NEWSನಮ್ಮರಾಜ್ಯಶಿಕ್ಷಣ-

ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತಕ್ಕೆ ಸಿಎಂ ಬಿಎಸ್‌ವೈ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಗೊಳಿಸಲು ಮುಖ್ಯಮಂತ್ರಿ ಬಿಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ನಂತರ ಈ ಆದೇಶವನ್ನು ಹೊರಡಿಸಿದ್ದಾರೆ.

ವಿಶ್ವಮಾರಿ ಕೊರೊನಾ ತೀವ್ರವಾಘಿ ಹರಡುತ್ತಿರುವ ಈ ವೇಳೆ ಶಾಲೆ ತೆರೆಯುವುದಕ್ಕೆ ಸರ್ಕಾರ ಸಜ್ಜಾಗಿತ್ತು. ಇದಕ್ಕೆ ಪಾಲಕರಿಂದ ತೀವ್ರ ವಿರೋಧವು ವ್ಯಕ್ತವಾಗಿತ್ತು. ಆದರೂ ಹಠ ಬಿಡದ ಸರ್ಕಾರ ಶಾಲೆ ತೆರೆಯುವ ನಿರ್ಧಾರ ಕೈಗೊಂಡಿತ್ತು. ಈ ಬಗ್ಗೆ ಜಾಗೃತಿ ಮೂಡಿಸಲು ಮಾಧ್ಯಮಗಳ ಅಭಿಯಾನವನ್ನು ಆರಂಭಿಸಿ, ಶಾಲೆ ತೆರೆಯುವುದರಿಂದ ಆಗುವ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದವು.

ಸದ್ಯ ಮಾಧ್ಯಮಗಳ ಅಭಿಯಾನ ಪಾಲಕರ ಆತಂಕವನ್ನು ಅರ್ಥಮಾಡಿಕೊಂಡಿರುವ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸದ್ಯ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಶಾಲೆ ತೆರೆಯುವ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಚಿವ ಸುರೇಶ್‌ ಕುಮಾರ್‌  ತಮ್ಮ ಫೇಸ್‌ಬುಕ್‌ನಲ್ಲಿ ಹೇಳಿರುವುದೇನು?
ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ.

ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ.

ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ‌ ಹಾಗೂ ಅದರ ಸಮರ್ಪಕ‌ ವಿಶ್ಲೇಷಣೆ‌ ಪೂರ್ಣಗೊಳ್ಳುವವರೆಗೂ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...