಯಶಿಕ್ಷಣ-

ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೇ. .41.28ರಷ್ಟು ತೇರ್ಗಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ರಾಜ್ಯಾದ್ಯಂತ ಒಟ್ಟು 2,12,678 ವಿದ್ಯಾರ್ಥಿಗಳು ತೆಗೆದುಕೊಂಡಿದ್ದು ಇವರ ಪೈಕಿ 87,784 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ

ಕಳೆದ ‌ ಸೆಪ್ಟೆಂಬರ್ 7 ರಿಂದ 19ರವರೆಗೆ ಒಟ್ಟು 305 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆದಿತ್ತು. ಇಂದು ಫಲಿತಾಂಶ ಪ್ರಕಟವಾಗಿದ್ದು ಶೇ. .41.28ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಫಲಿತಾಂಶ www.karresults.nic.in  ನಲ್ಲಿ ಪ್ರಕಟವಾಗಿದ್ದು, ಈ ಪೂರಕ ಪರೀಕ್ಷೆಯಲ್ಲಿ ಸಹ ವಿದ್ಯಾರ್ಥಿಗಳಿಗೆ ಹೋಲಿಸಿದರೆ ವಿದ್ಯಾರ್ಥಿನಿಯರೇ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಯಾಗಿದ್ದಾರೆ.

ಶೇ.45ರಷ್ಟು ವಿದ್ಯಾರ್ಥಿನಿಯರು, ಶೇ. 38.30ರಷ್ಟು ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ಇದಲ್ಲದೆ ವಿಜ್ಞಾನ ವಿಭಾಗದಲ್ಲಿ ಶೇ.37.45, ವಾಣಿಜ್ಯ ವಿಭಾಗದಲ್ಲಿ ಶೇ.39.02 ಹಾಗೂ ಕಲಾ ವಿಭಾಗದಲ್ಲಿ ಶೇ.45.14 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಕನ್ನಡ ಮಾದ್ಯಮದಲ್ಲಿ ವ್ಯಾಸಂಗ ಮಾಡಿದ್ದ ಶೇ.45.41 ಹಾಗೂ ಆಂಗ್ಲ ಮಾದ್ಯಮದಲ್ಲಿ ವ್ಯಾಸಂಗ ಮಾಡಿದ್ದ ಶೇ.35.89 ವಿದ್ಯಾರ್ಥಿಗಳು ಈ ಬಾರಿ ತೇರ್ಗಡೆ ಹೊಂದಿದ್ದಾರೆ ಎಂದು ಪರೀಕ್ಷೆ ಮಂಡಳಿ ತಿಳಿಸಿದೆ.

Leave a Reply

error: Content is protected !!
LATEST
ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ