NEWSನಮ್ಮಜಿಲ್ಲೆನಮ್ಮರಾಜ್ಯ

ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಭತ್ಯೆ, ವೈದ್ಯಕೀಯ ಸೌಲಭ್ಯಕ್ಕೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ

ನೊಂದವರಿಗೆ ಹೆಗಲು

ಬೆಂಗಳೂರು: ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಜತೆಗೆ ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ಇಪಿಎಸ್ ನಿವೃತ್ತರಿಗೆ, ಇಪಿಎಸ್ ವ್ಯಾಪ್ತಿಯಲ್ಲಿ ಬರದ ನಿವೃತ್ತರಿಗೆ 5000 ರೂ. ಕೂಡಲೇ ನೀಡಬೇಕೆಂದು ಆಗ್ರಹಿಸಿ ಇಪಿಎಸ್ ಪಿಂಚಣಿದಾರರು ಬೃಹತ್ ಪ್ರತಿಭಟನೆ ನಡೆಸಿದರು.

ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗೂ ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತರ ಟ್ರಸ್ಟ್ ಸಂಯುಕ್ತವಾಗಿ ಮಾ.27ರ “ನಿಧಿ ಅಪ್ಕೆನಿಕಟ್” ಕಾರ್ಯಕ್ರಮದ ಅಂಗವಾಗಿ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಇಪಿಎಸ್ ಪಿಂಚಣಿದಾರರ 39ನೇ ಬೃಹತ್ ಪ್ರತಿಭಟನೆಯಲ್ಲಿ ನೂರಾರು ನಿವೃತ್ತರು ಭಾಗವಹಿಸಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳನ್ನು ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದ ಪ್ರತಿಭಟನಾಕಾರರು, ಕಚೇರಿ ಆವರಣದಲ್ಲಿ ಹರತಾಳ ನಡೆಸಿ, ಧಿಕ್ಕಾರದ ಘೋಷಣೆ ಕೂಗುತ್ತಿದ್ದದ್ದು ಮುಗಿಲು ಮುಟ್ಟಿತು. ಅಲ್ಲದೆ ಕೇಂದ್ರ ಸರ್ಕಾರ ಹಾಗೂ ಇಪಿಎಫ್ಒ ಅಧಿಕಾರಿಗಳನ್ನು ತೀವ್ರ ತಾರಾಟೆಗೆ ತೆಗೆದುಕೊಂಡರು.

ಇದುವರೆಗೂ ನಾವು ಪ್ರತಿಭಟನೆ ಮೂಲಕ 38 ಮನವಿ ಪತ್ರಗಳನ್ನು ಕೇಂದ್ರ ಸರ್ಕಾರದ ಸಚಿವರಿಗೆ ನೀಡಿದ್ದೇವೆ. ಆದರೆ ಈವರೆಗೂ ಯಾವುದೇ ಮನವಿ ಪತ್ರಕ್ಕೂ ಕೂಡ ಸೂಕ್ತ ಪ್ರತಿಕ್ರಿಯೆ ಬಂದಿಲ್ಲ. ಮಾ.9 ರಿಂದ ಎರಡನೇ ಹಂತದ ಪಾರ್ಲಿಮೆಂಟ್ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಈ ಅಧಿವೇಶನ ಮುಗಿಯುವ ಮುನ್ನ ಅಂದರೆ ಏಪ್ರಿಲ್ 2ರ ಒಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಇನ್ನು ಕೇಂದ್ರ ಸರ್ಕಾರದ ಪಾರ್ಲಿಮೆಂಟರಿ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜು ಬೊಮ್ಮಾಯಿ ನೇತೃತ್ವದ ಸಮಿತಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಇಪಿಎಸ್ ನಿವೃತ್ತರ ಕನಿಷ್ಠ ಪಿಂಚಣಿ 7,500 ರೂ. ನೀಡಬೇಕು ಎಂದು, ಭಾರತೀಯ ಮಜ್ದೂರ್ ಸಂಘದ ಮುಖಂಡರು ಇತ್ತೀಚೆಗೆ ಕೇಂದ್ರ ಕಾರ್ಮಿಕ ಸಚಿವ ಮುನ್ಸೂಖ್ ಮಾಂಡವೀಯ ಅವರನ್ನು ದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿ, ಕನಿಷ್ಠ ಪಿಂಚಣಿ 7,500 ರೂ. ನೀಡಬೇಕೆಂದು ಆಗ್ರಹಿಸಿದ್ದು, ಈ ಎಲ್ಲ ಬೆಳವಣಿಗೆಗಳನ್ನು ಪರಿಗಣಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಲೇಬೇಕು. ಒಂದು ವೇಳೆ ನಮ್ಮ ಬೇಡಿಕೆಗಳ ಈಡೇರಿಸದೆ ಇದ್ದಲ್ಲಿ, ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮದುರೈ ಉಚ್ಚ ನ್ಯಾಯಾಲಯವು 2/09/2025 ರಂದು, ಕೊಲ್ಕತ್ತಾ ಉಚ್ಚ ನ್ಯಾಯಾಲಯವು ದಿನಾಂಕ 14/11/2025 ರಂದು, ಇಪಿಎಸ್ ನಿವೃತ್ತರ ಪರ ನೀಡಿರುವ ಆದೇಶ ನಮಗೂ ಅನ್ವಯವಾಗಲಿದ್ದು, ಈ ಆದೇಶವನ್ನು ಕೂಡಲೇ ಅನುಷ್ಠಾನಗೊಳಿಸಿ, ಅಧಿಕ ಹೆಚ್ಚುವರಿ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನೂ ಜೇಮ್ ಷೇಡ್ಪುರದಲ್ಲಿರುವ M/s ಟಾಟಾ ಸ್ಟೀಲ್ ಪ್ರವೇಟ್ ಲಿಮಿಟೆಡ್ ಕಂಪನಿಯ ಇಪಿಎಸ್ ನಿವೃತ್ತರಿಗೆ ಅದರ ಟ್ರಸ್ಟ್ ರೂಲ್ಸ್ ಅನ್ವಯ ಅಧಿಕ ಪಿಂಚಣಿ ನೀಡಲು ಜಂಮ್ ಷೇಡ್ ಪುರ ಇಪಿಎಫ್ಒ ಅಧಿಕಾರಿಗಳು ಸುತ್ತೋಲೆ 11/09/2025 ರಂದು ಹೊರಡಿಸಿದ್ದು, ಈ ನಿಯಮವನ್ನು ನಮ್ಮ ನಾಲ್ಕೂ ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೂ ಸಹಾ ವಿಸ್ತರಿಸಬೇಕು.

10/10/ 2025 ರಂದು ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಇಪಿಎಸ್ ನಿವೃತ್ತರ ಪರ ಉಲ್ಲೇಖಿಸಿರುವ ಪತ್ರಕ್ಕೆ ಸಂಬಂಧಿಸಿದಂತೆ ಕೂಡಲೇ ಕ್ರಮ ಕೈಗೊಂಡು ಎಲ್ಲ ಜಂಟಿ ಆಯ್ಕೆ ಪತ್ರಗಳನ್ನು ಟ್ರಸ್ಟ್ ನಿಯಮಾವಳಿಗನ್ವಯ ಪುನರ್ ಸ್ಥಾಪಿಸಿ, ಎಲ್ಲ ಇಪಿಎಸ್ ನಿವೃತ್ತರಿಗೆ ಅಧಿಕ ಪಿಂಚಣಿ ನೀಡಬೇಕು ಎಂದು ಆಗ್ರಹಿಸಲಾಯಿತು.

ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆಯ ಸಚಿವರಾದ ಮುನ್ಸೂಕ್ ಮಾಂಡವೀಯ ಹಾಗೂ ಶೋಭಾ ಕರಂದ್ಲಾಜೆಯವರಿಗೆ ಅಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿ ಕೂಡಲೇ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಲಾಯಿತು ಎಂದು ಬಿಎಂಟಿಸಿ & ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದರು.

ಸಂಘದ ಖಜಾಂಚಿ ಡೋಲಪ್ಪನವರು ಎಲ್ಲ ಹೋರಾಟಗಾರರನ್ನು ಸ್ವಾಗತಿಸುವ ಮೂಲಕ ಪ್ರತಿಭಟನಾ ಸಭೆಗೆ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಟ್ರಸ್ಟ್ ಅಧ್ಯಕ್ಷರಾದ ಬ್ರಹ್ಮಚಾರಿ, ಸಾಮಾಜಿಕ ಕಾರ್ಯಕರ್ತರಾದ ಚಂದ್ರೇಗೌಡರು, ಶಿರಸಿ ಕೆಎಸ್ಆರ್‌ಟಿಸಿ ನಿವೃತ್ತ ನೌಕರರಾದ ನಾರಾಯಣ ರಾವ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಬಳಿಕ ಇಪಿಎಫ್‌ಒ ಅಧಿಕಾರಿಗಳು ನಮ್ಮ ಮನವಿ ಪತ್ರ ಸ್ವೀಕರಿಸಿ ಮಾತನಾಡುತ್ತಾ, ಇಂದಿನ ಪ್ರತಿಭಟನಾ ಸಭೆಯ ಸಂಪೂರ್ಣ ವಿವರಗಳನ್ನು ಕೇಂದ್ರ ಸಚಿವರ ಕಾರ್ಯಾಲಯಕ್ಕೂ ಹಾಗೂ ದೆಹಲಿಯಲ್ಲಿನ ತಮ್ಮ ಮೇಲಧಿಕಾರಿಗಳಿಗೂ ಕಳಿಸಿ ಕೊಡುವುದಾಗಿ ತಿಳಿಸಿ, ಸ್ವೀಕೃತಿ ನೀಡಿದರು.

ಸಂಘದ ಪದಾಧಿಕಾರಿಗಳಾದ ಆರ್.ರಂಗನಾಥ್, ಮನೂಹರ್ ಆರ್., ನಾಗರಾಜ, ರುಕ್ಮೇಶ್ ಹಾಗೂ ಕೃಷ್ಣಮೂರ್ತಿ ನೇತೃತ್ವ ವಹಿಸಿಕೊಂಡು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟರು. ಪ್ರತಿಭಟನೆಯಲ್ಲಿ ನೂರಾರು ನಿವೃತ್ತ ನೌಕರರು ತಮ್ಮ ಇಳಿಯ ವಯಸ್ಸಿನಲ್ಲೂ ಊರುಗೋಲಿನ ಸಹಾಯದಿಂದ ಬಂದು ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರೂ ಸರ್ಕಾರ ಅವರ ಕೂಗಿಗೆ ಸ್ಪಂದಿಸದಿರುವುದು ನಾಚಿಕೆಗೇಡಿನ ಸಂಘತಿಯಾಗಿದೆ. ಇನ್ನಾದರೂ ಈ ಮುಸ್ಸಂಜೆಯಲ್ಲಿರುವ ಇವರ ಹಕ್ಕುಗಳನ್ನು ಪೂರೈಸಬೇಕು ಎಂದು ಪ್ರಜ್ಞಾವಂತರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಛೀಮಾರಿ ಕೂಡ ಹಾಕಿದ್ದಾರೆ.

 

Deva
the authorDeva

Leave a Reply

error: Content is protected !!
Latest news
KSRTC: 'ಸಾರಿಗೆ ಮಿತ್ರ' ಆಪ್ ದುರುಪಯೋಗ- ಕರ್ತವ್ಯಕ್ಕೆ ಹಾಜರಾಗದೆ ಸಹೋದ್ಯೋಗಿಗೆ ಫೋನ್‌ ಕೊಟ್ಟು ಹಾಜರಿ ಪಡೆಯುತ್ತಿರುವ... ಸಾರಿಗೆ ನೌಕರರಿಗೆ ಸಮಾನ ವೇತನ ಸೇರಿದಂತೆ 3 ಬೇಡಿಕೆಗಳ ಈಡೇರಿಕೆಗೆ ಕೂಟ ಒತ್ತಾಯ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್‌ಗೆ ಮ... ಗುಟ್ಕಾ ಉಗಿಯಲು ಬಗ್ಗಿದ ವಿದ್ಯಾರ್ಥಿ ತಲೆಗೆ ಬಡಿದ ಟಿಪ್ಪರ್: ಕ್ಷಣಾರ್ಧದಲ್ಲೇ ರುಂಡ ಕಟ್‌, ಬಸ್ಸಿನಲ್ಲಿ ನೇತಾಡಿದ ಮುಂಡ... KSRTC: ನೌಕರರ ಹೆಚ್ಚಳದ ಶೇ.12.5ರಷ್ಟು ವೇತನ ಜುಲೈ ಅಂದರೆ ಈ ತಿಂಗಳ ವೇತನದಲ್ಲಿ ಅನುಷ್ಠಾನ- ಆಗಸ್ಟ್‌ನಲ್ಲಿ ಎಲ್ಲರ ಖಾತ... NWKRTC: ವಿದ್ಯಾರ್ಥಿಗಳ ಮನವಿ ಪರಿಗಣಿಸಿ ನೂತನ ಬಸ್ ಸೇವೆಗೆ ಚಾಲನೆ- ನಿಗಮದ ಉಪಾಧ್ಯಕ್ಷ ಸುನೀಲ್ ಜೆ. ಹಣಮನ್ನವರ ಇಂದಿನಿಂದ ಎರಡು ತಿಂಗಳ ಕಾಲ: ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ಮಾಹಿತಿ ಸಂಗ್ರಹಕ್ಕೆ ಬರಲಿದ್ದಾರೆ ಇಲಾಖಾ ಸಿಬ್ಬಂದಿ KSRTC: 50 ಹೊಸ ಬಸ್ ನೀಡಿ ಜತೆಗೆ ಆರ್‌ಟಿಒ ಕಚೇರಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿ: ಸಾರಿಗೆ ಸಚಿವರಿಗೆ ರಾಜಣ್ಣ ಮ... ದಂಪತಿಗಳ ಏಕಾಂತದಿಂದ ಕಾಂತಿಯುತ ತ್ವಚೆ, ಯುವಕರಾಗಿಡುವ ಮೋಡಿ ಅಡಗಿದೆ! ಇಂದು ಸಾರಿಗೆ ನೌಕರರ ವೇತನ ಸಂಬಂಧ ಕರೆದಿದ್ದ ರಾಜೀ ಸಂಧಾನ ಸಭೆ ಮತ್ತೆ ವಿಫಲ! 2028ರ ವೇಳೆಗೆ ಮಾದಕ ವಸ್ತು- ನಶೆ ಮುಕ್ತ ಕರ್ನಾಟಕವೇ ನಮ್ಮ ಗುರಿ: ಸಿಎಂ ಡಿಕೆಶಿ