NEWSಬೆಂಗಳೂರು

GBA ಉತ್ತರ- ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಗುತ್ತಿಗೆದಾರರಿಗೆ ದಂಡ: ಆಯುಕ್ತ P.S.ಕುಮಾರ್ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಕ್ಕೂರು ರೈಲ್ವೇ ಸೇತುವೆ ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸದಿದ್ದಲ್ಲಿ ಗುತ್ತಿಗೆದಾರರಿಗೆ ದಂಡ ವಿಧಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಸೂಚನೆ ನೀಡಿದರು.

ಇಂದು ಜಕ್ಕೂರು ರೈಲ್ವೇ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿ, ಬಾಕಿ ಇರುವ ಕೆಲಸಗಳು ಹಾಗೂ ಎದುರಾಗುತ್ತಿರುವ ತಾಂತ್ರಿಕ ಅಡಚಣೆಗಳ ಕುರಿತು ಸ್ಥಳದಲ್ಲೇ ಪರಿಶೀಲನೆ ನಡೆಸಿ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ರೈಲ್ವೆ ಸೇತುವೆ ಕಾಮಗಾರಿ ಸ್ಥಳ ತಪಾಸಣೆ ನಡೆಸಿದ ಸಮಯದಲ್ಲಿ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದಿರುವುದನ್ನು ಗಮನಿಸಿದ ಆಯುಕ್ತರು, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಈ ಕಾಮಗಾರಿಯನ್ನು ಏ.20 ರೊಳಗೆ ಪೂರ್ಣಗೊಳಿಸಲು ಸೂಚನೆ ನೀಡುವುದರೊಂದಿಗೆ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳ್ಳದಿದ್ದಲ್ಲಿ ಗುತ್ತಿಗೆದಾರರಿಗೆ ದಂಡ ವಿಧಿಸಲು ನಿರ್ದೇಶಿಸಿದರು.

ಪರಿಶೀಲನೆ ವೇಳೆ ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್, ಮುಖ್ಯ ಅಭಿಯಂತರ ರಾಘವೇಂದ್ರ ಪ್ರಸಾದ್, ಅಧೀಕ್ಷಕ ಅಭಿಯಂತರ ಪ್ರಕಾಶ್, ಕಾರ್ಯಪಾಲಕ ಅಭಿಯಂತರ ನಾಗಪ್ಪ ಕಮತಿ ಸೇರಿದಂತೆ ಇತರೆ ಅಭಿಯಂತರು ಇದ್ದರು.

Megha
the authorMegha

Leave a Reply

error: Content is protected !!
Latest news
ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ?