NEWSನಮ್ಮಜಿಲ್ಲೆನಮ್ಮರಾಜ್ಯ

BMTC-KSRTC: ನಾಳೆ EPS ಪಿಂಚಣಿದಾರರ ಕನಿಷ್ಠ ಪಿಂಚಣಿ ₹7,500 ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್ ಪಿಂಚಣಿದಾರರ 39ನೇ ಪ್ರತಿಭಟನಾ ಸಭೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪಿಎಫ್ ಕಚೇರಿ ಆವರಣದಲ್ಲಿ ಮಾರ್ಚ್ 27 ರಂದು EPS-95, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಹಾಗೂ ಚಿಕ್ಕಬಳ್ಳಾಪುರದ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಇಪಿಎಸ್ ನಿವೃತ್ತರ ಎಲ್ಲ ಬೇಡಿಕೆಗಳಿಗೆ ಸಂಬಂಧಿಸಿದಂತೆ ಅಂದು ಶುಕ್ರವಾರ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ಪ್ರಾರಂಭಿಸಲಾಗುವುದು. ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗುವ ಈ ಶಾಂತಿಯುತ ಪ್ರತಿಭಟನೆ ಹಾಗೂ ಅಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದ ಸಚಿವರಿಗೆ ಮನವಿ ಪತ್ರ ಸಲ್ಲಿಸುವ ಸಭೆಗೆ ಎಲ್ಲ ಇಪಿಎಸ್ ನಿವೃತ್ತರು ಆಗಮಿಸಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿಕೊಂಡಿದ್ದಾರೆ.

ಇದೇ ಮಾರ್ಚ್ 2ರಂದು ದೆಹಲಿಯಲ್ಲಿ ಜರುಗಿದ 239ನೇ ಸಿಬಿಟಿ ಸಭೆಯ ವಿದ್ಯಾಮಾನಗಳನ್ನು ಈಗಾಗಲೇ ಸದಸ್ಯರ ಗಮನಕ್ಕೆ ತರಲಾಗಿದೆ. 2ನೇ ಹಂತದ ಬಜೆಟ್ ಅಧಿವೇಶನ ಇದೇ ಮಾ.9 ರಿಂದ ಪ್ರಾರಂಭವಾಗಿದ್ದು, ಏಪ್ರಿಲ್ 2ಕ್ಕೆ ಅಂತ್ಯಗೊಳ್ಳಲಿದೆ. ಈ ಅಧಿವೇಶನದ ಅವಧಿ ಇನ್ನೊಂದು ವಾರ ಮಾತ್ರ ಬಾಕಿ ಇದೆ.

ಪಿಂಚಣಿ ವಿಷಯಕ್ಕೆ ಸಂಬಂಧಿಸಿದಂತೆ, ಪಾರ್ಲಿಮೆಂಟ್ ಸದಸ್ಯರು ಕೇಳುವ ಕೆಲವೊಂದು ಪ್ರಶ್ನೆಗಳಿಗೆ, ಕೇಂದ್ರ ಸರ್ಕಾರದ ಉದ್ಯೋಗ ಹಾಗೂ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಅಧಿವೇಶನದಲ್ಲಿ ಲಿಖಿತ ಉತ್ತರವನ್ನು ಓದುವುದನ್ನು ಬಿಟ್ಟರೆ, ಯಾವುದೇ ನಿರೀಕ್ಷಿತ ಫಲಿತಾಂಶ ಕಂಡುಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಪಿಎಸ್ ಪಿಂಚಣಿದಾರರ ಕನಿಷ್ಠ ಪಿಂಚಣಿ ಮೊತ್ತವನ್ನು ಈಗಿರುವ 1,000 ರೂ.ಗಳಿಂದ 7,500 ರೂ.ಗಳಿಗೆ ಹೆಚ್ಚಳ ಮಾಡಬೇಕೆಂದು ಬಸವರಾಜ ಬೊಮ್ಮಾಯಿ ನೇತೃತ್ವದ ಸಂಸದೀಯ ಸ್ಥಾಯಿ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಇದು ಒಂದು ಭಾಗ. ಇತ್ತೀಚೆಗೆ ಭಾರತಿಯ ಮಾಜ್ಡೂರ್ ಸಂಘದ (ಬಿಎಂಎಸ್) ಪದಾಧಿಕಾರಿಗಳು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಮುನ್ಸೂಖ್ ಮಾಂಡವಿಯ ಅವರನ್ನು ದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿ, ಕನಿಷ್ಠ ಹೆಚ್ಚುವರಿ ಪಿಂಚಣಿ ಮೊತ್ತವನ್ನು ಕೂಡಲೇ 7,500 ರೂ.ಗೆ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಇನ್ನು ಇವೆಲ್ಲವೂ ಸಕಾರಾತ್ಮಕ ಬೆಳವಣಿಗೆಯಾಗಿದ್ದು, ಯಾರು ಸಹ ನಿರಾಶರಾಗುವುದು ಬೇಡ. ನಾವೆಲ್ಲರೂ ಪ್ರಭುದ್ಧ ಇಪಿಎಸ್ ಪಿಂಚಣಿತಾರರು, ಮುಂದಿನ ದಿನಗಳಲ್ಲಿ ನಮ್ಮ ಶಕ್ತಿ ಪ್ರದರ್ಶನ ನಡೆಯದಿದ್ದು, ನಾವ್ಯಾರು ಮುಗ್ಧ ಮತದಾರರಲ್ಲ ಎಂದು ತೋರಿಸುತ್ತೇವೆ ಎಂದು ಹೇಳಿದ್ದಾರೆ.

ಇತ್ತ ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಕವಿದಿದೆ. ಆದರ, ಇದಕ್ಕೂ ಇಪಿಎಸ್ ಪಿಂಚಣಿದಾರರ ಬೇಡಿಕೆಗಳಿಗೂ ಯಾವ ಸಂಬಂಧವೂ ಇಲ್ಲ. ಕೇಂದ್ರ ಸರ್ಕಾರಕ್ಕೆ ತನ್ನ ಇಚ್ಛಾಶಕ್ತಿಯ ಕೊರತೆ ಇದೆ. ಇಪಿಎಫ್ಒ ಅಧಿಕಾರಿಗಳ ನಡೆ ಕಾರ್ಮಿಕ ವಿರೋಧಿ ನೀತಿಯಾಗಿದ್ದು, ಅತ್ಯಂತ ಖಂಡನೀಯ, ಹಾಗಾಗಿ, ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ದೃಷ್ಟಿಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನಾಲ್ಕು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜತೆ ನಮ್ಮ ಸಂಘಟನೆಯೂ ಸಹ ಒಡಂಬಡಿಕೆ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇಪಿಎಸ್ ನಿವೃತ್ತರ ಪಿಂಚಣಿ ಬೇಡಿಕೆಗಳು ಸೇರಿದಂತೆ, ರಾಜ್ಯ ಸರ್ಕಾರದಿಂದ ಸಂಸ್ಥೆಯ ನೌಕರರಿಗೆ ಬರಬೇಕಾದ ಬಾಕಿ ವೇತನ ಮೊತ್ತ, ವೇತನ ಪರಿಷ್ಕರಣೆ ಸಂಬಂಧಿತ (01/01/2024 ರಿಂದ ಕೈಗಾರಿಕಾ ಒಪ್ಪಂದ) ಹೋರಾಟವನ್ನು ಜಂಟಿಯಾಗಿ ನಡೆಸಲು ನಿರ್ಧರಿಸಲಾಗಿದೆ. ನಿವೃತ್ತ ನೌಕರರು ಹಾಗೂ ಹಾಲಿ ಸೇವೆಯಲ್ಲಿರುವ ನೌಕರರು, ನಮ್ಮೆಲ್ಲರ ನೋವು ಒಂದೇ ಆಗಿದೆ.

ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್, ಚಿಕ್ಕಬಳ್ಳಾಪುರ ವತಿಯಿಂದ ಆಯೋಜಿಸಿರುವ, ಇಪಿಎಸ್ ನಿವೃತ್ತರ ಪ್ರತಿಭಟನಾ ಸಭೆ ಹಾಗೂ ಮನವಿ ಪತ್ರ ಸಲ್ಲಿಸುವುದು, ಮಾಧ್ಯಮಗಳ ಮೂಲಕ ನಮ್ಮ ಕೂಗು ದೆಹಲಿಯಲ್ಲಿ ನಡೆಯುತ್ತಿರುವ 2ನೇ ಹಂತದ ಪಾರ್ಲಿಮೆಂಟ್ ಬಜೆಟ್ ಅಧಿವೇಶನಕ್ಕೆ ತಲುಪಬೇಕು, ಹಾಗಾಗಿ ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಅಧಿಕ ಪಿಂಚಣಿ ಈ ಎರಡು ಅಂಶಗಳಿಗೆ ಸಂಬಂಧಿಸಿದಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಪ್ರತಿಭಟನೆಗೆ ಕಾರ್ಮಿಕ ಮುಖಂಡರು, ನಮ್ಮ ಸಂಘದ ಎಲ್ಲ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳು ಎಲ್ಲ ಇಪಿಎಸ್ ನಿವೃತ್ತರು, ಕಂಪನಿ ಹಾಗೂ ಕಾರ್ಖಾನೆಗಳ ನಿವೃತ್ತರು ಆಗಮಿಸಲಿದ್ದು, ಅಧಿಕಾರಿಗಳು ಮುಖಂಡರಿಗೆ ಲಿಖಿತ ರೂಪದಲ್ಲಿ ಕೊಟ್ಟ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸಲೇಬೇಕು ತಪ್ಪಿದಲ್ಲಿ ಮುಂದಿನ ಆಗು ಹೋಗುಗಳಿಗೆ ಕೇಂದ್ರ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಲಾಗುವುದು.

ಹಾಗಾಗಿ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗುವ ಈ ಪ್ರತಿಭಟನೆ ಹಾಗೂ ಅಧಿಕಾರಿಗಳ ಮೂಲಕ ಕೇಂದ್ರ ಸರ್ಕಾರದ ಸಚಿವರಿಗೆ ಮನವಿ ಪತ್ರ ಸಲ್ಲಿಸುವುದಕ್ಕೆ ಎಲ್ಲ ಇಪಿಎಸ್ ನಿವೃತ್ತರು ಆಗಮಿಸಬೇಕೆಂದು ನಂಜುಂಡೇಗೌಡ ಕಾರ್ಯಕಾರಿ ಸಮಿತಿ ಪರವಾಗಿ ವಿನಂತಿಸಿಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ನೌಕರರ ವೇತನ ಪರಿಷ್ಕರಣೆಯ ಆದೇಶದಲ್ಲೇನಿದೆ, ನೌಕರರಿಗೆ ಎಷ್ಟು ತಿಂಗಳ ಹಿಂಬಾಕಿ ಕೊಡಬೇಕು..? KSRTC: ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತನ ಹೆಚ್ಚಳ ನುಂಗಲಾರದ ತುತ್ತಾಯಿತೆ!? KSRTC: ಶೇ.12.5ರಷ್ಟು ವೇತನ ಹೆಚ್ಚಳ ಖಚಿತ, ಒಂದೆರಡು ಗಂಟೆಯಲ್ಲೇ ಅಧಿಕೃತ ಆದೇಶ ! KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ !