CrimeNEWSಸಿನಿಪಥ

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ರಾಜನ್ ವಿಧಿವಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡ ಸಿನಿಮಾ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕರಲ್ಲಿ ಒಬ್ಬರಾದ ರಾಜನ್ ಭಾನುವಾರ ರಾತ್ರಿ 11 ಗಂಟೆಯಲ್ಲಿ ವಿಧಿವಶರಾಗಿದ್ದಾರೆ.

ರಾಜನ್- ನಾಗೇಂದ್ರ ಸಹೋದರರ ಪೈಕಿ ರಾಜನ್ ಹಿರಿಯರಾಗಿದ್ದರು. 87 ವರ್ಷದ ರಾಜನ್ ಅವರು ಆರೋಗ್ಯದಿಂದಲೇ ಇದ್ದರು, ಆದರೆ ಶನಿವಾರ ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಂಡಿತು. ಭಾನುವಾರ ರಾತ್ರಿ ನಿಧನರಾದರು ಎಂದು ರಾಜನ್ ಪುತ್ರ ಅನಂತ್ ಕುಮಾರ್ ತಿಳಿಸಿದ್ದಾರೆ.

ಮೈಸೂರಿನ ಶಿವರಾಂಪೇಟೆಯ ಮಧ್ಯಮ ವರ್ಗದ ಸಂಗೀತ ಕುಟುಂಬದಲ್ಲಿ ರಾಜನ್ ಮತ್ತು ನಾಗೇಂದ್ರ ಜನಿಸಿದರು. ಅವರ ತಂದೆ ರಾಜಪ್ಪ ಹಾರ್ಮೋನಿಯಂ ಮತ್ತು ಕೊಳಲು ವಾದಕರಾಗಿದ್ದರು. ಮೂಕ ಚಲನಚಿತ್ರಗಳಿಗೆ ಅವರು ಹಿನ್ನೆಲೆ ಸಂಗೀತ ನೀಡುತ್ತಿದ್ದರು.

ರಾಜನ್ ಅವರ ಹಿರಿಯ ಸಹೋದರ ನಾಗೇಂದ್ರ 2000ನೇ ಇಸವಿಯಲ್ಲಿ ನಿಧನರಾಗಿದ್ದರು. ರಾಜನ್ ಮತ್ತು ನಾಗೇಂದ್ರ ಅವರು 1950, 1960, 1970, 1980 ಮತ್ತು 1990ರ ದಶಕದ ಮೆಲೋಡಿಕಿಂಗ್ ಎನಿಸಿಕೊಂಡಿದ್ದ ಸಂಗೀತ ಸಂಯೋಜಕರು. ಇವರಿಬ್ಬರೂ 400 ಅಧಿಕ ಚಿತ್ರಗಳಿಗೆ ಸಂಗೀತ ನಿರ್ದೇಶಕರಾಗಿದ್ದ ಈ ಜೋಡಿ ಕನ್ನಡದಲ್ಲಿಯೇ 200ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದೆ.

ಪ್ರಸಿದ್ದ ಸಾಹಿತಿಗಳಾದ ಉದಯ್ ಶಂಕರ್, ಹುಣಸೂರು ಕೃಷ್ಣಮೂರ್ತಿ, ವಿಜಯ ನಾರಸಿಂಹ, ಗೀತಪ್ರಿಯ, ಗಾಯಕರಾದ ಘಂಟಶಾಲಾ, ವಾಣಿ ಜಯರಾಮ್, ಪಿ.ಬಿ ಶ್ರೀನಿವಾಸ್, ಚಿತ್ರ, ಕಿಶೋರ್ ಕುಮಾರ್, ಎಸ್ ಬಿ ಬಾಲಸುಬ್ರಮಣ್ಯಂ, ಜಾನಕಿ,ಎಲ್ ಆರ್ ಈಶ್ವರಿ ಮುಂತಾದವರರೊಂದಿಗೆ ಕೆಲಸ ಮಾಡಿದ್ದರು.

1952ರಲ್ಲಿ ಸೌಭಾಗ್ ಲಕ್ಷ್ಮಿ ಸಿನಿಮಾ ಮೂಲಕ ರಾಜನ್ -ನಾಗೇಂದ್ರ ಸ್ವತಂತ್ರ್ಯ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡರು. ನ್ಯಾಯವೇ ದೇವರು, ಗಂಧದ ಗುಡಿ, ದೇವರ ಗುಡಿ, ಭಾಗ್ಯವಂತರು, ಎರಡು ಕನಸು, ನಾ ನಿನ್ನಾ ಮರೆಯಲಾರೆ, ನಾ ನಿನ್ನಾ ಬಿಡಲಾರೆ, ಹೊಂಬಿಸಿಲು, ಬಯಲು ದಾರಿ, ಪಾವನಾ ಗಂಗಾ, ಗಿರಿ ಕನ್ಯೆ ಅಂತಹ ಚಿತ್ರಗಳಿಗೆ ರಾಜನ್-ನಾಗೇಂದ್ರ ಸಂಗೀತ ನೀಡಿದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...