NEWSನಮ್ಮಜಿಲ್ಲೆರಾಜಕೀಯ

ಎಫ್‌ಐಆರ್‌ಗೆ ಹೆದರಲ್ಲ: ಪೊಲೀಸ್‌ ಠಾಣೆಗೂ ಹೋಗಲ್ಲ, ಬೇಲ್‌ಕೂಡ ಪಡೆಯಲ್ಲ: ಡಿಕೆಶಿ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯ ಕಣದಲ್ಲಿರುವ ನಮ್ಮ ಅಭ್ಯರ್ಥಿ ಹೆಣ್ಣು ಮಗಳ ಮೇಲೆ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್‍ಐಆರ್ ಆಗಿದೆ. ಈ ಎಫ್ಐಆರ್‌ಗೆ ನಾವು ಬೇಲ್ ಪಡೆಯಲ್ಲ, ಸ್ಟೇಷನ್‍ಗೂ ಹೋಗಲ್ಲ. ಇದಕ್ಕೆ ನಾವು ಹೆದರೋ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ  ಗುರುವಾರ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಇಷ್ಟು ನೀಚವಾದ ರಾಜಕಾರಣ ನಾನು ಯಾವತ್ತೂ ನೋಡಿಲ್ಲ. ಕಾಂಗ್ರೆಸ್ ಪಕ್ಷದ ವಿದ್ಯಾವಂತ ಹೆಣ್ಣುಮಗಳು ಕಾನೂನು ಅರಿವಿರುವ ಹಾಗೂ ನೊಂದು-ಬೆಂದಿರುವ ಹೆಣ್ಣು ಮಗಳನ್ನು ನಾವು ಅಭ್ಯರ್ಥಿ ಮಾಡಿದ್ದೇವೆ ಎಂದರು.

ನೂರು ಮೀಟರ್ ಒಳಗೆ ಶಾಸಕರು ಸಚಿವರು ಇದ್ದರಲ್ಲ ಅವರ ಮೇಲೆ ಯಾಕೆ ಕೇಸು ಹಾಕಿಲ್ಲ? ಬಿಜೆಪಿಯವರು ಜನತಾ ದಳದವರು ಯಾರು ಬರಲಿಲ್ವ? ಅವರ ಮೇಲೆ ಯಾಕೆ ಎಫ್‍ಐಆರ್ ಹಾಕಲಿಲ್ಲ?. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ. ಹೆಣ್ಣು ಮಗಳ ಮೇಲಿನ ಶೋಷಣೆಯನ್ನು ಎದುರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ಸಂದರ್ಭದಲ್ಲಿ ಆರ್‌ಎಸ್‌‌ಎಸ್ ಕಾರ್ಯಕರ್ತನ ವಿರುದ್ಧ ಆನೇಕಲ್ ಸೇರಿ ಮೂರು ಕಡೆ ಕೇಸಾಗಿದೆ. ನಮ್ಮ  ಅಭ್ಯರ್ಥಿ ಹೆಣ್ಣು ಮಗಳ ಮೇಲೆ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್‍ಐಆರ್ ಆಗಿದೆ. ಅದೇಕೆ ಸಿದ್ದರಾಮಯ್ಯ ಮೇಲೆ ಎಫ್‍ಐಆರ್ ಹಾಕ್ರಿ. ಅಲ್ಲಿದ್ದ ಪೊಲೀಸರ ಮೇಲೆ ಹಾಕ್ರಿ, ಹೆಣ್ಣುಮಗಳ ಮೇಲೆ ಕೇಸು ಹಾಕಿ ಹೆದರಿಸಲು ಹೊರಟಿದ್ದೀರಾ? ನಾಮಪತ್ರ ಹಾಕಲು ಬಂದ ಅಭ್ಯರ್ಥಿ ಮೇಲೆ ಕೇಸು ಹಾಕುವಂತ ಸಣ್ಣ ಹಾಗೂ ನೀಚತನದ ರಾಜಕಾರಣ ಇನ್ನೊಂದಿಲ್ಲ. ಇದಕ್ಕೆ ಪೊಲೀಸರು ಹಾಗೂ ಸರ್ಕಾರವೇ ನೇರ ಕಾರಣ ಎಂದು ಕಿಡಿಕಾರಿದರು.

1,100 ಕೇಸು ಬಿಜೆಪಿ ಕಾರ್ಯಕರ್ತರ ಮೇಲಿದೆ. ಕಾಂಗ್ರೆಸ್ಸಿಗರ ಮೇಲೆ 400ಕ್ಕೂ ಹೆಚ್ಚು ಕೇಸು ಹಾಕಿದ್ದಾರೆ. 3 ಜನ ಹೆಣ್ಣು ಮಕ್ಕಳು ಕಾರ್ಪೊರೇಟರ್‌ಗಳ ಮೇಲೆ ದೌರ್ಜನ್ಯವಾಗಿದೆ. ಆಗ ನಾವು ಅಸಾಹಯಕರಾಗಿ ಇದ್ದೆವು. ಜೆಡಿಎಸ್ ಮೇಲೆ ಆರ್‌ಆರ್ ನಗರದಲ್ಲಿ 200ಕ್ಕೂ ಹೆಚ್ಚು ಕೇಸುಗಳಾಗಿವೆ. ಪೊಲೀಸರನ್ನು ಹಾಗೂ ಬಿಬಿಎಂಪಿ ಅಧಿಕಾರಿಗಳನ್ನು ವಶದಲ್ಲಿ ಇಟ್ಟುಕೊಂಡು ಈ ರೀತಿ ಮಾಡಲಾಗಿದೆ ಎಂದು ಡಿಕೆಶಿ ಗಂಭೀರ ಆರೋಪ ಮಾಡಿರುವ ಡಿಕೆಶಿ ನಾವು ಸಮಯ ತೆಗೆದುಕೊಂಡೇ ನಾಮಪತ್ರ ಸಲ್ಲಿಸಲು ಹೋಗಿದ್ದೆವು. ನಾಮಿನೇಷನ್ ಫೈಲ್ ಮಾಡಿದ್ದೇವೆ ಎಂದು ಹೇಳಿದರು.

ಆ ಅಭ್ಯರ್ಥಿಯನ್ನೂ ನಾವೇ ಬೆಳೆಸಿದ್ದು. ನಾವು ಬೆಳೆಸಿ ತಪ್ಪು ಮಾಡಿದ್ದೇವೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ದವೂ ಕಿಡಿಕಾರಿದ್ದಾರೆ. ಇನ್ನು ಎಫ್‍ಐಆರ್ ಹಾಕಿದ ಇನ್ಸ್ ಪೆಕ್ಟರನ್ನು ವರ್ಗಾವಣೆ ಮಾಡಬೇಕು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಆಗ್ರಹಿಸಿದ್ದಾರೆ.

ಎಫ್‌ಐಆರ್‌ ಹಾಕಿದ್ದು ಏತಕ್ಕೆ?
ಬುಧವಾರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದರು, ನೀತಿ ಸಂಹಿತೆ ಉಲ್ಲಂಘನೆ ಮಾಡಿದರು ಎಂಬ ಆರೋಪದ ಮೇಲೆ ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯ ಕಣದಲ್ಲಿರುವ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ವಿರುದ್ದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ