NEWSರಾಜಕೀಯಶಿಕ್ಷಣ-

ವಿದ್ಯಾಗಮನ ಶಿಕ್ಷಣದ ಯಡವಟ್ಟು ನಿಲ್ಲಿಸದಿದ್ದರೆ ಅಹೋರಾತ್ರಿ ಧರಣಿ: ಎಚ್ಚರಿಕೆ ನೀಡಿದ್ದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದರು.

ಮಕ್ಕಳು ಮತ್ತು ಶಿಕ್ಷಕರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯಸರ್ಕಾರ ಸೋಮವಾರದೊಳಗೆ ವಿದ್ಯಾಗಮನ ಶಿಕ್ಷಣದ ಯಡವಟ್ಟನ್ನು ನಿಲ್ಲಿಸದಿದ್ದರೆ ವಿಧಾನಸೌಧ ಇಲ್ಲವೇ ಸ್ವಾತಂತ್ರ್ಯ ಉದ್ಯಾನದ ಬಳಿ ಅಹೋರಾತ್ರಿ ಧರಣಿ ಕೂರುವುದಾಗಿ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್ಚರಿಕೆ ನೀಡಿದರು. ಈದನ್ನು ಅರಿತ ಸರ್ಕಾರ ವಿದ್ಯಾಗಮ ಶಿಕ್ಷವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ವೇತನ ಹಾಗೂ ಸೌಲಭ್ಯಗಳ ಕಡಿತದ ಬೆದರಿಕೆ ಒಡ್ಡಿ ಸಾವಿನ ದವಡೆಗೆ ನೂಕಿದ ಶಿಕ್ಷಕರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಆ ಕುಟುಂಬದ ಅರ್ಹ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಕ್ಕಳಿಗೆ ಶಿಕ್ಷಣಕೊಡುವ ಸೋಗಿನಲ್ಲಿ ಶಿಕ್ಷಣ ಸಚಿವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆಗಳನ್ನು ನೀಡುತ್ತಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೀವಕ್ಕೆ ಕುತ್ತು ತರುತ್ತಿರುವುದು ಖಂಡನೀಯ ಹಾಗೂ ಅಮಾನವೀಯ. ಈ ವರ್ಷ ಶಾಲೆ ಆರಂಭಿಸದಿದ್ದರೆ ದೇಶ ಮುಳುಗಿ ಹೋದೀತೆ? ಇಂತಹದೊಂದು ಹುಚ್ಚಾಟ ಸರ್ಕಾರಕ್ಕೆ ಬೇಕೆ? ಇದೊಂದು ನಾಗರಿಕ ಸರ್ಕಾರವೇ ಎಂದು ಪ್ರಶ್ನಿಸಿದ್ದರು.

ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರ ಕನಿಷ್ಠ ಆಕ್ಸಿಜನ್ ಒದಗಿಸಲು ಪರದಾಡುತ್ತಿದೆ. ಜನಪ್ರತಿನಿಧಿ ಇರಲಿ, ಸಾಮಾನ್ಯ ಪ್ರಜೆ ಇರಲಿ, ಜೀವ ರಕ್ಷಣೆ ಮಾಡಬೇಕಾದದ್ದು ಸರ್ಕಾರದ ಮೊದಲ ಆದ್ಯತೆ ಮತ್ತು ಕರ್ತವ್ಯ. ಜೀವ ಉಳಿದರೆ ತಾನೇ ಬದುಕು ಎಂದು ಹೇಳಿದ್ದರು.

ನನ್ನ ಜೀವ ಹೋದರೂ ಪರವಾಗಿಲ್ಲ. ಮಂಗಳವಾರದಿಂದ ಸರ್ಕಾರದ ಅನಾಗರಿಕ, ನಿರ್ಲಜ್ಜ ನೀತಿ, ನಿರ್ಧಾರದ ವಿರುದ್ಧ ಅಹೋರಾತ್ರಿ ಧರಣಿ ಆರಂಭಿಸುತ್ತೇನೆ ಎಂದು ಕಡಕ್‌ ಎಚ್ಚರಿಕೆ ನೀಡಿದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...