NEWSದೇಶ-ವಿದೇಶ

ಚಳಿಗಾಲದಲ್ಲಿ ದುಪ್ಪಟ್ಟಾಗಲಿದೆ ಕೊರೊನಾ: ನೀತಿ ಆಯೋಗ ಆತಂಕ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಚಳಿಗಾಲದಲ್ಲಿ ಕೊರೊನಾದ ಎರಡನೇ ಅಲೆ ಆರಂಭವಾಗಲಿದ್ದು, ಈ ಮೂಲಕ ಸೋಂಕು ಹೆಚ್ಚಾಗಬಹುದು ಎಂದು ನೀತಿ ಆಯೋಗ ಆತಂಕದೊಂದಿಗೆ ಎಚ್ಚರಿಕೆ ನೀಡಿದೆ.

ಬಿಸಿಲಿನ ನಡುವೆಯೇ ತನ್ನ ಅಟ್ಟಹಾಸ ಮೆರೆದಿರುವ ಕೋವಿಡ್‌-19 ವೈರಸ್‌ ಚಳಿಗಾಲದಲ್ಲಿ ಮತ್ತಷ್ಟು ತನ್ನ ಪ್ರಭಾವ ಬೀರಲು ಸಜ್ಜಾಗುತ್ತಿದೆ ಎಂದು ತಜ್ಞ ವೈದ್ಯರು ಅಭಿಪ್ರಾಯ ಪಟ್ಟಿರುವುದಾಗಿ ತಿಳಿಸಿದೆ.

ಹೀಗಾಗಿ ಚಳಿಗಾಲದಲ್ಲಿ ಸ್ವಲ್ಪ ಯಾಮಾರಿದರೂ ದೇಹವನ್ನು ಹೊಕ್ಕಲಿದೆ. ಇನ್ನು ಚಳಿಗಾಲದಲ್ಲಿ ಶೀತ, ಕೆಮ್ಮು ಸೇರಿ ಹಲವು ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಅದರಲ್ಲೂ ವಯಸ್ಸಾದವರು ಮನೆಯಿಂದ ಹೊರ ಬಂದರೆ ಜೀವಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಿದೆ.

ಚಳಿಗಾಲದಲ್ಲಿ ಕೊರೊನಾ ವೈರಸ್ ಮಲ್ಟಿಪಲ್ ಆಗುವ ಸಾಧ್ಯತೆ ಇದೆ. ಜತೆಗೆ ಜನರು ಒಬ್ಬರ ಹತ್ತಿರ ಮತ್ತೊಬ್ಬರು ಇರುತ್ತಾರೆ. ಈ ವೇಳೆ ಸಾಮಾಜಿಕ ಅಂತರ ಕಡಿಮೆ ಆಗುತ್ತದೆ. ಹೀಗಾಗಿ ಸಾಂಕ್ರಾಮಿಕ ರೋಗಗಳು ಬಹುಬೇಗ ಹರಡುತ್ತವೆ. ಪರಿಣಾಮ ಕೊರೊನಾ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಆಗುತ್ತದೆ ಎಂದು ಡಾ. ಪೌಲ್‌ ಹೇಳಿದ್ದಾರೆ.

ರೋಗದ ಲಕ್ಷಣಗಳು ಕಾಣಿಸಿಕೊಳ್ಳುವ 2-3 ದಿನಗಳ ಮುನ್ನವೇ ಜನರು ವೈರಸ್‌ ಅನ್ನು ಹರಡಲು ಆರಂಭಿಸುತ್ತಾರೆ. ಕೆಲವು ವೈರಸ್‌ಗಳು ಅತಿಯಾದ ಉಷ್ಣಾಂಶದಲ್ಲಿ ಸಾಯುತ್ತವೆ ಆದರೆ ಕಡಿಮೆ ಉಷ್ಣಾಂಶದಲ್ಲಿ ಎರಡು ಪಟ್ಟು ಹೆಚ್ಚಾಗುತ್ತವೆ.  ಹೀಗಾಗಿ ಪ್ರತಿಯೊಬ್ಬರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ, ಗುಂಪು ಗುಂಪಾಗಿ ಓಡಾಡುವುದನ್ನು ನಿಲ್ಲಿಸಿ, ಮಾಸ್ಕ್ ಧರಿಸಿ, ಪದೇಪದೆ ಕೈ ತೊಳೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...