CRIMENEWSನಮ್ಮರಾಜ್ಯ

ಬಟ್ಟೆ ಬ್ಯಾಗ್‌ ಖರೀದಿ ಅವ್ಯವಹಾರ ಪ್ರಕರಣ: ರೋಹಿಣಿ ಸಿಂಧೂರಿಗೆ ಸಂಕಷ್ಟ

ನೊಂದವರಿಗೆ ಹೆಗಲು
  • ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಿದ್ದು, ಬಟ್ಟೆ ಬ್ಯಾಗ್‌  ಖರೀದಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ವೇಳೆ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‌  ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಎಫ್‌ಐಆರ್ ದಾಖಲು ಮಾಡಲು ಮನವಿ ಮಾಡಲಾಗಿತ್ತು. ಆದರೆ, ಪೂರ್ವಾನುಮತಿ ನೀಡಲು ಸರ್ಕಾರ ನಿರಾಕರಿಸಿತ್ತು.

ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ವಕೀಲ ರವಿಚಂದ್ರೇಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ಆದೇಶ ನೀಡಿದೆ. ಭ್ರಷ್ಟಾಚಾರ ಆರೋಪ ಬಂದಾಗ ತನಿಖೆ ಅನಿವಾರ್ಯ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದು, 4 ವಾರದ ಒಳಗೆ ಪೂರ್ವಾನುಮತಿ ನೀಡಲು ಸೂಚನೆ ನೀಡಿದ್ದಾರೆ.

ಏನಿದು ಆರೋಪ?: ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ರೋಹಿಣಿ ಸಿಂಧೂರಿ, ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಮುಕ್ತ ವಾತಾವರಣ ನಿರ್ಮಿಸಬೇಕು ಮತ್ತು ಪ್ಲಾಸ್ಟಿಕ್ ಬಳಕೆಗೆ ಗುಡ್‌ಬೈ ಹೇಳಿ ಬಟ್ಟೆ ಬ್ಯಾಗ್‌ ಗಳನ್ನು ಬಳಸಬೇಕು ಎಂದು ಜಿಲ್ಲೆಯ ನಗರ, ಗ್ರಾಮಾಂತರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಿದ್ದರು.

ಮುಕ್ತ ಮಾರುಕಟ್ಟೆಯಲ್ಲಿ ಪ್ರತಿ  ಬಟ್ಟೆ ಬ್ಯಾಗ್‌ಗೆ  13 ರೂ. ಇದ್ದರೆ ಅವುಗಳಿಗೆ ಪ್ರತಿ ಬ್ಯಾಗ್‌ಗೆ  52 ರೂ. ದರ ನೀಡಿ ಖರೀದಿಸಲಾಗಿದೆ. ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ 7,65,15,816 ಕೋಟಿ ರೂ. ನಷ್ಟವಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರಯೋಜನ ನೀಡುವ ಉದ್ದೇಶದಿಂದ ಕಲ್ಯಾಣ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಈ ಬಟ್ಟೆ ಬ್ಯಾಗ್‌ ಗಳ ಖರೀದಿಗೆ ಬಳಸಿ ಭ್ರಷ್ಟಾಚಾರ ಎಸಗಲಾಗಿದೆ.

ನಗರಸಭೆ, ಪುರಸಭೆಗಳ ಪೂರ್ವಾನುಮತಿ ಇಲ್ಲದೆ ದುಬಾರಿ ಬೆಲೆಗೆ ಬ್ಯಾಗ್ ಖರೀದಿಸಲಾಗಿದೆ. ಈ ಅಕ್ರಮಕ್ಕೆ ಸಂಬಂಧಿಸಿದಂತೆ 2021ರ ಅಕ್ಟೋಬರ್ 13ರಂದು ಮೈಸೂರು ಜಿಲ್ಲಾ ಭ್ರಷ್ಟಚಾರ ನಿಗ್ರಹ ದಳಕ್ಕೆ (ಎಸಿಬಿ) ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ನಡೆಸಬೇಕೆಂದು ಎನ್‌.ಆರ್.ರವಿಚಂದ್ರೇಗೌಡ ದೂರು ನೀಡಿದ್ದರು.

Megha
the authorMegha

Leave a Reply

error: Content is protected !!
Latest news
ಅಭ್ಯರ್ಥಿಗಳಿಗೆ ನಿರಾಳ: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ಜು.8ರ ವರೆಗೆ ವಿಸ್ತರಣೆ! ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ 5ಮಂದಿ ಸಾವು, ನಲುಗಿದ ಜನತೆ, ಸಮುದ್ರದಂತೆ ಕಂಡುಬಂದ ರಸ್ತೆಗಳು BMTC: ಜುಲೈ 6ರಂದು ನೌಕರರ Pay fixation ಸಂಬಂಧ ಕೇಂದ್ರ ಕಚೇರಿಯಲ್ಲಿ ಸಭೆ ನಿಗದಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದ ಸಿಎಂಗೆ KPTCL ನೌಕರರಿಂದ ಸನ್ಮಾನ SIRಗೆ ತೆರಳುತ್ತಿದ್ದ VAO ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ: ಗ್ರಾಮಾಡಳಿತ ಲೆಕ್ಕಾಧಿಕಾರಿ ಸ್ಥಿತಿ ಗಂಭೀರ- ಆಸ್ಪತ್ರೆ ... KSRTC: ನಾಲ್ಕೂ ನಿಗಮಗಳ ಬಸ್‌ ಕಿಟಕಿಗಳಿಗೆ ರಾಡ್‌ ಅಳವಡಿಸಿ: ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಮೋಹನ್ ಕುಮಾರ್ ದಾನಪ... BMTC: ಕೆ.ಆರ್.ಸರ್ಕಲ್ ಬಳಿ ಹಿಂದಿನಿಂದ ವಜ್ರ ಬಸ್‌ಗೆ ಡಿಕ್ಕಿ ಹೊಡೆದ ಎಲೆಕ್ಟ್ರಿಕ್‌ ಬಸ್‌: 14ಕ್ಕೂ ಹೆಚ್ಚು ಮಂದಿಗೆ ಗ... ಬೆಂಗಳೂರು: ಕ್ಷಣಾರ್ಧದಲ್ಲಿ ಹೊತ್ತಿಉರಿದ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌: ಅದೃಷ್ಟವಶಾತ್‌ ಪ್ರಯಾಣಿಕರು ಪಾರು ಗೃಹ ಜ್ಯೋತಿಗೆ ಜಾತಿ ವಿವರ ನೀಡುವುದು ಕಡ್ಡಾಯವಲ್ಲ: ಸ್ಪಷ್ಟನೆ ನೀಡಿದ ಬೆಸ್ಕಾಂ 4ಸಾರಿಗೆ ನಿಗಮಗಳ ನೌಕರರಿಗೆ ಶೇ.12.5ರಷ್ಟು ಮೂಲ ವೇತನ ಹೆಚ್ಚಳ ಜುಲೈ ವೇತನದಲ್ಲಿ ಅನುಷ್ಠಾನ: KSRTC ಎಂಡಿ ಅಧಿಕೃತ ಆದೇಶ