CRIMENEWSನಮ್ಮಜಿಲ್ಲೆ

KSRTC ಬಸ್-ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ- ಬಳಿಕ ಗಲಾಟೆ ಚಾಲಕ, ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ ಲಾರಿ ಚಾಲಕ

ವಿಜಯಪಥ ಸಮಗ್ರ ಸುದ್ದಿ

ವಿಟ್ಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಹೊಡೆದಿದ್ದು ಅದೃಷ್ಟವಾಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲದೆ ಎಲ್ಲರು ಸುರಕ್ಷಿತವಾಗಿರುವ ಘಟನೆ ಮುಚ್ಚಿರಪದ ಎಂಬಲ್ಲಿ ನಡೆದಿದೆ.

ಆದರೆ, ಈ ಅಪಘಾತದ ನಂತರ ಬಸ್ ಚಾಲಕ ಮತ್ತು ಟಿಪ್ಪರ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಧ್ಯೆಬಂದ ಕರ್ತವ್ಯದಲ್ಲಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಪ್ರಶಾಂತ್ ಮೇಲೆ ಟಿಪ್ಪರ್ ಚಾಲಕ ಬಿಲಾಲ್ ಎಂಬಾತ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾನೆ.

ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡ ಹೋದ ಬಳಿಕ ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೂ ಬಿಲಾಲ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇತ್ತ ಹಲ್ಲೆಯಿಂದ ಗಾಯಗೊಂಡ ಕಂಡಕ್ಟರ್ ಪ್ರಶಾಂತ್ ಅವರನ್ನು, ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಟಿಪ್ಪರ್ ಚಾಲಕ ಅತೀವೇಗವಾಗಿ ಬಂದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಪಕಳಕುಂಜದಿಂದ ವಿಟ್ಲಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿತ್ತು ಮತ್ತು ಪೆರುವಾಯಿ ಕಡೆ ಟಿಪ್ಪರ್ ಲಾರಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಸದ್ಯ ಅಪಘಾತದಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಈ ಸಂಬಂಧ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ಪುತ್ತೂರು: ಬಿದ್ದು ಎರಡೂ ಕಾಲುಗಳ ಮುರಿದುಕೊಂಡಿದ್ದ ಚಾಲಕನಿಗೆ 71 ಸಾವಿರ ರೂ. ನೆರವು- ಧೈರ್ಯ ತುಂಬಿದ ಡಿಎಂ KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್... ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ