NEWSನಮ್ಮರಾಜ್ಯರಾಜಕೀಯ

ಮದ್ಯದಂಗಡಿಗಳ ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಅವಕಾಶ ಮಾಡಿಕೊಟ್ಟ ಸರ್ಕಾರ: ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಾಕ್ ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳ ಸಿಬ್ಬಂದಿಗೂ ವೇತನವಿಲ್ಲ. ದೂರು ದುಮ್ಮಾನ ಪರಿಹರಿಸುವವರು ಯಾರು ಎಂದು ಸರಣಿ ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ. ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ,ಆತ್ಮವಿಶ್ವಾಸ ಮೂಡಿಸುತ್ತಿವೆ. ಮಹಿಳೆಯರಿಗೆ ಆಸರೆಯಾಗಿದ್ದ ಈ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದ ಮುಖ್ಯಮಂತ್ರಿಗಳು ಇದುವರೆಗೂ ಸಾಂತ್ವನ ಕೇಂದ್ರಗಳಿಗೆ ಒಂದು ನಯಾಪೈಸೆ ಬಿಡುಗಡೆ ಮಾಡದಿರುವುದು ಕೋವಿಡ್-19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಈ ಬಗ್ಗೆ ಮೌನಕ್ಕೆ ಶರಣಾಗಿದೆ ಎಂದು ಆರೋಪಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...